ಬಿಜೆಪಿ ಎಂದಿಗೂ ಅಧಿಕಾರಕ್ಕೆ ಬರಬಾರದು: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜುಲೈ 14 : ಬಿಜೆಪಿ ಮುಕ್ತ ಭಾರತ ಮಾಡುತ್ತೇವೆ ಎಂದು ನಾವು ಹೇಳಲ್ಲ, ಆದರೆ ಬಿಜೆಪಿಯವರು ಎಂದಿಗೂ ಅಧಿಕಾರಕ್ಕೆ ಬರಬಾರದು ಅವರು ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಚಾಟಿ ಬೀಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಧರ್ಮಸ್ಥಳದ ಧರ್ಮಾಧಿಕಾರಿಯವರು ಪತ್ರ ಮುಖೇನ ಶಕ್ತಿ ಯೋಜನೆಯ ಮೂಲಕ ಮಹಿಳೆಯರು ಅಲ್ಲಿಗೆ ಬಂದು ಮುಖ್ಯಮಂತ್ರಿಗಳ ಹೆಸರಿನಲ್ಲಿ ಪೂಜೆ ಮಾಡಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಹಿಳಾ ಮೀಸಲಾತಿ ಹೆಚ್ಚಿಸಿದವರು ಕಾಂಗ್ರೆಸ್‌ನವರು. ಈಗ ಮಹಿಳಾ ಮೀಸಲಾತಿ ಮಸೂದೆ ಕೇಂದ್ರ ಸರ್ಕಾರದಲ್ಲಿದ್ದು, ಬಿಜೆಪಿಯವರು ಅದನ್ನು ಮಾಡಿಸಲಿ ಎಂದು ಸವಾಲು ಹಾಕಿದರು.

ತಮ್ಮ ಹೆಸರಿನಲ್ಲಿ ಪೂಜೆ ಮಾಡಿಸಿದ ಮಹಿಳೆಯರಿಗೆ ಕೈಮುಗಿದ ಸಿದ್ದರಾಮಯ್ಯ ಶಕ್ತಿ ಯೋಜನೆ ಯಶಸ್ವಿಯಾಗಿದೆ ಇದೇ ಸಾಕ್ಷಿ ಎನ್ನುವಂತೆ ಮಾತನಾಡಿದರು. ಶಕ್ತಿ ಯೋಜನೆಯಿಂದ ಕೆಎಸ್‌ಆರ್ ಟಿಸಿ ಕೂಡ ಸುಧಾರಣೆಯಾಗುತ್ತಿದೆ. ಹೊಸ ಬಸ್ ಖರೀದಿಗೆ ಕೂಡ ಚಿಂತನೆ ಮಾಡುತ್ತಿದ್ದೇವೆ ಎಂದರು.
4000 ಬಸ್ ಖರೀದಿಗೆ ತೀರ್ಮಾನ
ಕರ್ನಾಟಕ ರಾಜ್ಯದಲ್ಲಿ 7 ಕೋಟಿ ಜನರಲ್ಲಿ ಶೇ. 50 ರಷ್ಟು ಮಹಿಳೆಯರಿದ್ದಾರೆ. 2011ರ ಜನಗಣತಿಯ ಪ್ರಕಾರ ಮಹಿಳೆಯರು ಕಡಿಮೆ ಇದ್ದರು. ಆದರೆ ಈಗ ಕೆಲ ವರದಿಗಳ ಪ್ರಕಾರ ಅಸಮಾನತೆ ಕಡಿಮೆಯಾಗುತ್ತಿದೆ. ಎಲ್ಲ ಮಹಿಳೆಯರೂ ಖುಷಿಯಾಗಿದ್ದಾರೆ. ಇದುವರೆಗೆ ಶಕ್ತಿ ಯೋಜನೆಯ ಮೂಲಕ 18 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ವಿದ್ಯಾರ್ಥಿಗಳಿಗೆ, ಪುರುಷರಿಗೆ ತೊಂದರೆಯಾಗುತ್ತಿದೆ ಎಂದು ಟೀಕಿಸಿದರು .13 ಸಾವಿರ ಜನ ಕಂಡಕ್ಟರ್ , ಸಾರಿಗೆ ಸಿಬ್ಬಂದಿ ನೇಮಕ ಹಾಗೂ 4000 ಬಸ್ ಖರೀದಿಸಲು ಸರ್ಕಾರ ತೀರ್ಮಾನಿಸಿದೆ ಎಂದರು.
