ಮತ್ತೆ ಕೋವಿಡ್ ಟೆಸ್ಟ್‌ಗೆ ಒಳಗಾದ ಶಾಸಕ ರೇಣುಕಾಚಾರ್ಯ
ಬೆಂಗಳೂರು, ಜು. 24: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಮತ್ತೆ ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದಾರೆ.
ಇತ್ತೀಚಿಗಷ್ಟೇ ರೇಣುಕಾಚಾರ್ಯ ಅವರ ವಿಧಾನಸೌಧದ ಆಪ್ತ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಕೊವಿಡ್-19 ರೋಗ ದೃಢಪಟ್ಟಿತ್ತು. ಹೀಗಾಗಿ ರೇಣುಕಾಚಾರ್ಯ ಅವರು ತಮ್ಮ ಸರ್ಕಾರಿ ಗೃಹ ಕಚೇರಿಯಿಂದಲೇ ಕಾರ್ಯನಿರ್ವಹಿಸಿದ್ದರು. ಜೊತೆಗೆ ಸಾರ್ವಜನಿಕರು ಹಾಗೂ ಹಿತೈಷಿಗಳು ನೇರವಾಗಿ ಬಂದು ಭೇಟಿಯಾಗದೆ, ದೂರವಾಣಿ ಮೂಲಕ ಸಂಪರ್ಕಿಸಬೇಕೆಂದು ವಿನಂತಿಸಿಕೊಂಡಿದ್ದರು. ಅದೆಲ್ಲ ಆಗಿ ಈಗ ಸುಮಾರು ಹದಿನೆಂಟು ದಿನಗಳು ಕಳೆದಿವೆ.

ಮತ್ತೆ ಸಣ್ಣ ಮಟ್ಟದ ಮೈಕೈ ನೋವು ಹಾಗೂ ಶೀತದ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಕೋವಿಡ್-19 ಟೆಸ್ಟ್‌ಗೆ ಒಳಗಾಗಿದ್ದಾರೆ. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಕೋವಿಡ್ ಪರೀಕ್ಷಾ ಕೇಂದ್ರದಲ್ಲಿ ರಾಪಿಡ್ ಆ್ಯಂಟಿಜೆನ್ ಟೆಸ್ಟ್‌ಗೆ ರೇಣುಕಾಚಾರ್ಯ ಅವರು ಒಳಗಾಗಿದ್ದು, ಕೋವಿಡ್-19 ನೆಗಟಿವ್ ಎಂದು ಬಂದಿದೆ. ಹೀಗಾಗಿ ರೇಣುಕಾಚಾರ್ಯ ಅವರು ಎರಡನೇ ಬಾರಿ ನಿಟ್ಟಿಸಿರು ಬಿಟ್ಟಿದ್ದಾರೆ.












Click it and Unblock the Notifications