ದೀಪಕ್ ಕೊಲೆ: ಕರಾವಳಿ ಸಚಿವರನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

Recommended Video

      ಮಂಗಳೂರು : ದೀಪಕ್ ರಾವ್ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ | Oneindia Kannada

      ಬೆಂಗಳೂರು, ಜನವರಿ 04: ಮಂಗಳೂರಿನ ಕಾಟಿಪಳ್ಳದಲ್ಲಿ ಬುಧವಾರ (ಜನವರಿ 3) ನಡೆದ ದೀಪಕ್ ಕೊಲೆ ಸೇರಿದಂತೆ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ಭಾಗದ ಸಚಿವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

      ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಸರಣಿ ಕೊಲೆ ಬಗ್ಗೆ ಆ ಭಾಗದ ಸಚಿವ ಯುಟಿ ಖಾದರ್ ಸೇರಿದಂತೆ ಹಲವರ ಜತೆ ಗುರುವಾರ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರು ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಸಚಿವ ಯುಟಿ ಖಾದರ್ ಅವರನ್ನು ತರಾಟೆಗೆ ತೆಗೆದುಕೊಂಡರು.

      ಮಂಗಳೂರಲ್ಲಿ ದೀಪಕ್ ಹತ್ಯೆ: ಚಿತ್ರಗಳಲ್ಲಿ ಪ್ರಕ್ಷುಬ್ಧ ಕರಾವಳಿ

      CM Siddaramaiah discussed with coastal ministers and MLA about serial killings in coastal area

      ಪದೇ-ಪದೇ ಇಂತಹ ಘಟನೆಗಳು ನಿಮ್ಮ ಜಿಲ್ಲೆಯಲ್ಲಿ ನಡೆದರೆ ಹೇಗೆ?, ಈ ಬಗ್ಗೆ ಹೈಕಮಾಂಡ್ ವರದಿ ಕೇಳುತ್ತಿದೆ. ಇದೇ ವಿಚಾರವನ್ನು ಚುನಾವಣೆಯಲ್ಲಿ ಬಿಜೆಪಿ ಬಳಸಿಕೊಳ್ಳುತ್ತಿದೆ. ಯಾವುದೇ ಕಾರಣಕ್ಕೂ ಕೋಮುಗಲಭೆ ಭುಗಿಲೇಳಬಾರದು ಎಂದು ಸಿದ್ದರಾಮಯ್ಯ ಅವರು ಯುಟಿ ಖಾದರ್ ಗೆ ಖಡಕ್ ಸೂಚನೆ ನೀಡಿದರು.

      ನಿಮ್ಮ-ನಿಮ್ಮ ಕ್ಷೇತ್ರಗಳಲ್ಲಿ ಹಿಡಿತ ಇಟ್ಟುಕೊಳ್ಳಿ. ಚುನಾವಣಾ ಸಮಯದಲ್ಲಿ ಇಂತಹ ಘಟನೆ ನಡೆದರೆ ಕಷ್ಟ ಎಂದು ಕರಾವಳಿ ಭಾಗದ ಸಚಿವ ಹಾಗೂ ಕಾಂಗ್ರೆಸ್ ಸಚಿವರಿಗೆ ಸೂಕ್ಷ್ಮವಾಗಿ ತಿಳಿ ಹೇಳಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+