ಸಿದ್ದರಾಮಯ್ಯ ಬೆಂಗಳೂರು ನಗರ ಪ್ರದಕ್ಷಿಣೆ ಮುಖ್ಯಾಂಶಗಳು

ಬೆಂಗಳೂರು, ಜೂನ್ 14 : ದೆಹಲಿ ಪ್ರವಾಸವನ್ನು ರದ್ದುಗೊಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಂಗಳೂರು ನಗರ ಪ್ರದಕ್ಷಿಣೆ ಆರಂಭಿಸಿದರು. ಗೃಹ ಕಚೇರಿ ಕೃಷ್ಣಾದಿಂದ ಹೊರಟ ಸಿದ್ದರಾಮಯ್ಯ ಅವರು ಮೈಸೂರು ರಸ್ತೆ ತಲುಪಿದರು.

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಬಿಬಿಎಂಪಿ ಮೇಯರ್ ಮಂಜುನಾಥ ರೆಡ್ಡಿ ಮುಂತಾದವರು ಸಿದ್ದರಾಮಯ್ಯ ಅವರ ಜೊತೆಗಿದ್ದಾರೆ. ಮೊದಲು ಗಾಳಿ ಆಂಜನೇಯ ಸ್ವಾಮಿ ದೇವಾಲಯ ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು, ಬಾಪೂಜಿನಗರ ರಾಜಾ ಕಾಲುವೆ ವೀಕ್ಷಣೆ ಮಾಡಿದರು. [ಬೆಂಗಳೂರು ರೌಂಡ್ಸ್ : ಪೀಣ್ಯ ಅಭಿವೃದ್ಧಿಗೆ 100 ಕೋಟಿ]

siddaramaiah

ಅಧಿಕೃತ ಕಾರ್ಯಕ್ರಮದಂತೆ ಸೋಮವಾರ ಮಧ್ಯಾಹ್ನ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಬೇಕಾಗಿತ್ತು. ರಾಜ್ಯಸಭೆ ಚುನಾವಣೆಯ ಗೆಲುವಿನ ಬಗ್ಗೆ ಹೈಕಮಾಂಡ್‌ಗೆ ವರದಿ ಕೊಟ್ಟು, ಸಂಪುಟ ಪುನಾರಚನೆಗೆ ಒಪ್ಪಿಗೆ ಪಡೆಯಬೇಕಾಗಿತ್ತು. ಆದರೆ, ತಮ್ಮ ಪ್ರವಾಸವನ್ನು ಅವರು ರದ್ದುಗೊಳಿಸಿದ್ದಾರೆ. [ಮಂತ್ರಿ ಪರಿಷತ್ ಸಭೆ ಕರೆದ ಸಿದ್ದರಾಮಯ್ಯ]

* ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಹೊಂದಿಕೊಡಂತಿರುವ ಬೃಹತ್ ಮಳೆ ನೀರು ಕಾಲುವೆಯ ಸ್ಥಳವನ್ನು ಮುಖ್ಯಂತ್ರಿಗಳು ಪರಿಶೀಲಿಸಿದರು. ಈ ರಾಜಾ ಕಾಲುವೆಯಲ್ಲಿ ಹೂಳು ತೆಗೆಯಬೇಕು. ತಡೆಗೋಡೆ ಎತ್ತರಿಸುವ ಕಾಮಗಾರಿ ಆರಂಭಿಸಬೇಕು ಎಂದು ಶಾಸಕ ಎಂ.ಕೃಷ್ಣಪ್ಪ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

* ಕಂಠೀರವ ಸ್ಟುಡಿಯೋ ಬಳಿ ನಿರ್ಮಾಣ ವಾಗುತ್ತಿರುವ ಅಂಡರ್ ಪಾಸ್ ಕಾಮಗಾರಿ ವೀಕ್ಷಣೆ ಮಾಡಿದ ಮುಖ್ಯಮಂತ್ರಿಗಳು ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಸೂಚಿಸಿದರು.

* ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಆಗಸ್ಟ್ 15ರೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಆದೇಶ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+