Siddaramaiah: ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ವಿರುದ್ಧ ಹೈಕೋರ್ಟ್ ಮೊರೆ ಹೋಗಲಿರುವ ಸಿಎಂ ಸಿದ್ದರಾಮಯ್ಯ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸೈಟು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ತಮ್ಮ ವಿರುದ್ಧ ವಿಚಾರಣೆ (ಪ್ರಾಸಿಕ್ಯೂಷನ್‌)ಗೆ ಅನುಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಕಾನೂನು ಹೋರಾಟದ ಮುಖಾಂತರವೇ ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಉತ್ತರ ಕೊಡಲು ಸಿಎಂ ಸಿದ್ದರಾಮಯ್ಯ ಸಜ್ಜಾಗಿದ್ದಾರೆ ಎನ್ನಲಾಗಿದೆ.

ಟಿ.ಜೆ. ಅಗ್ರಹಾಂ, ಪ್ರದೀಪ್ ಎಸ್‌.ಸಿ. ಮತ್ತು ಸ್ನೇಹಮಯಿ ಕೃಷ್ಣ ಎನ್ನುವ ಸಾಮಾಜಿಕ ಕಾರ್ಯಕರ್ತರು ನೀಡಿರುವ ದೂರುಗಳ ಆಧಾರದ ಮೇಲೆ ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲು ಶನಿವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ಕೊಟ್ಟಿದ್ದರು. ರಾಜ್ಯಪಾಲರ ನಡೆಗೆ ರಾಜ್ಯ ಬಿಜೆಪಿ ಭಾರಿ ವಿರೋಧ ವ್ಯಕ್ತಪಡಿಸಿದ್ದು, ಕಾನೂನು ಮುಖಾಂತರವೇ ಉತ್ತರ ಕೊಡುವುದಾಗಿ ಹೇಳಿತ್ತು.

CM Siddaramaiah Challenges Governor s Prosecution Nod in High Court

ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೈಸೂರಿನ ಐಷಾರಾಮಿ ಬಡಾವಣೆಗಳಲ್ಲಿ ಪತ್ನಿ ಪಾರ್ವತಿ ಅವರಿಗೆ ಪರ್ಯಾಯ ನಿವೇಶನ ಪಡೆಯಲು ಸಿದ್ದರಾಮಯ್ಯ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಆರೋಪವಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದು ಇದೀಗ ರಾಜಕೀಯ ಸಂಘರ್ಷಕ್ಕೂ ಕಾರಣವಾಗಿದ್ದು, ವಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿವೆ.

ಕಾಂಗ್ರೆಸ್, ಬಿಜೆಪಿ & ಜೆಡಿಎಸ್ ಪ್ರತಿಭಟನೆ

ಇದೇ ವಿಚಾರವಾಗಿ ಸೋಮವಾರ ಎಲ್ಲಾ ಪಕ್ಷಗಳು ಪ್ರತಿಭಟನೆ ಮಾಡಲು ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ವಿವಿಧ ಸಂಘಟನೆಗಳು ಇಂದು ರಾಜ್ಯಾದ್ಯಂತೆ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ನೀಡಲು ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕೂಡ ಹೋರಾಟ ಮಾಡಲು ನಿರ್ಧರಿಸಿವೆ.

ರಾಜೀನಾಮೆ ಕೊಡಲ್ಲ ಎಂದ ಸಿದ್ದರಾಮಯ್ಯ

ಯಾವುದೇ ಕಾರಣಕ್ಕೂ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಒತ್ತಡದ ಕಾರಣ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ, ಇದರ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಅವರು ಆರೋಪಿಸಿದ್ದಾರೆ.

ಸಚಿವ ಸಂಪುಟದ ಸದಸ್ಯರು ಕೂಡ ಸಿದ್ದರಾಮಯ್ಯ ಅವರಿಗೆ ಬೆಂಬಲ ಕೊಟ್ಟಿದ್ದು, ಅವರು ರಾಜೀನಾಮೆ ಕೊಡುವುದಿಲ್ಲ ಎಂದು ಹೇಳಿದ್ದಾರೆ. ರಾಜ್ಯಪಾಲರ ಕಚೇರಿ ಈಗ ಬಿಜೆಪಿ ಕಚೇರಿಯಾಗಿದ್ದು, ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+