ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ: ಸ್ವಾಮೀಜಿಗಳ ಹೇಳಿಕೆಗೆ ಗರಂ ಆದ ಪರಂ
ಬೆಂಗಳೂರು ಜೂನ್ 30: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕೆನ್ನುವ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಸ್ವಾಮೀಜಿಗಳು ವೇದಿಕೆ, ಸಂದರ್ಭ ನೋಡಿ ಮಾತಾಡಿದ್ದರೆ ಒಳ್ಳೆಯದು ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಅವರ ಹೇಳಿಕೆ ತಪ್ಪು ಎಂದು ನಾನು ಹೇಳುವುದಿಲ್ಲ. ಅವರಿಗೆ ಅನಿಸಿದ್ದು ಅವರು ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಬೇಕು ಎನ್ನುವುದು ಅವರ ಅಭಿಪ್ರಾಯ ಮತ್ತು ಕಾಳಜಿ ಇರಬಹುದು ಎಂದು ಹೇಳಿದರು.

ಸಿಎಂ, ಡಿಸಿಎಂ ಹುದ್ದೆಗಳ ವಿಚಾರ ಪ್ರಸ್ತುತ ಅಪ್ರಸ್ತುತ ಅಂತ ಅಲ್ಲ. ಹೈಕಮಾಂಡ್‌ನವರು ಆ ರೀತಿ ಬದಲಾವಣೆ ಮಾಡುವುದಾದರೆ ವೀಕ್ಷಕರನ್ನು ಕಳುಹಿಸಿ ಅಭಿಪ್ರಾಯ ಪಡೆಯುತ್ತಾರೆ ಎಂದರು. ನಾವು ಸಭೆ ಮಾಡಿದಾಗ ಉನ್ನತ ನಾಯಕರು ಯಾರೂ ಕೂಡ ಹೆಚ್ಚುವರಿ ಡಿಸಿಎಂ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಡಿಸಿಎಂ ಬಗ್ಗೆ ಅವರವರು ಅವರವರ ಅಭಿಪ್ರಾಯ ಹೇಳುತ್ತಾರೆ ಎಂದರು.
ನಾಡಪ್ರಭು ಕೆಂಪೇಗೌಡರ 515ನೇ ಜಯಂತೋತ್ಸವ ಸಮಾರಂಭದಲ್ಲಿ ಮಾತನಾಡಿದ್ದ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ, ಸಿದ್ಧರಾಮಯ್ಯನವರು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದರು. ಈ ಹೇಳಿಕೆ ಸದ್ಯ ಸಿಎಂ ಬದಲಾವಣೆ ವಿಚಾರವನ್ನು ಮತ್ತೆ ನೆನಪಿಸಿದೆ. ಅಲ್ಲದೆ ಸ್ವಾಮೀಜಿ ಸವರ ಈ ಹೇಳಿಕೆ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಕೆಲ ನಾಯಕರು ಆರೋಪಿಸಿದ್ದಾರೆ.
ಸ್ವಾಮೀಜಿ ಹಿಂದೆ ಬಿಜೆಪಿ ಕೈವಾಡ!
ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ಹಾಗೂ ಲಿಂಗಾಯತರು ಸಿಎಂ ಆಗಬೇಕು ಎಂಬ ಶಿವಾಚಾರ್ಯ ಶ್ರೀಗಳ ಹೇಳಿಕೆಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಸ್ವಾಮೀಜಿಗಳ ಹೇಳಿಕೆಯ ಹಿಂದೆ ಬಿಜೆಪಿ ಕೈವಾಡ ಇರಬಹುದು ಎಂದು ಹೇಳಿದ್ದರು.

ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಶುರುವಾದ ಸಿಎಂ, ಡಿಸಿಎಂ ದಂಗಲ್ ಸಂಪುಟದೊಳಗೂ ಕಲಹ ಸೃಷ್ಟಿಸಿದೆ. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಶಿವಕುಮಾರ್ ಹಾಗೂ ಸಚಿವ ಕೆ.ಎನ್. ರಾಜಣ್ಣ ಮಧ್ಯೆ ಸವಾಲ್- ಜವಾಬ್ ಮಟ್ಟಕ್ಕೆ ಅಂತಃಕಲಹ ವಿಸ್ತರಿಸಿದ್ದು, ವರ್ಷ ತುಂಬಿದ ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ 'ಅಧಿಕಾರ ಕಲಹ' ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಇದಕ್ಕೆ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.
ನನಗೆ ಇದನ್ನು ಯಾರೂ ಹೇಳಿ ಕೊಟ್ಟಿಲ್ಲ- ಸ್ವಾಮೀಜಿ
'ಕೆ.ಎನ್. ರಾಜಣ್ಣ ಸಿದ್ಧವಾಗಿದ್ದರೆ ಬಂದು ಕಾವಿ ತೊಡಲಿ. ಅವರಿಗೆ ಮಠ ಬಿಟ್ಟುಕೊಡುವ ನನ್ನ ಮಾತಿಗೆ ಈಗಲೂ ಬದ್ಧನಾಗಿದ್ದೇನೆ. ಆದರೆ ಒಂದು ದಿನಕ್ಕೆ ಕಾವಿ ತೊಟ್ಟು ಹೋಗುವುದಲ್ಲ. ರಾಜಣ್ಣ ಹೇಳಿದಂತೆ ನಡೆದುಕೊಳ್ಳಲಿ' ಎಂದು ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಅಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದಾರೆ. ಕೆ.ಎನ್. ರಾಜಣ್ಣ ಅವರನ್ನು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡಿರುವ ಸ್ವಾಮೀಜಿ ಅವರು, 'ಆ ರಾಜಣ್ಣ ಹಿಂದೆ ಬಾಯಿಗೆ ಬಂದಂತೆ ದೇವೇಗೌಡರ ಬಗ್ಗೆ ಏನೇನೋ ಮಾತನಾಡಿದ್ದ ಎಂದರು.
'ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿ ಎಂಬುದು ನನ್ನ ಅಭಿಪ್ರಾಯ. ನನಗೆ ಯಾರೋ ಹೇಳಿಕೊಟ್ಟು ಇದನ್ನು ನಾನು ಹೇಳಿಲ್ಲ. ಈ ವಿಚಾರದಲ್ಲಿ ದೇವರಂತಹ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೆಸರು ತರುವುದು ಸಮಂಜಸವಲ್ಲ. ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನ ಬರಬೇಕಾದರೆ ಅದರ ಹಿಂದೆ ಡಿ.ಕೆ. ಶಿವಕುಮಾರ್ ಅವರ ಶ್ರಮ ಇದೆ. ಹೀಗಾಗಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೇಳಿದ್ದೇನೆ' ಎಂದು ಸಮರ್ಥಸಿಕೊಂಡರು.
-
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ?












Click it and Unblock the Notifications