ಲೇವಾದೇವಿದಾರರ ವಿರುದ್ಧ ಸರ್ಕಾರದ ಕೆಂಗಣ್ಣು: ಸಿಎಂ ಖಡಕ್ ಆದೇಶ

Recommended Video

      ಹೆಚ್.ಡಿ ಕುಮಾರಸ್ವಾಮಿ ಖಡಕ್ ಆದೇಶ : ಕೃಷಿಕರಿಗೆ ಸಾಲಬಾಧೆಯಿಂದ ಮುಕ್ತಿ | Oneindia kannada

      ಬೆಂಗಳೂರು, ಆಗಸ್ಟ್ 30: ಋಣಭಾರ ಪೀಡಿತ ಸಣ್ಣ ರೈತರು, ದುರ್ಬಲ ವರ್ಗದವರಿಗೆ ಲೇವಾದೇವಿ ದಾರರು ಕಿರುಕುಳ ನೀಡದಂತೆ ಕ್ರಮ ವಹಿಸಲು ಎಲ್ಲ ಪ್ರಾದೇಶಿಕ ಆಯುಕ್ತರು, ಎಲ್ಲ ವಲಯಗಳ ಪೊಲೀಸ್ ಮಹಾನಿರೀಕ್ಷಕರು, ಎಲ್ಲ ಜಿಲ್ಲಾಧಿಕಾರಿ ಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿ ಗಳಿಗೆ ಸರ್ಕಾರ ಸೂಚಿಸಿದೆ.

      ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಈ ಕೆಳಕಂಡಂತೆ ಸುತ್ತೋಲೆ ಹೊರಡಿಸಿದ್ದಾರೆ. ಕರ್ನಾಟಕ ಋಣಭಾರ ಪರಿಹಾರ ಮಸೂದೆ 2018 ನ್ನು ರಾಜ್ಯದಲ್ಲಿನ ಋಣಭಾರ ಪೀಡಿತ ಸಣ್ಣರೈತರಿಗೆ ಭೂರಹಿತ ರೈತ ಕೃಷಿ ಕಾರ್ಮಿಕರಿಗೆ ಹಾಗೂ ದುರ್ಬಲ ವರ್ಗದ ಜನರಿಗೆ ಋಣಭಾರದ ಸಮಸ್ಯೆಗಳ ಪರಿಹಾರಕ್ಕಾಗಿ ಮಂಡಿಸಲು ಪರಿಶೀಲಿಸಲಾಗುತ್ತಿದೆ.

      ಈ ಮಾಹಿತಿಯು ರಾಜ್ಯದ ಹಲವಾರು ದಿನಪತ್ರಿಕೆ ಗಳಲ್ಲಿ ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಋಣಭಾರ ಪೀಡಿತ ಸಣ್ಣರೈತರಿಗೆ ಭೂರಹಿತ ರೈತ ಕೃಷಿ ಕಾರ್ಮಿಕರಿಗೆ ಹಾಗೂ ದುರ್ಬಲ ವರ್ಗದ ಜನರಿಗೆ ಸಾಲ ನೀಡಿದರೆನ್ನಲಾದ ಲೇವಾದೇವಿಗಾರ ರಿಂದ ಸಾಲ ಪಡೆದವರ ಮೇಲೆ ವಿವಿಧ ರೀತಿಯ ಕಾನೂನುಬಾಹಿರ ಒತ್ತಡಗಳು ವರದಿಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

      CM orders strict action against money launders for extortion

      ಈ ಹಿನ್ನೆಲೆಯಲ್ಲಿ ಕೂಡ: ಲೇ ಈ ಸಾಲ ಪಡೆದವರ ಮೇಲೆ ಯಾವುದೇ ರೀತಿಯ ಕಾನೂನುಬಾಹಿರ ಒತ್ತಡ ಹಾಕದಂತೆ/ ದೌರ್ಜನ್ಯ ಎಸಗದಂತೆ ತಡೆಗಟ್ಟಲು ಕಾನೂನು ರೀತ್ಯ ಸೂಕ್ತ ಕ್ರಮ ಜರುಗಿಸುವಂತೆ ಈ ಮೂಲಕ ಸೂಚಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+