ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇವೇಗೌಡರಿಂದಲೇ ಜೆಡಿಎಸ್ ಉಳಿದಿದೆ: ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಜೂನ್ 7: ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರಿಂದಾಗಿಯೇ ಪಕ್ಷ ಉಳಿದುಕೊಂಡಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಈ ವಯಸ್ಸಿನಲ್ಲಿ ಮತ್ತೆ ಪಕ್ಷ ಕಟ್ಟುತ್ತೇನೆ ಅಂತ ಅವರು ಹೊರಟಿದ್ದಾರೆ. ದೇವೇಗೌಡರ ಶ್ರಮದಿಂದಲೇ ಜೆಡಿಎಸ್ ಉಳಿದಿದೆ. ಅವರಲ್ಲಿರುವ ಉತ್ಸಾಹ ಯಾವ ಯುವಕರಲ್ಲಿಯೂ ಕಾಣಿಸಲಾರದು ಎಂದು ಹೇಳಿದರು.

ಮಗನ ಹೇಳಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟೀಕರಣ ಮಗನ ಹೇಳಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟೀಕರಣ

ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಈ ವಯಸ್ಸಿನಲ್ಲಿಯೂ ದೇವೇಗೌಡರು ಪಕ್ಷ ಕಟ್ಟುತ್ತೇನೆ ಎಂದು ಪಣ ತೊಟ್ಟಿದ್ದಾರೆ. ದೇವೇಗೌಡರ ಆತ್ಮವಿಶ್ವಾಸ ಯುವಕರಲ್ಲಿ ಕಾಣುವುದಿಲ್ಲ ಎಂದರು.

CM HD Kumaraswamy said JDS survived only because of HD Deve gowda

ಮುಸ್ಲಿಮರು ಈ ಬಾರಿ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದರೆ ಬಿಜೆಪಿ 104 ಸ್ಥಾನಗಳಲ್ಲಿ ಗೆಲ್ಲುತ್ತಿರಲಿಲ್ಲ. ನಾವು ಕನಿಷ್ಠ 65-70 ಸ್ಥಾನ ಗೆಲ್ಲುತ್ತೇವೆ ಎಂದು ಅಂದುಕೊಂಡಿದ್ದೆವು. ಆದರೆ, ಕೇವಲ 37 ಸೀಟುಗಳಲ್ಲಿ ಗೆಲ್ಲುವ ವಾತಾವರಣ ಬಂತು ಎಂದು ಹೇಳಿದರು.

ಅಲ್ಪಸಂಖ್ಯಾತರನ್ನು ತಪ್ಪು ದಾರಿಗೆ ಎಳೆದು ನಮ್ಮ ವಿರುದ್ಧ ಅಪಪ್ರಚಾರ ಮಾಡಲಾಯಿತು. ಜೆಡಿಎಸ್‌ನವರು ಗೆದ್ದರೆ ಬಿಜೆಪಿಗೆ ಹೋಗುತ್ತಾರೆ ಎಂದು ಬಿಂಬಿಸಲಾಯಿತು ಎಂದು ಅವರು ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು.

ದೇವೇಗೌಡ ಸೋಲಿನ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು? ದೇವೇಗೌಡ ಸೋಲಿನ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಈ ಬಾರಿಯ ಗ್ರಾಮ ವಾಸ್ತವ್ಯ ಹೇಗಿರುತ್ತದೆ ಅನ್ನೋದನ್ನು ನೋಡಿ. ಈ ಬಾರಿ ಮಧ್ಯರಾತ್ರಿ ಭೇಟಿ ನೀಡುವುದಿಲ್ಲ. ಬೆಳಿಗ್ಗೆ ಬರುತ್ತೇನೆ. ಬೆಳಿಗ್ಗೆ 10 ಗಂಟೆಗೆ ಪಂಚಾಯಿತಿಗೆ ಭೇಟಿ ನೀಡುತ್ತೇನೆ. ಅಂದು ಇಡೀ ಜಿಲ್ಲೆಯ ಅಧಿಕಾರಿಗಳು ಸ್ಥಳದಲ್ಲಿಯೇ ಇರುತ್ತಾರೆ. ಈ ಬಾರಿಯ ಗ್ರಾಮ ವಾಸ್ತವ್ಯ ವಿಭಿನ್ನವಾಗಿರುತ್ತದೆ. ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದರು.

English summary
Chief Minister HD Kumaraswamy said that, JDS party is still survived only by HD Devegowda's hard work. Even youth doesn't have confidence like he has.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X