DK Shivakumar: ರಾಜ್ಯದಲ್ಲಿ ಪಾನ್ ಮಸಾಲಾ - ಗುಟ್ಕಾದಲ್ಲಿ ಮತ್ತೇರಿಸುವ ವಸ್ತು ಬಳಕೆ: ಸಿಎಂ ಡಿಕೆಶಿ ಎಚ್ಚರಿಕೆ

DK Shivakumar: ಕರ್ನಾಟಕದ ವಿವಿಧ ಪ್ರದೇಶಗಲ್ಲಿ ಪಾನ್ ಮಸಾಲಾ - ಗುಟ್ಕಾದಲ್ಲಿ ಮತ್ತೇರಿಸುವ ವಸ್ತು ಅಥವಾ ಅಮಲು ಬರುವುದಕ್ಕೆ ಕೆಲವೊಂದು ವಸ್ತುಗಳನ್ನು ಬಳಕೆ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಈ ವಿಚಾರದಲ್ಲಿ ಗಂಭೀರ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

ವ್ಯಸನ ಮಸಣಕ್ಕೆ ದಾರಿಯಾಗುವ ಮುನ್ನ ಎಚ್ಚರವಿರಲಿ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನ ಹಾಗೂ 'ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ'ದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 'ನಶಾ ಮುಕ್ತ ಭಾರತ ಅಭಿಯಾನ'ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

DK Shivakumar

ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಪಾನ್ ಮಸಾಲಾ, ಗುಟ್ಕಾ ಹಾಗೂ ಅಡಿಕೆ ಪದಾರ್ಥಗಳಲ್ಲಿ ಸ್ವಲ್ಪ ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇದು ತಕ್ಷಣವೇ ನಿಲ್ಲದಿದ್ದರೆ ರಾಜ್ಯದಲ್ಲಿ ಎಲ್ಲಾ ರೀತಿಯ ಪಾನ್ ಮಸಾಲಾ ಹಾಗೂ ಗುಟ್ಕಾಗಳನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಈ ವೇದಿಕೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ. ವ್ಯಸನಮುಕ್ತ ನಾಳಿನ ಸುಂದರ ಕನಸನ್ನು ನನಸಾಗಿಸಲು ಶಿಕ್ಷಣ ಸಂಸ್ಥೆಗಳು, ಪೋಷಕರು ಮತ್ತು ನಾಗರಿಕರು ಒಟ್ಟಾಗಿ ಮುನ್ನಡೆಯಬೇಕಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಕಿಂಚಿತ್ ಅಮಲು ಪದಾರ್ಥ ಬೆರಕೆ ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಾನ್ ಮಸಾಲಾ, ಗುಟ್ಕಾ, ಅಡಿಕೆ ಮತ್ತಿತರ ಪದಾರ್ಥಗಳಲ್ಲಿ ಅಮಲು ಬರುವ ವಸ್ತುಗಳನ್ನು ಬೆರಕೆ ಮಾಡಿ ಮಾರಾಟ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ನಿಜವೇ ಆಗಿದ್ದರೆ, ತಕ್ಷಣ ನಿಲ್ಲದಿದ್ದರೆ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಪದಾರ್ಥಗಳ ಮಾರಾಟವನ್ನು ಕರ್ನಾಟಕದಲ್ಲಿ ನಿಷೇಧ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮಾದಕದ್ರವ್ಯ ಮುಕ್ತ ಕರ್ನಾಟಕ ರೂಪಿಸುವುದು ನಮ್ಮ ಗುರಿ. ಅದಕ್ಕಾಗಿ ನಾವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. ಇಂದು ನೀವೆಲ್ಲರೂ ಸೇರಿ ನಶೆ ಮುಕ್ತ ಭಾರತ ಸಮಾವೇಶ ಹಮ್ಮಿಕೊಂಡಿರುವುದನ್ನು ನಾನು ಸ್ವಾಗತಿಸುತ್ತೇನೆ. ನೀವೆಲ್ಲರೂ ಇದರ ರಾಯಭಾರಿಗಳು. ಮಾದಕ ವ್ಯಸನ ತಡೆಯುವಿಕೆ ದೊಡ್ಡ ಸವಾಲಾಗಿದ್ದು, ನಾವೆಲ್ಲರೂ ಒಂದಾಗಿ ಸೇರಿ, ಯುವ ಪೀಳಿಗೆ ಈ ವ್ಯಸನದ ಸುಳಿಗೆ ಸಿಲುಕದಂತೆ ತಡೆಯೋಣ. ಇದು ಎಲ್ಲರ ಕರ್ತವ್ಯವಾಗಿದೆ. ನೀವು ಜೀವ ರಕ್ಷಣೆಯ ವೃತ್ತಿ ಆಯ್ಕೆ ಮಾಡಿಕೊಂಡಿದ್ದು, ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕರ್ನಾಟಕ ದೇಶದ ವೈದ್ಯಕೀಯ ರಾಜಧಾನಿ

