• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಡಿಎ ಆಯುಕ್ತ ರಾಕೇಶ್ ಸಿಂಗ್ ವರ್ಗಾವಣೆಗೆ ಕುಮಾರಸ್ವಾಮಿ ಭರವಸೆ

|

ಬೆಂಗಳೂರು, ಮೇ 28: ಬಿಡಿಎ ಆಯುಕ್ತ ರಾಕೇಶ್ ಸಿಂಗ್ ಹಾಗೂ ಶಾಸಕ ಎಸ್‌ಟಿ ಸೋಮಶೇಖರ್ ನಡುವಿನ ತಿಕ್ಕಾಟ ತಾರಕಕ್ಕೇರಿದೆ.

ಪೆರಿಫೆರಲ್ ರಿಂಗ್ ರಸ್ತೆ ನೈಸ್‌ ರಸ್ತೆಗೆ ಸೇರಲು 300 ಎಕರೆ ಭೂಮಿ ಬೇಕು

ರಾಕೇಶ್ ಸಿಂಗ್ ಜನಸಾಮಾನ್ಯರು, ಜನಪ್ರತಿನಿಧಿಗಳ ಕೆಲಸ ಮಾಡುವುದಿಲ್ಲ, ಬದಲಿಗೆ ಚಿತ್ರ ನಟಿಯರ ಕೆಲಸ ಮಾಡಿಕೊಡಲು ಉತ್ಸಾಹ ತೋರುತ್ತಾರೆ ಎಂದು ಟೀಕಿಸುವುದರ ಜೊತೆಗೆ ಅವರನ್ನು ವರ್ಗಾವಣೆ ಮಾಡುವಂತೆ ಸರ್ಕಾರದ ಮೇಲೆ ಪದೇ ಪದೇ ಒತ್ತಡ ಹೇರಿದ್ದರು.

ಬೆಂಗಳೂರು ಸುತ್ತಾ 65 ಕಿ.ಮೀ. ಪೆರಿಫೆರಲ್ ರಸ್ತೆ ಯೋಜನೆಗೆ ಒಪ್ಪಿಗೆ

ಇದೀಗ ಮತ್ತೊಮ್ಮೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿರುವ ಶಾಸಕ ಎಸ್‌ಟಿ ಸೋಮಶೇಖರ್ ಬಿಡಿಎ ಆಯುಕ್ತರನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿದ್ದಾರೆ, ಇದಕ್ಕೆ ಸ್ಪಂದಿಸಿರುವ ಸಿಎಂ ಅವರ ಬೇಡಿಕೆಯನ್ನು ಈಡೇರಿಸುವ ಕುರಿತು ಭರವಸೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಭಾರಿ ಅವ್ಯವಹಾರದ ಹಿನ್ನೆಲೆಯಲ್ಲಿ ಬಿಡಿಎ ಮಾನ-ಮರ್ಯಾದೆ ಹರಾಜಾಗುತ್ತಿದೆ. ರಾಕೇಶ್ ಸಿಂಗ್ ಅವರದ್ದು ಎಲುಬಿಲ್ಲದ ನಾಲಿಗೆ . ತಮ್ಮ ಬಳಿ ಇವರ 100ಕ್ಕೂ ಅಧಿಕ ಕೋಟಿ ಮೌಲ್ಯದ ಅವ್ಯವಹಾರದ ದಾಖಲೆ ಇದೆ ಎಂದು ಈ ಹಿಂದೆ ಹೇಳಿದ್ದರು.

English summary
Chief minister agrees to MLA ST Somshekhar over transfer of BDA commissioner Rakesh Singh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X