ಬೆಂಗಳೂರು ಐಟಿ - ಬಿಟಿ & ಟ್ರಾಫಿಕ್ ಜಾಮ್ ಕಂಟ್ರೋಲ್‌ಗೆ ಸಿಎಂ ಸಿದ್ದರಾಮಯ್ಯ ಗುಡ್‌ನ್ಯೂಸ್!
ಬೆಂಗಳೂರಿನಲ್ಲಿ ಕೆಲವೊಂದು ಮೂಲಸೌಕರ್ಯ ಸಮಸ್ಯೆಗಳು ಹೆಚ್ಚಾಗುತ್ತಿದ್ದು ಕೊನೆಗೂ ರಾಜ್ಯ ಸರ್ಕಾರವು ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿದೆ. ಬೆಂಗಳೂರಿನಲ್ಲಿ ಐಟಿ - ಬಿಟಿ ಸೇರಿದಂತೆ ಕೆಲವು ಪ್ರಮುಖ ಉದ್ಯಮಗಳು ಬೆಂಗಳೂರು ಬಿಡುವ ಮಾತನಾಡಿರುವಾಗಲೇ, ಬೆಂಗಳೂರು ಟ್ರಾಫಿಕ್ ಜಾಮ್ ಸಮಸ್ಯೆ, ಕಸದ ಸಮಸ್ಯೆ ಹಾಗೂ ರಸ್ತೆ ಗುಂಡಿಗಳ ಸಮಸ್ಯೆಯು ಹೆಚ್ಚಾಗುತ್ತಿದೆ. ಈ ರೀತಿ ಇರುವಾಗಲೇ ಕರ್ನಾಟಕ ಸರ್ಕಾರವು ಬೆಂಗಳೂರಿನಲ್ಲಿ ಕೆಲವೊಂದು ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದಕ್ಕೆ ಮುಂದಾಗಿದೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಸರ್ಕಾರ ಮುಂದಾಗಿದೆ.
ಈ ಸಂಬಂಧ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್ ಜಿ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಸಮಸ್ಯೆಯನ್ನು ತಪ್ಪಿಸುವುದಕ್ಕೆ ವಿಪ್ರೋ ಸಂಸ್ಥೆಯೊಂದಿಗೆ ಕೆಲವೊಂದು ಪ್ರಮುಖ ಹಾಗೂ ನಿರ್ದಿಷ್ಟ ಮನವಿಯನ್ನು ಮಾಡಲಾಗಿದೆ.

ಬೆಂಗಳೂರಿನ ವಿಪ್ರೋ ಕ್ಯಾಂಪಸ್ನಲ್ಲಿ ಸೀಮಿತ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ. ಈ ಸಂಬಂಧ ಅಜೀಂ ಪ್ರೇಮ್ ಜಿ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ನಿಮಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ ಮತ್ತು ಕರ್ನಾಟಕದ ಐಟಿ ಪರಿಸರ ವ್ಯವಸ್ಥೆಯ ಪ್ರಗತಿಗೆ ಮತ್ತು ಒಟ್ಟಾರೆ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ವಿಪ್ರೋದ ನಿರಂತರ ಕೊಡುಗೆಯನ್ನು ಪ್ರಾಮಾಣಿಕವಾಗಿ ಪ್ರಶಂಸಿಸುತ್ತೇನೆ ಎಂದಿದ್ದಾರೆ.
ಮುಂದುವರಿದು ಇಬ್ಲೂರು ಜಂಕ್ಷನ್‌ನಲ್ಲಿರುವ ಹೊರ ವರ್ತುಲ ರಸ್ತೆ (ORR) ಕಾರಿಡಾರ್‌ನಲ್ಲಿ ಬೆಂಗಳೂರು ಪ್ರಸ್ತುತ ಎದುರಿಸುತ್ತಿರುವ ಪ್ರಮುಖ ಸವಾಲುಗಳಲ್ಲಿ ಒಂದು ಪೀಕ್ ಅವರ್ ಸಮಯದಲ್ಲಿ ತೀವ್ರ ಸಂಚಾರ ದಟ್ಟಣೆಯಾಗಿದ್ದು, ಇದು ಸುಗಮ ಸಂಚಾರ, ಉತ್ಪಾದಕತೆ ಮತ್ತು ನಗರ ಜೀವನದ ಗುಣಮಟ್ಟದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ.
ಈ ಸಂದರ್ಭದಲ್ಲಿ, ಪರಸ್ಪರ ಒಪ್ಪಿತ ನಿಯಮಗಳು ಮತ್ತು ಅಗತ್ಯ ಭದ್ರತೆಗಳೊಂದಿಗೆ ವಿಪ್ರೋ ಕ್ಯಾಂಪಸ್ ಮೂಲಕ ಸೀಮಿತ ವಾಹನ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆಯನ್ನು ಪರಿಶೀಲನೆ ಮಾಡುವುದಕ್ಕೆ ಇಚ್ಛಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ಅಲ್ಲದೇ ಬೆಂಗಳೂರು ನಗರ ಸಂಚಾರ ದಟ್ಟಣೆಗೆ ಸಂಬಂಧಿಸಿದಂತೆ ತಜ್ಞರ ಪ್ರಾಥಮಿಕ ಸಲಹೆಗಳು ಹಾಗೂ ಕೆಲವೊಂದು ಕ್ರಮಗಳ ಮೂಲಕ ORR ನ ಪಕ್ಕದ ಪ್ರದೇಶಗಳಲ್ಲಿ, ವಿಶೇಷವಾಗಿ ಪೀಕ್ ಅವರ / ಕಚೇರಿ ಸಮಯದಲ್ಲಿ ಸುಮಾರು 30% ರಷ್ಟು ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಎಂದು ಸೂಚಿಸುತ್ತದೆ.
ಈ ವಿಷಯದಲ್ಲಿ ನಿಮ್ಮ ಬೆಂಬಲವು ಸಂಚಾರ ಅಡಚಣೆಗಳನ್ನು ನಿವಾರಿಸುವಲ್ಲಿ, ಪ್ರಯಾಣಿಕರ ಅನುಭವವನ್ನು ಹೆಚ್ಚಿಸುವಲ್ಲಿ ಮತ್ತು ಹೆಚ್ಚು ಪರಿಣಾಮಕಾರಿ ಮತ್ತು ವಾಸಯೋಗ್ಯ ಬೆಂಗಳೂರಿಗೆ ಕೊಡುಗೆ ನೀಡುವಲ್ಲಿ ಬಹಳ ಸಹಾಯ ಮಾಡುತ್ತದೆ. ನಿಮ್ಮ ತಂಡವು ನಮ್ಮ ಅಧಿಕಾರಿಗಳೊಂದಿಗೆ ಸಾಧ್ಯವಾದಷ್ಟು ಬೇಗ ಪರಸ್ಪರ ಸ್ವೀಕಾರಾರ್ಹ ಯೋಜನೆಯನ್ನು ರೂಪಿಸಲು ಸಹಕರಿಸಿದರೆ ನಾನು ಅದನ್ನು ತುಂಬಾ ಪ್ರಶಂಸಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.












Click it and Unblock the Notifications