ವೈಟ್ ಫೀಲ್ಡ್ ನಲ್ಲಿ ವಿಭಾಗೀಯ ಉಪ ಆಯುಕ್ತರ ಕಚೇರಿ
ಬೆಂಗಳೂರು, ಮೇ 5: ನಗರದ ವೈಟ್‍ಫೀಲ್ಡ್ ನಲ್ಲಿ ನೂತನವಾಗಿ ನಿರ್ಮಿಸಿರುವ ವೈಟ್‍ಫೀಲ್ಡ್ ಪೊಲೀಸ್ ಠಾಣೆ ಮತ್ತು ಉಪ ಪೊಲೀಸ್ ಆಯುಕ್ತರ ಕಚೇರಿ ಉದ್ಫಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ 5ರಂದು ಉದ್ಘಾಟಿಸಿದರು.
ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ. ಸದಾನಂದ ಗೌಡ ಹಾಗೂ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಗೃಹ ಸಚಿವರು ಪಾಲ್ಗೊಂಡಿದ್ದರು.

ಬೆಂಗಳೂರು ನಗರಾಭಿವೃದ್ಧಿ ಮತ್ತು ಯೋಜನಾ ಸಚಿವರು ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕೆ.ಜೆ. ಜಾರ್ಜ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಲೋಕೋಪಯೋಗಿ ಸಚಿವ ಹೆಚ್.ಸಿ. ಮಹದೇವಪ್ಪ, ನಗರಾಭಿವೃದ್ಧಿ ಮತ್ತು ಹಜ್ ಸಚಿವ ಆರ್. ರೋಷನ್ ಬೇಗ್, ಕೃಷಿ ಸಚಿವ ಕೃಷ್ಣಬೈರೇಗೌಡ, ಐ.ಟಿ. ಮತ್ತು ಬಿ.ಡಿ. ಹಾಗೂ ಪ್ರವಾಸೋದ್ಯಮ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ, ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಮಹಾಪೌರರಾದ ಶ್ರೀಮತಿ ಜಿ. ಪದ್ಮಾವತಿ, ಬೆಂಗಳೂರು ಉಪಸ್ಥಿತರಿರುವರು.













Click it and Unblock the Notifications