Siddaramaiah: ಮುಂದಿನ ಸಂಪುಟದಲ್ಲಿ ಗ್ಯಾರಂಟಿಗಳ ಬಗ್ಗೆ ನಿರ್ಧಾರ ಮಾಡ್ತೀವಿ ಎಂದ ಸಿದ್ದರಾಮಯ್ಯ
ಬೆಂಗಳೂರು, ಮೇ 27: ಮುಂದಿನ ಸಂಪುಟ ಸಭೆಯಲ್ಲಿ ಕಾಂಗ್ರೆಸ್‌ನ ಗ್ಯಾರಂಟಿಗಳ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಶನಿವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.
ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪೂರ್ಣ ಪ್ರಮಾಣದ ಸಂಪುಟ ಈಗ ರಚನೆಯಾಗಿದೆ. ಗ್ಯಾರಂಟಿಗಳ ಜಾರಿ ಬಗ್ಗೆ ಸಂಬಂಧಿಸಿದ ಇಲಾಖೆಗಳಿ ಈಗಾಗಲೇ ಸೂಚನೆ ನೀಡಿದ್ದೇವೆ, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ದಾಖಲೆಗಳನ್ನು ಅಧಿಕಾರಿಗಳು ತರಲಿದ್ದು, ಎಲ್ಲವನ್ನು ಪರಿಶೀಲನೆ ಮಾಡಿದ ನಂತರ, ಯೋಜನೆಗಳನ್ನು ಜಾರಿ ಮಾಡುವ ಬಗ್ಗೆ ಅದೇ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಸರಿಯಾದ ಸ್ಪಷ್ಟನೆ ಇಲ್ಲದೆ ಬೆಸ್ಕಾಂ ಮತ್ತು ಕೆಎಸ್ಆರ್ ಟಿಸಿ ಅಧಿಕಾರಿಗಳು ಹೈರಾಣಾಗಿದ್ದಾರೆ. ವಿದ್ಯುತ್ ಬಿಲ್ ಕಟ್ಟಲ್ಲ, ಟಿಕೆಟ್ ತಗೊಳಲ್ಲ ಎಂದು ಅಧಿಕಾರಿಗಳ ಜೊತೆ ತಕರಾರು ಮಾಡುತ್ತಿದ್ದು, ಈ ಬಗ್ಗೆ ಸರ್ಕಾರ ಆಗಷ್ಟು ಬೇಗ ನಿರ್ಧಾರ ಮಾಡಬೇಕು ಎಂದು ಅಧಿಕಾರಿಗಳು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಸಚಿವ ಸ್ಥಾನ ಹಂಚಿಕೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ
ನೂತನ ಸಂಪುಟದಲ್ಲಿ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರನ್ನು ಸಿದ್ದರಾಮಯ್ಯ ಸಮಧಾನಪಡಿಸಲು ಯತ್ನಿಸಿದ್ದಾರೆ. ಕೆಲವರಿಗೆ ಸಚಿವ ಸ್ಥಾನ ಸಿಗದ ಬಗ್ಗೆ, ಕೆಲವು ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಗದ ಬಗ್ಗೆ ಕೂಡ ಅವರು ಸ್ಪಷ್ಟನೆ ನೀಡಿದ್ದಾರೆ.
"ಎಲ್ಲವನ್ನೂ ಯೋಚಿಸಿಯೇ ಸಂಪುಟ ರಚನೆ ಮಾಡಲಾಗಿದೆ. ಎರಡರಿಂದ ಐದು ಬಾರಿ ಗೆದ್ದಿರುವ ಶಾಸಕರಿಗೆ ನಾವು ಮಂತ್ರಿ ಸ್ಥಾನ ಕೊಟ್ಟಿದ್ದೇವೆ. ಉದ್ದೇಶಪೂರ್ವಕವಾಗಿ ಯಾರನ್ನೂ ಸಂಪುಟದಿಂದ ಹೊರಗಿಟ್ಟಿಲ್ಲ" ಎಂದು ಸ್ಪಷ್ಟನೆ ನೀಡಿದರು.
ಈ ಬಾರಿ ಸಂಪುಟದಲ್ಲಿ ಹಳಬರ ಜೊತೆ ಹೊಸಬರಿಗೂ ಅವಕಾಶ ನೀಡಬೇಕು ಎಂದು ಹೈಕಮಾಂಡ್ ಮೊದಲೇ ಸೂಚನೆ ನೀಡಿತ್ತು. ಇದೇ ಕಾರಣಕ್ಕೆ ನಾವು ಹಳಬರ ಜೊತೆ ಕೆಲವು ಹೊಸ ಮುಖಗಳಿಗೂ ಅವಕಾಶ ಕೊಟ್ಟಿದ್ದೇವೆ. ಈಗ ಮಂತ್ರಿಮಂಡಲದಲ್ಲಿ ಹೊಸಬರು ಮತ್ತು ಹಳಬರ ಸಮ್ಮಿಶ್ರಣ ಇದೆ ಎಂದು ಸಮರ್ಥನೆ ನೀಡಿದರು.
ಇನ್ನು ಹಲವು ಜಿಲ್ಲೆಗಳಿಗೆ ಸಚಿವ ಸಂಒಉಟದಲ್ಲಿ ಪ್ರಾತಿನಿಧ್ಯ ಸಿಗದೇ ಇರುವ ಬಗ್ಗೆ ಕೂಡ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಕೊಡಗು, ಹಾವೇರಿ, ಚಿಕ್ಕಮಗಳೂರು, ಹಾಸಸ ಸೇರಿ ಹಲವು ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡಲು ಸಾಧ್ಯವಾಗಿಲ್ಲ ಎಂದು ಹೇಳಿದರು.












Click it and Unblock the Notifications