ಪ್ರತ್ಯೇಕವಾಗಿ ಬಜೆಟ್ ಪೂರ್ವ ಸಿದ್ಧತಾ ಸಭೆ ನಡೆಸಿದ ಸಿಎಂ, ಡಿಸಿಎಂ
ಬೆಂಗಳೂರು, ಜೂನ್ 23: ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಪ್ರತ್ಯೇಕವಾಗಿ ಬಜೆಟ್ ಪೂರ್ವ ಸಿದ್ಧತಾ ಸಭೆಗಳನ್ನು ಇಂದು ನಡೆಸಿದರು.
ಕುಮಾರಸ್ವಾಮಿ ಅವರು ಶಕ್ತಿಭವನದಲ್ಲಿ ಮುಖ್ಯಕಾರ್ಯದರ್ಶಿ ಅವರನ್ನೊಳಗೊಂಡಂತೆ ಸಭೆ ನಡೆಸಿದರೆ. ಪರಮೇಶ್ವರ್ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದರು.
ಮುಖ್ಯಮಂತ್ರಿಗಳು ಮಹಿಳೆ ಮತ್ತು ಮಕ್ಕಳ ಕಲ್ಯಾಣ, ಅರಣ್ಯ- ಪರಿಸರ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ, ಇಂಧನ, ಸಾರ್ವಜನಿಕ ಉದ್ಯಮ, ಯೋಜನಾ ಇಲಾಖೆ, ಜವಳಿ ಇಲಾಖೆಗೆ ಸಂಬಂಧಿಸಿದಂತೆ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿದರು.

ಮಹಿಳೆ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಜಯಮಾಲ, ಆಯಾ ಇಲಾಖೆಗೆ ಸಂಬಂಧಿಸಿದ ಸಚಿವರು, ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಹಣಕಾಸು ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ವಿಧಾನಸೌಧದಲ್ಲಿ ಪರಮೇಶ್ವರ್ ಅವರು ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ಗೃಹ ಇಲಾಖೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ನಗರ ಪೊಲೀಸ್ ಆಯುಕ್ತ ಟಿ.ಸುನಿಲ್ ಕುಮಾರ್ ಸೇರಿದಂತೆ ಬೇರೆ ಬೇರೆ ವಿಭಾಗದ ಹಲವು ಮುಖ್ಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು.
ಕಳೆದ ಸರ್ಕಾರದ ಯೋಜನೆಗಳು, ನೆನಗುದಿಗೆ ಬಿದ್ದಿರುವ ಯೋಜನೆಗಳು, ಹೊಸದಾಗಿ ಸೇರಿಸಬೇಕಾದ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.












Click it and Unblock the Notifications