ಮಹಾದಾಯಿ ಪ್ರತಿಭಟನೆ: ಮಾಹಿತಿ ಪಡೆದ ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್ 27: ಉತ್ತರ ಕರ್ನಾಟಕ ಬಂದ್ ಹಿನ್ನೆಲೆ ಬೆಂಗಳೂರು ಹಾಗೂ ಉತ್ತರ ಕರ್ನಾಟಕಾದ್ಯಂತ ಇರುವ ಸ್ಥಿಗತಿಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರ ಬಳಿ ದೂರವಾಣಿ ಮೂಲಕ ಮಾಹಿತಿ ಪಡೆದಿದ್ದಾರೆ.
ಜಿಲ್ಲಾ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಬೆಂಗಳೂರು, ಹಾಗೂ ಉತ್ತರ ಕರ್ನಾಟಕಾದ್ಯಂತ ಪರಿಸ್ಥಿತಿ ಹೇಗಿದೆ, ಮಹಾದಾಯಿ ವಿಚಾರವಾಗಿ ನಿರ್ಲಕ್ಷಯ ಬೇಡ, ಈ ವಿಚಾರವಾಗಿ ಸೂಕ್ತ ಗಮನ ನೀಡಬೇಕು. ಜಾಗರೂಕತೆಯಿಂದ ಹೆಜ್ಜೆ ಇಡಬೇಕು ಎಂದು ಸೂಚನೆ ನೀಡಿದ್ದಾರೆ. ಪರಿಸ್ಥಿತಿ ಹದಗೆಟ್ಟಿದೆ ಸೂಕ್ಷ್ಮ ರೀತಿಯಲ್ಲಿ ನಿಭಾಯಿಸಿ ಸೂಕ್ತ ಕ್ರಮಕೈಗೊಳ್ಳಲು ತಿಳಿಸಿದ್ದಾರೆ.

ಬೆಳಗ್ಗೆ ೮.೩೦ಕ್ಕೆ ಕೆಪಿಸಿಸಿ ಕಚೇರಿಗೆ ಬಿಬಿಎಂಪಿ ಆಡಳಿತ ಪಕ್ಷ ನಾಯಕ ರಿಜ್ವಾನ್ ಬೇಟಿ ನೀಡಿ ಬೆಂಗಳೂರಿನ ಸಂಪೂರ್ಣ ಮಾಹಿತಿಯನ್ನು ಪರಮೇಶ್ವರ್ ಅವರಿಗೆ ನೀಡಿದ್ದಾರೆ. ಬೆಂಗಳೂರಿನಲ್ಲೂ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲೂ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.












Click it and Unblock the Notifications