ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ನಿರಂತರ ವಿದ್ಯುತ್‌ ಪೂರೈಕೆಗೆ ಸಿಎಂ ಮಾಸ್ಟರ್‌ ಪ್ಲ್ಯಾನ್‌

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 2: ಬೆಂಗಳೂರಿನಲ್ಲಿ ವಿದ್ಯುತ್ ಪೂರೈಕೆಗೆ ಮೂಲ ಸೌಕರ್ಯ ಗಳನ್ನು ಸುಧಾರಿಸಲು ಉನ್ನತ ಅಧಿಕಾರಿಗಳ ಸಭೆ ಕರೆಯಲು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸೂಚಿಸಿದ್ದಾರೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಪೂರೈಕೆ ಗೆ ತೊಂದರೆ ಆಗಬಾರದು. ವಿದ್ಯುತ್ ಸೋರಿಕೆ ಆಗದಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಪವರ್‌ ಕಟ್‌ ಕುರಿತು ಮೊಬೈಲ್‌ನಲ್ಲಿ ದೊರೆಯಲಿದೆ ಮಾಹಿತಿಪವರ್‌ ಕಟ್‌ ಕುರಿತು ಮೊಬೈಲ್‌ನಲ್ಲಿ ದೊರೆಯಲಿದೆ ಮಾಹಿತಿ

ಸಾರ್ವಜನಿಕರಿಗೆ ತೊoದರೆಯಾಗದಂತೆ ಲೈನ್ ಗಳನ್ನು ಹಾಕಬೇಕು, ಬೆಂಗಳೂರು ನಗರದಲ್ಲಿ 3 ಸಾವಿರ ಮೆಗಾ ವ್ಯಾಟ್ ದಾಖಲಾದ ವಿದ್ಯುತ್ ಬೇಡಿಕೆ ಇದೆ. ನಗರದ ಲ್ಲಿ ವಿದ್ಯುತ್ ಪೂರೈಕೆ ಸಮರ್ಪಕವಾಗಿ ನಿರ್ವಹಿಸಲು ಭೂಗತ ಕೇಬಲ್ ಅಳವಡಿಸಲಾಗುತ್ತಿದೆ.

CM master plan for non stop power supply in Bengaluru

ಈ ಸಂಬಂಧ ಇರುವ ತೊಡಕುಗಳನ್ನು ಪರಿಹರಿಸಲು, ಲೋಕೋಪಯೋಗಿ ಇಲಾಖೆ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಹಾಗೂ ಪೊಲೀಸ್ ಆಯುಕ್ತರನ್ನು ಒಳಗೊಂಡ ಸಭೆ ಕರೆಯಲು ಸೂಚಿಸಿದ್ದಾರೆ. ಮರಗಳನ್ನು ಕಡಿಯುವುದನ್ನು ನಿಯಂತ್ರಿಸಲು ಸೂಚನೆ ನೀಡಿದ್ದಾರೆ.

ಬೆಂಗಳೂರಲ್ಲಿ ಅಧಿಕೃತವಾಗಿ ಪವರ್‌ ಕಟ್‌ ಎಂದು ಘೋಷಿಸದಿದ್ದರೂ ಕೂಡ ವಿದ್ಯುತ್‌ ವ್ಯತ್ಯಯ ಉಂಟಾಗುತ್ತಿದೆ, ಒಂದು ತಾಸಿಗೆ ಕನಿಷ್ಠ ಹತ್ತಾರು ಬಾರಿ ಕರೆಂಟ್‌ ಹೋಗುತ್ತದೆ, ಈ ಸಮಸ್ಯೆಗೆ ಪರಿಹಾರ ದೊರೆತಿಲ್ಲ ಹಾಗಾಗಿ ತೊಡಕುಗಳನ್ನು ಆದಷ್ಟು ಬೇಗ ನಿವಾರಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಆರ್ಥಿಕ ಇಲಾಖೆ , ಪ್ರಧಾನ ಕಾರ್ಯದರ್ಶಿ ಐ. ಎನ್. ಎಸ್ ಪ್ರಸಾದ್, ಇoಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ , ಮುಖ್ಯಮಂತ್ರಿ ಗಳ ಅಪರ ಮುಖ್ಯ ಕಾರ್ಯದರ್ಶಿ ವಿ.ರಮಣ ರೆಡ್ಡಿ, ಮುಖ್ಯ ಮಂತ್ರಿಗಳ ಆರ್ಥಿಕ ಸಲಹೆಗಾರ ಸುಬ್ರಹ್ಮಣ್ಯ ಭಾಗವಹಿಸಿದ್ದರು.

English summary
Chief minister H.D.Kumaraswamy has annonced an action plan for uninterrupted power supply in Bengaluru city which the capital city has global importance
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X