ಮಹಿಳೆಯರ ಪ್ರಯಾಣದಿಂದ ಪ್ರವಾಸೋದ್ಯಮ , ಉದ್ಯೋಗ ಹೆಚ್ಚಾಗುತ್ತಿದೆ. ಒಂದು ದಿನಕ್ಕೆ 49.6 ಲಕ್ಷ ಪ್ರಯಾಣಿಸುತ್ತಿದ್ದಾರೆ. 28 ಕೋಟಿ 94 ಲಕ್ಷ , 4.72 ಕೋಟಿ ರೂ. ದಿನಕ್ಕೆ ಆದಾಯ ಜಾಸ್ತಿಯಾಗಿದೆ. ಮಹಿಳೆಯರೂ ಆರ್ಥಿಕ ಚಟುವಟಿಕೆಯಲ್ಲಿ ಭಾಗವಾಗಬೇಕು. ಯಾರ ಕೈಯಲ್ಲಿ ದುಡ್ಡಿಲ್ಲವೋ, ಅಂತಹವರ ಕೈಗೆ ದುಡ್ಡು ಸಿಗಬೇಕು. ಮಹಿಳೆಯರು ಸಾವಿರಾರು ಕಾಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಮಹಿಳೆಯರಿಗೆ, ದಲಿತರಿಗೆ, ಬಡವರಿಗೆ ಆರ್ಥಿಕ ಸಬಲತೆ ತರುವ ಉದ್ದೇಶಿಂದ ಇಂತಹ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.
ಶಕ್ತಿ ಯೋಜನೆ ಬಹಳ ಯಶಸ್ವಿಯಾಗಿ ಜಾರಿಯಾಗುತ್ತಿದೆ. ಈಗಾಗಲೇ 3 ಗ್ಯಾರಂಟಿ ಜಾರಿ ಮಾಡಿದ್ದೇವೆ. ಇದಕ್ಕೆ 4000 ಕೋಟಿ ಶಕ್ತಿ ಯೋಜನೆಗೆ ಖರ್ಚಾಗುತ್ತಿವೆ. ಈ ವರ್ಷ ಉಳಿದ ಅವಧಿಗೆ 2,800 ರಿಂದ 3000 ಕೋಟಿ ವೆಚ್ಚವಾಗಲಿದೆ. ಕೆಎಸ್‌ಆರ್ ಟಿಸಿ ಯೂ ಕೂಡ ಸುಧಾರಿಸುತ್ತಿದೆ ಎಂದರು.
ಗೃಹ ಜ್ಯೋತಿ ಯೋಜನೆಯಲ್ಲಿ ಉಳಿತಾಯ
ಜುಲೈ 1 ರಿಂದ ಜಾರಿಗೆ ಬರುತ್ತದೆ ಇದರಲ್ಲಿಯೂ ಹುಳುಕನ್ನು ಹುಡುಕುತ್ತಿದ್ದಾರೆ. ಸರಾಸರಿ ವಿದ್ಯುತ್ ವೆಚ್ಚ ಉಳಿತಾಯವಾದರೆ, ಆ ಹಣ ಜನರಿಗೆ ಉಳಿತಾಯವಾಗುತ್ತಿದೆ. ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳಿಗೆ ಎಸ್‌ಸಿ, ಎಸ್‌ಟಿ ಸಮುದಾಯದವರು 75 ಯೂನಿಟ್ ಬಳಸುತ್ತಾರೆ. ಅದರ ಸರಾಸರಿ ಮೇಲೆ ಶೇ. 10 ಸೇರಿಸಿ , ವಿದ್ಯುತ್ ಉಚಿತವಾಗುತ್ತದೆ ಎಂದು ವಿವರಿಸಿದರು.
