ಮೇ ತಿಂಗಳ ಮಂಗಳವಾರದ ಮಳೆಗೆ ಎಚ್ಚೆತ್ತ ಸಿಎಂರಿಂದ ಅಧಿಕಾರಿಗಳ ಸಭೆ

ಬೆಂಗಳೂರು, ಮೇ 8: ಬೆಂಗಳೂರಿನಲ್ಲಿ ಮಂಗಳವಾರ ಸುರಿದ ಭರ್ಜರಿ ಮಳೆಗೆ ಸ್ವತಃ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ, ಅಗತ್ಯ ಕ್ರಮಕ್ಕೆ ಸೂಚನೆಗಳನ್ನು ನೀಡಿದ್ದಾರೆ. ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ತೊಂದರೆ ಆಗಿರುವುದು, ವಿದ್ಯುತ್ ಕಂಬ ಉರುಳಿರುವುದು ಇಂಥ ಸಮಸ್ಯೆಗಳನ್ನು ಕೂಡಲೇ ನಿವಾರಿಸಿ ಎಂದಿದ್ದಾರೆ.

ಈ ವೇಳೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಮಾತನಾಡಿ, ಬೆಂಗಳೂರು ವಿದ್ಯುತ್ ಕಂಪನಿಯ 295 ಕಂಬಗಳು ಮುರಿದಿದ್ದು, ಅವುಗಳಲ್ಲಿ ಬೆಂಗಳೂರಿನಲ್ಲಿ 80 ಕಂಬಗಳು ಬಿದ್ದಿವೆ. ಒಟ್ಟಾರೆ 76 ಲಕ್ಷ ಮೌಲ್ಯದ ಆಸ್ತಿ ನಷ್ಟವಾಗಿದೆ ಎಂದು ತಿಳಿಸಿದರು.

ತೆರೆದ ವಿದ್ಯುತ್ ತಂತಿಗಳನ್ನು ಸರಿಸಪಡಿಸುವುದು, ಮುರಿದ ಮರದ ಕೊಂಬೆಗಳನ್ನು ತುಂಡರಿಸುವುದು ಹಾಗೂ ಪರಿವರ್ತಿತ ಕೇಂದ್ರಗಳ ದುರಸ್ತಿ ಕಾರ್ಯವನ್ನು ಕೈಗೊಳ್ಳಾಗಿದೆ. ಪೊಲೀಸರಿಂದ 134 ಅಪಾಯದ ಸ್ಥಳಗಳನ್ನು ಗುರುತಿಸಲಾಗಿದ್ದು, ಈ ಪೈಕಿ 63 ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ವಿವರಿಸಿದರು.

Rain

ಹೊಸ ಅಥವಾ ಹಳೆ ಬಡಾವಣೆಗಳಲ್ಲಿ ವಿದ್ಯುತ್ ವಿಸ್ತರಣೆಗಳನ್ನು ಕೈಗೊಳ್ಳುವ ಸಂದರ್ಭಗಳಲ್ಲಿ ಬೆಸ್ಕಾಂ ಅನುಮತಿ ಕಡ್ಡಾಯವಾಗಿ ಪಡೆಯಬೇಕು. ಇದರಿಂದಾಗಿ ವಿದ್ಯುತ್ ಅನಾಹುತ ತಪ್ಪಿಸಲು ಸಾಧ್ಯವಾಗುತ್ತದೆ. ಬೆಂಗಳೂರಿನ ಎಲ್ಲ ಬೀದಿ ದೀಪಗಳನ್ನು ಎಲ್.ಇ.ಡಿ ಗೆ ಪರಿವರ್ತಿಸುವ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಕಸ ವಿಲೇವಾರಿ, ರಸ್ತೆ ದುರಸ್ತಿ, ಫುಟ್ ಪಾತ್ ನಿರ್ಮಾಣ, ಟೆಂಡರ್ ಶ್ಯೂರ್ ರಸ್ತೆಗಳ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ನಗರಾಭಿವೃದ್ದಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತಿಳಿಸಿದರು. ಕಂದಾಯ ನಿವೇಶನಗಳಲ್ಲಿ ವಿದ್ಯುತ್ ತಂತಿಗಳ ಹತ್ತಿರ ಕಟ್ಟಡ ನಿರ್ಮಾಣ ಆಗುತ್ತಿರುವುದು ಹೆಚ್ಚಿದ್ದು, ನಗರಸಭಾ ಸದಸ್ಯರು ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಕುಮಾರಸ್ವಾಮಿ ಸೂಚಿಸಿದರು.

ಬಿಬಿಎಂಪಿ, ಬಿಡಿಎ, ಬೆಸ್ಕಾಂ ಇಲಾಖೆಗಳ ಸಮನ್ವಯ ಸಮಿತಿ ಸಭೆಯನ್ನು ಕರೆದು, 10-15 ದಿನಗಳಲ್ಲಿ ಸಮಸ್ಯೆಯನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಶಾಸಕ ಗೋಪಾಲಯ್ಯ, ಬಿಬಿಎಂಪಿ ಮೇಯರ್ ಗಂಗಾಂಬಿಕಾ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಬಿಡಿಎ ಆಯುಕ್ತರಾದ ರಾಕೇಶ್ ಸಿಂಗ್, ಕಾಲೇಜು ಶಿಕ್ಷಣ ಇಲಾಖೆ ಆಯಕ್ತರಾದ ಡಾ.ಎನ್.ಮಂಜುಳಾ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ನಾಗಾಂಬಿಕಾ ದೇವಿ ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+