ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯದಲ್ಲಿ ಸ್ವಂತ ಮನೆ ಇಲ್ಲದವರ ನಿಖರ ಮಾಹಿತಿ ಕೇಳಿದ ಎಚ್ಡಿಕೆ

By Nayana
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 5: ರಾಜ್ಯದಲ್ಲಿ ವಸತಿ ರಹಿತರ ಸಮೀಕ್ಷೆ ನಡೆಸಿ ನಿಖರ ಮಾಹಿತಿ ಸಂಗ್ರಹಿಸಿ, ವಸತಿ ಯೋಜನೆಗಳನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸೂಚನೆ ನೀಡಿದರು.

ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ 2011 ರ ಎಸ್‍ಇಸಿಸಿ ವರದಿಯನ್ವಯ ರಾಜ್ಯದಲ್ಲಿ ಒಟ್ಟು 73.33 ಲಕ್ಷ ಮನೆಗಳ ಬೇಡಿಕೆ ಇದ್ದು, ಈ ವರೆಗೆ 29.38 ಲಕ್ಷ ಮನೆಗಳನ್ನು ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ 44.06 ಹಾಗೂ ನಗರ ಪ್ರದೇಶದಲ್ಲಿ 29.27 ಲಕ್ಷ ಮನೆಗಳ ಬೇಡಿಕೆ ಇದೆ. ನಗರ ಪ್ರದೇಶದಲ್ಲಿ ಕೇವಲ 3.06 ಮನೆ ಹಂಚಿಕೆ ಆಗಿರುವುದನ್ನು ಗಮನಿಸಿದ ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ನಗರ ಪ್ರದೇಶದ ವಸತಿ ಯೋಜನೆಗಳಿಗೆ ಆದ್ಯತೆ ನೀಡುವಂತೆ ಸೂಚಿಸಿದರು.

ಸಿಎಂ ಜನತಾದರ್ಶನಕ್ಕೆ ಜನಸಾಗರ: ನೊಂದ ಮನಸ್ಸುಗಳಿಗೆ ಆಸರೆಯಾದ ಎಚ್ಡಿಕೆಸಿಎಂ ಜನತಾದರ್ಶನಕ್ಕೆ ಜನಸಾಗರ: ನೊಂದ ಮನಸ್ಸುಗಳಿಗೆ ಆಸರೆಯಾದ ಎಚ್ಡಿಕೆ

ಈ ಸಂದರ್ಭದಲ್ಲಿ ನಗರ ಪ್ರದೇಶದಲ್ಲಿ ಭೂಮಿಯ ಲಭ್ಯತೆ ಇಲ್ಲದಿರುವುದು ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. 2018-19ನೇ ಸಾಲಿನಲ್ಲಿ 10.72 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದ್ದು, 4.24 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

CM insists shelterless people should be recognized

ರಾಜ್ಯದ ಎಲ್ಲ ಇಲಾಖೆಗಳ ಪ್ರಗತಿಗೆ ಹೋಲಿಸಿದರೆ, ವಸತಿ ಇಲಾಖೆಯು ಶೇ. 42 ರಷ್ಟು ಅನುದಾನ ಬಳಕೆ ಮಾಡಿ ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಕಾರ್ಯದರ್ಶಿ ತಿಳಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ, ಕೊಳೆಗೇರಿಅಭಿವೃದ್ಧಿ ಮಂಡಳಿ, ಕರ್ನಾಟಕ ಗೃಹ ಮಂಡಳಿ, ರೇರಾದ ಕಾರ್ಯಕ್ರಮಗಳು, ವಿವಿಧ ವಸತಿ ಯೋಜನೆಗಳ ಅನುಷ್ಠಾನಕ್ಕೆ ಇರುವ ತೊಡಕುಗಳ ನಿವಾರಣೆ ಕುರಿತು ಚರ್ಚಿಸಲಾಯಿತು.

ಕೇವಲ 24 ಗಂಟೆಯಲ್ಲಿ ಮಹಿಳೆಗೆ ನ್ಯಾಯ ದೊರಕಿಸಿಕೊಟ್ಟ ಕುಮಾರಸ್ವಾಮಿಕೇವಲ 24 ಗಂಟೆಯಲ್ಲಿ ಮಹಿಳೆಗೆ ನ್ಯಾಯ ದೊರಕಿಸಿಕೊಟ್ಟ ಕುಮಾರಸ್ವಾಮಿ

ಬಸವ ವಸತಿ ಯೋಜನೆಯಡಿ 90 ದಿನಗಳಿಗಿಂತಲೂ ಹೆಚ್ಚಿನ ಕಾಲಾವಕಾಶ ನೀಡಿದ್ದರೂ ಸಹ ಪ್ರಾರಂಭವಾಗದ ಹಿನ್ನೆಲೆಯಲ್ಲಿ 69 ಸಾವಿರ ಮನೆಗಳನ್ನು ರದ್ದುಪಡಿಸಲಾಗಿತ್ತು. ಮುಖ್ಯಮಂತ್ರಿಗಳ ಸೂಚನೆಯಂತೆ ಈ ಮನೆಗಳಲ್ಲಿ ಪ್ರಾರಂಭವಾಗಿರುವ ಮನೆಗಳನ್ನು ಜಿಪಿಎಸ್‍ಗೆ ಅಳವಡಿಸಲು ಅವಕಾಶ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ವಸತಿ ಸಚಿವ ಯು.ಟಿ. ಖಾದರ್ ತಿಳಿಸಿದರು.

ಶಾಲೆ, ಕಾಲೇಜಿಗೆ ಮೂಲ ಸೌಕರ್ಯ ಒದಗಿಸಲು ಸಿಎಂ ಸೂಚನೆ ಶಾಲೆ, ಕಾಲೇಜಿಗೆ ಮೂಲ ಸೌಕರ್ಯ ಒದಗಿಸಲು ಸಿಎಂ ಸೂಚನೆ

ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ರಾಜೀವ್‍ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಹಾಜರಿದ್ದರು.

English summary
Chief minister H.D.Kumaraswamy has said that the housing department should have exact number and status of shelterless people in the state and they should be provided facility soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X