ವಿರೋಧ ಪಕ್ಷಗಳಿಗೆ ಸಿದ್ದು ಚಾಟಿ
20 ಮೇ ರಂದು ಅಧಿಕಾರಕ್ಕೆ ಬಂದ ತಕ್ಷಣ , ಸರ್ಕಾರ 5 ಗ್ಯಾರೆಂಟಿಗಳಿಗೆ ತಾತ್ವಿಕ ಅನುಮೋದನೆ ನೀಡಿತು. ಜೂನ್ 8 ರಂದು ಯಾವ ಯೋಜನೆಗಳು ಯಾವಾಗ ಜಾರಿಯಾಗಬೇಕೆಂದೂ ನಿರ್ಧರಿಸಲಾಯಿತು. ಆಯವ್ಯಯದಲ್ಲಿ 5 ಗ್ಯಾರೆಂಟಿಗಳಿಗೂ ಹಣ ನಿಗದಿಪಡಿಸಲಾಗಿದೆ. ಇಷ್ಟು ಹಣ ಎಲ್ಲಿಂದ ಬರುತ್ತದೆ , ರಾಜ್ಯ ಹೇಗೆ ನಡೆಸುತ್ತಾರೆ ಎಂದು ಟೀಕಿಸಿದರು. ಗ್ಯಾರೆಂಟಿಗಳಿಗೆ ಷರತ್ತುಗಳನ್ನು ಹಾಕಿದ್ದಿರಿ ಎಂದು ಈಗ ಟೀಕಿಸುತ್ತಿದ್ದಾರೆ. ಷರತ್ತುಗಳಿಲ್ಲದೇ ಯೋಜನೆ ಜಾರಿ ಮಾಡಿ ಎಂದು ಹೋರಾಟ ಮಾಡಿದರು. ಗೃಹ ಜ್ಯೋತಿಯಡಿ ಎಲ್ಲರಿಗೂ 200 ಯೂನಿಟ್ ಕೊಡಿ ಎನ್ನುವುದು ಅವಿವೇಕದ ತರ್ಕ ಎಂದು ಚಾಟಿ ಬೀಸಿದರು.
ಬಿಜೆಪಿಯವರು 7 ಜಿಲ್ಲೆಗಳಲ್ಲಿ ಮತಗಳನ್ನೇ ಪಡೆದಿಲ್ಲ. ಬಿಜೆಪಿ ಮುಕ್ತ ಭಾರತವನ್ನು ಮಾಡುತ್ತೇವೆ ಎಂದು ನಾವು ಹೇಳುವುದಿಲ್ಲ. ಬಿಜೆಪಿಯವರು ಎಂದಿಗೂ ಅಧಿಕಾರಕ್ಕೆ ಬರಬಾರದು . ರಾಜ್ಯ ಅಭಿವೃದ್ಧಿ ಆಗಲ್ಲ. ಜನಪರ ಕೆಲಸಗಳು ಆಗಲ್ಲ. ದಲಿತರಿಗೆ , ಬಡವರಿಗೆ , ರೈತರಿಗೆ ನ್ಯಾಯ ಸಿಗುವುದಿಲ್ಲ. ಬಿಜೆಪಿಯವರು ವಿರೋಧಪಕ್ಷದಲ್ಲಿ ಸಕ್ರಿಯವಾಗಿದ್ದಾರೆ. ರಾಜ್ಯದ ಜನತೆಯ ನಿರೀಕ್ಷೆಗೆ ತಕ್ಕಂತೆ ಮಾತನಾಡುತ್ತೇನೆ. ನಮ್ಮ ಸರ್ಕಾರದಿಂದ ರಾಜ್ಯದ ಜನತೆ ಸಂತುಷ್ಟರಾಗಿದ್ದಾರೆ ಎಂದರು.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು











Click it and Unblock the Notifications