ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

|
Google Oneindia Kannada News

ಬೆಂಗಳೂರು, ಮೇ 27: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು, ಅದರಲ್ಲೂ ವಿಶೇಷವಾಗಿ ಧರ್ಮಸ್ಥಳ ಹಾಗೂ ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿ ಚರ್ಚಿಸಿದರು.

ಧರ್ಮಸ್ಥಳದಲ್ಲಿ ಈ ಬಾರಿ ನೇತ್ರಾವತಿ ನೀರು ಬತ್ತಿ ಹೋಗಿರುವುದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ಸೂಚನೆಯಂತೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ಸಮಸ್ಯೆ ಕುರಿತು ಮಾಹಿತಿ ನೀಡಿದರು.

ಸಿಎಂ ಕುಮಾರಸ್ವಾಮಿ- ಡಿಸಿಎಂ ಪರಮೇಶ್ವರ್ ಗುಪ್ತ ಮಾತುಕತೆ ಸಿಎಂ ಕುಮಾರಸ್ವಾಮಿ- ಡಿಸಿಎಂ ಪರಮೇಶ್ವರ್ ಗುಪ್ತ ಮಾತುಕತೆ

ಅಲ್ಲದೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಎರಡು ಕಿಂಡಿ ಅಣಿಕಟ್ಟು ನಿರ್ಮಿಸಲು ಸರ್ಕಾರಕ್ಕೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಏಳು ಕೋಟಿ ರೂ. ವೆಚ್ಚದಲ್ಲಿ ನೆರಿಯ ಹೊಳೆಗೆ ಹಾಗೂ ನೇತ್ರಾವತಿ ನದಿಗೆ ಕಿಂಡಿ ಅಣೆಕಟ್ಟು ನಿರ್ಮಿಸಲು ಸರ್ಕಾರಕ್ಕೆ ಸಣ್ಣ ನೀರಾವರಿ ಇಲಾಖೆಯು ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿಸಿದರು. ಈ ಪ್ರಸ್ತಾವನೆಯನ್ನು ಅನುಮೋದಿಸಿ, ಕೂಡಲೇ ಕಿಂಡಿ ಅಣೆಕಟ್ಟು ನಿರ್ಮಿಸಲು ಕ್ರಮ ವಹಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಮಂಗಳೂರು ಕುಡಿಯುವ ನೀಡಿನ ಸಮಸ್ಯೆ

ಮಂಗಳೂರು ಕುಡಿಯುವ ನೀಡಿನ ಸಮಸ್ಯೆ

ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ಮಾಹಿತಿ ನೀಡಿದ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಮಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಿದ್ದು, ತುಂಬೆ ಕಿಂಡಿ ಅಣೆಕಟ್ಟಿನಲ್ಲಿ 7 ಮೀಟರ್ ವರೆಗೆ ನೀರು ಸಂಗ್ರಹಿಸುವ ಅಗತ್ಯವಿದೆ. ಇದರಿಂದ ಹೆಚ್ಚುವರಿಯಾಗಿ 344 ಎಕರೆ ಭೂಮಿ ಜಲಾವೃತವಾಗಲಿದ್ದು, ಇದಕ್ಕಾಗಿ ಭೂ ಸ್ವಾಧೀನಕ್ಕೆ 130 ಕೋಟಿ ರೂ. ಗಳ ಅಗತ್ಯವಿದೆ ಎಂದು ತಿಳಿಸಿದರು. ಈ ಬಗ್ಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಕಡಲ್ಕೊರೆತದಿಂದ 150 ಮನೆಗಳನ್ನು ಗುರುತಿಸಲಾಗಿದೆ

ಕಡಲ್ಕೊರೆತದಿಂದ 150 ಮನೆಗಳನ್ನು ಗುರುತಿಸಲಾಗಿದೆ

ಇದಲ್ಲದೆ ಎಂಆರ್‌ಎಲ್‌ಪಿಎಲ್‌ನಲ್ಲಿ ಸ್ಥಾಪಿಸಲಾಗುತ್ತಿರುವ ಉಪ್ಪುನೀರನ್ನು ಶುದ್ಧೀಕರಿಸುವ ಘಟಕದ ಸಾಧಕ ಬಾಧಕಗಳನ್ನು ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಸೂಚಿಸಿದರು. ಉಳ್ಳಾಲ ಭಾಗದಲ್ಲಿ ಕಡಲ್ಕೊರೆತದಿಂದ ಬಾಧಿತರಾಗುವ 150 ಮನೆಗಳನ್ನು ಗುರುತಿಸಲಾಗಿದ್ದು, ಇವರಿಗೆ ಕೊಡಗು ಮಾದರಿಯಲ್ಲಿ ಪುನರ್ವಸತಿ ಕಲ್ಪಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಜೆಡಿಎಸ್ ಮಾಧ್ಯಮದ ಮೇಲೆ ಸಿಟ್ಟು ತೀರಿಸಿಕೊಳ್ಳುವುದು ದುರದೃಷ್ಟಕರಜೆಡಿಎಸ್ ಮಾಧ್ಯಮದ ಮೇಲೆ ಸಿಟ್ಟು ತೀರಿಸಿಕೊಳ್ಳುವುದು ದುರದೃಷ್ಟಕರ

ಕೋಟ್ಯಾಂತರ ರೂಪಾಯಿ ವ್ಯಯಿಸಲಾಗುತ್ತಿದೆ

ಕೋಟ್ಯಾಂತರ ರೂಪಾಯಿ ವ್ಯಯಿಸಲಾಗುತ್ತಿದೆ

ಉಳ್ಳಾಲದಲ್ಲಿ ಪ್ರತಿವರ್ಷ ಕಡಲ್ಕೊರೆತ ತಡೆಯಲು ಸಮುದ್ರ ತೀರದಲ್ಲಿ ಕಲ್ಲು ಹಾಕಲು ಕೋಟ್ಯಂತರ ರೂಪಾಯಿ ವ್ಯಯಿಸಲಾಗುತ್ತಿದ್ದು, ಕಲ್ಲುಗಳು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗುತ್ತವೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ಅಗತ್ಯವಿದೆ ಎಂದು ಸಚಿವ ಯು.ಟಿ. ಖಾದರ್ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಸಚಿವರು ಅಧಿಕಾರಿಗಳು ಭಾಗಿ

ಸಚಿವರು ಅಧಿಕಾರಿಗಳು ಭಾಗಿ

ಸಭೆಯಲ್ಲಿ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಮುಖ್ಯಮಂತ್ರಿಯವರ ಅಪರಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಎ.ಬಿ. ಇಬ್ರಾಹಿಂ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಜಯರಾಮ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

ಮೈತ್ರಿ ಸರ್ಕಾರದ ಸಂಪುಟ ಸೇರುವ ಸಂಭಾವ್ಯ ಶಾಸಕರ ಪಟ್ಟಿ ಮೈತ್ರಿ ಸರ್ಕಾರದ ಸಂಪುಟ ಸೇರುವ ಸಂಭಾವ್ಯ ಶಾಸಕರ ಪಟ್ಟಿ

English summary
CM Kumaraswamy today held meeting with officials and minister and discussed about Dakshina Kannada water problem. minister UT Khader and CS Puttaraju present in the meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X