ವೈದ್ಯಕೀಯ ಶಿಕ್ಷಣ ಎಲ್ಲರಿಗೂ ಸಿಗುವಂತೆ ಆಗಬೇಕು. ಬೆಂಗಳೂರಿನ ಹವಾಮಾನ ದೇಶದ ಬೇರೆ ಯಾವುದೇ ಭಾಗದಲ್ಲಿ ಇಲ್ಲ. ಹೀಗಾಗಿ ಇದನ್ನು ಹವಾನಿಯಂತ್ರಿತ ನಗರ ಎಂದು ಕರೆಯುತ್ತಾರೆ. ಕರ್ನಾಟಕದಲ್ಲಿ ಇರುವಷ್ಟು ಆಸ್ಪತ್ರೆ ಬೇರೆ ಯಾವ ರಾಜ್ಯದಲ್ಲೂ ಇಲ್ಲ. ಕರ್ನಾಟಕ ದೇಶದಲ್ಲಿ ವೈದ್ಯಕೀಯ ರಾಜಧಾನಿಯೂ ಆಗಿದೆ. ಈ ವಿವಿ ಬೆಂಗಳೂರು ದಕ್ಷಿಣ ಜಿಲ್ಲೆಯ ನೂತನ ಕ್ಯಾಂಪಸ್‌ಗೆ ಸ್ಥಳಾಂತರವಾಗಲಿದೆ ಎಂದು ಹೇಳಿದರು.

ಬೆಂಗಳೂರಿನ ಹಸಿರು ಅಭಿಯಾನಕ್ಕೆ ಜಾಗತಿಕ ಗಿನ್ನಿಸ್ ಮನ್ನಣೆ!

ಇನ್ನು ಜೂನ್ 27ರಂದು ಕೆಂಪೇಗೌಡ ಜಯಂತಿಯ ಕಾರ್ಯಕ್ರಮ ಸಂದರ್ಭದಲ್ಲಿ ನಡೆದ ಬೃಹತ್ ಹಸಿರು ಅಭಿಯಾನದಲ್ಲಿ, "ಅತಿ ಕಡಿಮೆ ಅವಧಿಯಲ್ಲಿ (12 ಗಂಟೆಗಳಲ್ಲಿ) ವಿವಿಧ ಸ್ಥಳಗಳಲ್ಲಿ ತಂಡವೊಂದರಿಂದ ಅತಿ ಹೆಚ್ಚು ಸಸಿಗಳನ್ನು ನೆಟ್ಟ" ಐತಿಹಾಸಿಕ ಸಾಧನೆಗಾಗಿ ಜಾಗತಿಕ ಮನ್ನಣೆಯ 'ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್' ಪ್ರಮಾಣಪತ್ರವನ್ನು ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಅವರೊಂದಿಗೆ ಡಿ.ಕೆ ಶಿವಕುಮಾರ್ ಅವರು ಸ್ವೀಕರಿಸಿದ್ದಾರೆ.

ಬಿಡಿಎ ಹಾಗೂ 50,000ಕ್ಕೂ ಹೆಚ್ಚು ಪರಿಸರ ಪ್ರೇಮಿಗಳ ಸಂಕಲ್ಪಕ್ಕೆ ಸಂದ ಜಯ ಇದು. ಈ ಐತಿಹಾಸಿಕ ಮಹತ್ಕಾರ್ಯದಲ್ಲಿ ಹಗಲಿರುಳು ಶ್ರಮಿಸಿದ ಪ್ರತಿಯೊಬ್ಬ ಅಧಿಕಾರಿಗಳಿಗೆ, ಸಿಬ್ಬಂದಿಗೆ ಹಾಗೂ ಕೈಜೋಡಿಸಿದ ಪ್ರತಿಯೊಬ್ಬ ನಾಗರಿಕರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು. ನಮ್ಮ ಬೆಂಗಳೂರು ಸದಾ ಹಸಿರಾಗಿರಲಿ, ಉಸಿರಾಗಿರಲಿ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶುಭಕೋರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+