ಸೈಬರ್ ಅಪರಾಧ ನಿಗ್ರಹಕ್ಕೆ ಹೀಗೆ ಮಾಡಿ: ಪೊಲೀಸರಿಗೆ ಸಿದ್ದರಾಮಯ್ಯ ಕರೆ

ಬೆಂಗಳೂರು, ಏಪ್ರಿಲ್ 02: ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಮಾದಕ ವಸ್ತು ಮುಕ್ತ ಕರ್ನಾಟಕ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಗೌರವಿಸಿದರು. ಬಳಿಕ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ, ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧ ಹೊಂದಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗುತ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದರು.

CM Siddaramaiah Calls for Drug-Free Karnataka and Praises Police at Flag Day Ceremony

ಸೈಬರ್ ಅಪರಾಧ ತಡೆಗೆ ತಾಂತ್ರಿಕತೆ ಬಳಸಿ

ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆ ತಿಳಿಸಿದ ಸಿದ್ದರಾಮಯ್ಯ ಅವರು ಪುರಸ್ಕೃತರ ಶ್ರಮ ಮತ್ತು ಸೇವೆ ಶ್ಲಾಘಿಸಿದರು. ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ಚುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಳ್ಳಬೇಕು. ಅದರ ಮೂಲಕ ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದು ಅವರು ಕರೆ ನೀಡಿದರು.

ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಮುಖ್ಯಮಂತ್ರಿ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು. ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು.

CM Siddaramaiah Calls for Drug-Free Karnataka and Praises Police at Flag Day Ceremony

ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಇದು ಹೆಮ್ಮೆಯ ವಿಷಯ. ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ಧ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ಧವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು.

ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಸಮಾರಂಭ ಪಾಲ್ಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+