• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೋದಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಕುಮಾರಸ್ವಾಮಿ

|
   ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಎಚ್ ಡಿ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ

   ಬೆಂಗಳೂರು, ಮೇ 29: ನರೇಂದ್ರ ಮೋದಿ ಅವರು ನಾಳೆ ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಕರ್ನಾಟಕ ಸಿಎಂ ಕುಮಾರಸ್ವಾಮಿ ಅವರು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

   ಕುಮಾರಸ್ವಾಮಿ ಅವರಿಗೆ ಪ್ರಧಾನಿ ಕಾರ್ಯಾಲಯದಿಂದ ಅಧಿಕೃತ ಆಹ್ವಾನ ಬಂದಿದ್ದು, ಅವರು ನಾಳೆ ಬೆಳಿಗ್ಗೆ 11:30 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ದೆಹಲಿಗೆ ವಿಮಾನ ಏರಲಿದ್ದಾರೆ.

   ಎರಡು ಗಂಟೆ ವೇಳೆಗೆ ದೆಹಲಿ ತಲುಪಲಿರುವ ಸಿಎಂ ಅವರು ನಂತರ ದೆಹಲಿಯ ಕರ್ನಾಟಕ ಭವನದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ನಂತರ ಅಲ್ಲಿನ ಸ್ಥಳಿಯ ಅಧಿಕಾರಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

   ಮೋದಿ ಪ್ರಮಾಣವಚನಕ್ಕೆ ಆಗಮಿಸಲಿರುವ ವಿಶ್ವದ ನಾಯಕರು ಯಾರ್ಯಾರು?

   ನಂತರ ಏಳು ಗಂಟೆ ವೇಳೆಗೆ ನಡೆಯಲಿರುವ ನರೇಂದ್ರ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಅವರು ಭಾಗವಹಿಸಲಿದ್ದಾರೆ. ನಂತರ ಅಂದೇ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

   'ಪಾಕಿಸ್ತಾನಕ್ಕೆ ಆಹ್ವಾನ ನೀಡದಿರಲು ಭಾರತದ 'ಆಂತರಿಕ ರಾಜಕೀಯ' ಕಾರಣ'

   ಕುಮಾರಸ್ವಾಮಿ ಅವರೊಂದಿಗೆ ಮಾಜಿ ಪ್ರಧಾನಿ ದೇವೇಗೌಡ ಅವರೂ ಸಹ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಕಳೆದ ಬಾರಿ ದೇವೇಗೌಡ ಅವರು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

   ಬಹುತೇಕ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ನಾಳಿನ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಮೋದಿ ಅವರ ಪ್ರಬಲ ವಿರೋಧಿ ಮಮತಾ ಬ್ಯಾನರ್ಜಿ ಅವರೂ ಸಹ ನಾಳಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

   English summary
   CM Kumaraswamy will attend Narendra Modi oath taking ceremony in Delhi tomorrow. CM Kumaraswamy will leave to New Delhi tomorrow morning 11:30.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X