ಬೆಂಗಳೂರಲ್ಲಿ ₹22,000 ಕೋಟಿ ಬಂಡವಾಳ: ಸಿದ್ದರಾಮಯ್ಯ ಜತೆ ಫಾಕ್ಸ್‌ಕಾನ್‌ ಮುಖ್ಯಸ್ಥರ ಭೇಟಿ, ಸಿಎಂ ಸಲಹೆ

ಬೆಂಗಳೂರು, ಅಕ್ಟೋಬರ್ 05: ಐಫೋನ್ ಬಿಡಿಭಾಗಗಳ ತಯಾರಿಕಾ ಕಂಪನಿಯಾಗಿರುವ "ಫಾಕ್ಸ್‌ಕಾನ್‌' ಕಂಪನಿಯು ದೇವನಹಳ್ಳಿಯ ತನ್ನ ಘಟಕದಲ್ಲಿ ಕೈಗಾರಿಕಾ ಚಟುವಟಿಕೆ ಆರಂಭಿಸಿರುವುದು ಒಳ್ಳೆಯದು. ಇನ್ನೂ ಘಟಕದ ವಿಸ್ತರಣೆಗೆ ಅಗತ್ಯ ಇರುವ ಎಲ್ಲ ರೀತಿಯ ಸಹಕಾರವನ್ನು ನಮ್ಮ ರಾಜ್ಯ ಸರ್ಕಾರದಿಂದ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

"ಐಫೋನ್' ಮತ್ತು ಅದರ ಬಿಡಿಭಾಗಗಳ ತಯಾರಿಕೆಗೆ ಹೆಸರಾಗಿರುವ "ಫಾಕ್ಸ್‌ಕಾನ್‌' ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್‌ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಇಲ್ಲಿ ಭೇಟಿಯಾಗಿ, ಮತ್ತಷ್ಟು ಬಂಡವಾಳ ಹೂಡಿಕೆ ಮತ್ತಿತರ ಸಂಗತಿಗಳ ಬಗ್ಗೆ ಚರ್ಚಿಸಿದರು.

CM Siddaramaiah Assured full cooperate to Foxconn Unit in Bengaluru Which invest Rs 20 000 Cr

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು ಮಾತನಾಡಿ, ದೇವನಹಳ್ಳಿಯಲ್ಲಿರುವ ಘಟಕವು ಫಾಕ್ಸ್‌ಕಾನ್‌ ಕಂಪನಿಯ ಎರಡನೇ ಅತಿದೊಡ್ಡ ಘಟಕವಾಗಿದೆ. ಆಪಲ್‌ ಕಂಪನಿಗೆ ಇದು ಜಾಗತಿಕ ಮಟ್ಟದಲ್ಲಿ ಮುಂಚೂಣಿ ಪೂರೈಕೆದಾರ ಸಂಸ್ಥೆಯಾಗಿದೆ. ದೇವನಹಳ್ಳಿಯಲ್ಲಿ ತಯಾರಾಗುವ ಐಫೋನ್‌ಗಳನ್ನು ಜಾಗತಿಕ ಸ್ತರದಲ್ಲಿ ರಫ್ತು ಮಾಡಲಾಗುತ್ತಿದೆ. ಒಟ್ಟಾರೆಯಾಗಿ ಕಂಪನಿಯು ಇಲ್ಲಿ 22,000 ಸಾವಿರ ಕೋಟಿ ರೂ. ಹೂಡಿಕೆ ಮಾಡಿದೆ ಎಂದು ಅವರು ಮಾಹಿತಿ ನೀಡಿದರು.

ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್‌ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ್‌, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ ಎಚ್‌ ಮುನಿಯಪ್ಪ ಕೂಡ ಫಾಕ್ಸಕಾನ್ ಘಟಕ ಸ್ಥಾಪನೆ ಬಗ್ಗೆ ವಿವರವಾಗಿ ಸಮಾಲೋಚನೆ ನಡೆಸಿದರು.

300 ಎಕರೆ ಪ್ರದೇಶದಲ್ಲಿ ಫಾಕ್ಸ್‌ಕಾನ್ ಘಟಕ

ಒಟ್ಟು ಸುಮಾರು 300 ಎಕರೆ ಪ್ರದೇಶದಲ್ಲಿ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಐಫೋನ್ ಬಿಡಿಭಾಗ ತಯಾರಿಕೆ ಪ್ಲಾಂಟ್ ಸ್ಥಾಪಿಸಲಾಗುತ್ತಿದೆ. ಈ ಭೂಮಿ ನೀಡುವ ವಿಚಾರದಲ್ಲಿ ಇದ್ದ ತೊಡಗಕುಗಳನ್ನು 2023ರಲ್ಲಿ ನಿವಾರಿಸಿ ಅಗತ್ಯ ಜಾಗ ಕೊಡಲಾಗಿದೆ. ಆರಂಭಿಕ ಹಂತದಲ್ಲಿ 8500 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದ ಕಂಪನಿಯು ಘಟಕ ಸ್ಥಾಪನೆಯಲ್ಲಿ ಕಾರ್ಯಪ್ರವೃತ್ತವಾಗಿದೆ. ಇಲ್ಲಿ ಘಟಕ ಸ್ಥಾಪನೆ ಆಗುವುದರಿಂದ ಅಂದಾಜು 1500 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಈ ಹಿಂದೆ ಸಚಿವ ಎಂಬಿ ಪಾಟೀಲ್ ಅವರು ಮಾಹಿತಿ ನೀಡಿದ್ದರು.

ರಾಜ್ಯದಲ್ಲಿ ಸರ್ಕಾರ ಇತ್ತೀಚೆಗೆ ಕೈಗಾರಿಕಾ ನೀತಿ ಜಾರಿಗೆ ತಂದಿದೆ. ಇದರಿಂದ ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲ ಆಗುವ ಜೊತೆಗೆ ತೊಡಕುಗಳು ನಿವಾರಣೆ ಆಗುತ್ತವೆ. ಹೆಚ್ಚಿನ ವಿದೇಶಿ ಕಂಪನಿಗಳ ಹೂಡಿಕೆ ಸೆಳೆಯಲು ಇದು ಸಹ ಪೂರಕವಾಗಿದೆ. ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ (2022-27) ಮತ್ತು ವಿದ್ಯುತ್‌ ಚಾಲಿತ ವಾಹನ ಹಾಗೂ ಇಂಧನ ಸಂಗ್ರಹಣೆ ನೀತಿ (2017)ಯಡಿ ನಿಗದಿಗೊಳಿಸಿರುವ ಉತ್ತೇಜಕ ಕ್ರಮಗಳು ಈ ವಲಯದಲ್ಲಿ ಹೆಚ್ಚಿನ ಕೈಗಾರಿಕೆಗಳು ಸ್ಥಾಪನೆಯಾಗಲು ಸಹಕಾರಿಯಾಗಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+