ರಾಜ್ಯದಲ್ಲಿ ಫಿಲ್ಮ್ ಸಿಟಿ: ಡಾ. ರಾಜ್‌ಕುಮಾರ್ ಕನಸು ನನಸು ಮಾಡುತ್ತೇನೆಂದು ಸಿಎಂ ಭರವಸೆ

ಬೆಂಗಳೂರು ಜೂನ್ 30: ರಾಜ್ಯದಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡುವ ಡಾ. ರಾಜ್‌ಕುಮಾರ್ ಅವರ ಕನಸು ನನಸು ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಇಂದು ಭರವಸೆ ನೀಡಿದರು.

ನಗರದ ಶಿವಾನಂದ ಸರ್ಕಲ್ ಬಳಿ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನೆರೆಯ ತೆಲಂಗಾಣದ ಹೈದರಾಬಾದ್‌ನಲ್ಲಿ ಫಿಲಂ ಸಿಟಿ ಇದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಚಿತ್ರನಗರಿ ನಿರ್ಮಿಸಬೇಕೆಂಬುದು ಡಾ.ರಾಜ್‌ಕುಮಾರ್ ಅವರ ಕನಸಾಗಿತ್ತು. ಇದಕ್ಕಾಗಿ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಅಣ್ಣವ್ರಾ ಕನಸು ನನಸು ಮಾಡುತ್ತೇವೆ ಎಂದು ಭರವಸೆ ನೀಡಿದರು.

CM Siddaramaiah promised to make Dr Rajkumar s dream come true

1972 ರಿಂದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದವರು ಅನೇಕ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹಳ ಕಷ್ಟದ ದಿನಗಳಿದ್ದರೂ ಕೂಡ ಚಲನಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ನಿರ್ಮಾಪಕರಿಗೆ ಅಭಿನಂದಿಸುತ್ತೇನೆ. ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ. ಆರ್ಥಿಕ ಸಹಾಯವನ್ನು ಸಂಘ ಕೇಳಿಯೇ ಇಲ್ಲ. ಸರ್ಕಾರದಿಂದ ಆರ್ಥಿಕ ಸಹಾಯ ಮಾಡಿಯೇ ಮಾಡುತ್ತದೆ ಎಂದು ಹೇಳಿದರು.

ಮೈಸೂರಿನಲ್ಲಿ ಚಿತ್ರ ನಗರಿ ನಿರ್ಮಾಣವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಕೈಗೊಳ್ಳಲಿದ್ದು, ನೂರು ಎಕರೆಗೂ ಹೆಚ್ಚು ಜಮೀನು ಒದಗಿಸಲಾಗಿದೆ. ಚಿತ್ರನಗರಿ ಡಾ. ರಾಜ್​​ಕುಮಾರ್ ಅವರ ಕನಸಾಗಿತ್ತು. ಅದನ್ನು ನನಸಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಸಿಎಂ ತಿಳಿಸಿದರು.

CM Siddaramaiah promised to make Dr Rajkumar s dream come true

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ''ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ರಾತ್ರಿ 8.00 ಗಂಟೆಗೆ ಭೇಟಿಗೆ ಸಮಯ ಕೊಟ್ಟಿದ್ದರು. ಈ ಕಾರ್ಯಕ್ರಮಕ್ಕಾಗಿ ನಿನ್ನೆಯೇ ದೆಹಲಿಯಿಂದ ಹೊರಟು ಉದ್ಘಾಟನೆ ತಪ್ಪಿಸಬಾರದೆಂದು ಆಗಮಿಸಿದ್ದೇನೆ. ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರ ಮೊದಲಿನಿಂದಲೂ ಎಲ್ಲಾ ರೀತಿಯ ಸಹಾಯವನ್ನು ಮಾಡುತ್ತಾ ಬಂದಿದೆ, ಮುಂದೆಯೂ ಮಾಡಲಿದೆ. ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣವನ್ನು ಪಿ.ಪಿ.ಪಿ ಮಾದರಿಯಲ್ಲಿ ಕೈಗೊಳ್ಳಲಿದ್ದು, ನೂರು ಎಕರೆಗೂ ಹೆಚ್ಚು ಜಮೀನು ಒದಗಿಸಲಾಗಿದೆ.

ಚಿತ್ರನಗರಿ ಡಾ|| ರಾಜ್ ಕುಮಾರ್ ಅವರ ಕನಸಾಗಿತ್ತು, ಅದನ್ನು ನನಸಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿ 1972 ರಿಂದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದವರು ಬಹಳ ಕಷ್ಟದ ದಿನಗಳಿದ್ದರೂ ಕೂಡ ಚಲನಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ನಿರ್ಮಾಪಕರಿಗೆ ಅಭಿನಂದಿಸುತ್ತೇನೆ. ಸಂಘಟ ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ'' ಎಂದು ಬರೆದಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಶಿವರಾಜ್ ಕುಮಾರ್, 'ಭಾನುವಾರ ಇಂತಹ ಕಾರ್ಯಕ್ರಮಗಳಿಗೆ ಯಾರು ಬರೋದಿಲ್ಲ ಅಂಥದರಲ್ಲಿ ಇವತ್ತು ಸಿಎಂ ಸಿದ್ದರಾಮಯ್ಯ ಬಂದಿದ್ದಾರೆ. ನಮ್ಮ ಚಿತ್ರರಂಗದ ಎಲ್ಲಾ ಸಮಸ್ಯೆಗಳನ್ನ ಬಗೆಹರಿಸಲು ಸರ್ಕಾರ ವಿದೆ. ಅಪ್ಪಾಜಿಗೆ ಸಿದ್ಧರಾಮಯ್ಯ ಮೇಲೆ ವಿಶೇಷ ಗೌರವವಿತ್ತು. ನಮಗೂ ಕೂಡ ಇದೆ ಎಂದಿದ್ದಾರೆ. ಬಳಿಕ ಇದು ಕೇವಲ ಕಟ್ಟಡ ಅಲ್ಲ ಅನ್ನದಾತರ ಮನೆಯಾಗಿದೆ. ನಿರ್ಮಾಪಕರ ಜೊತೆ ಸದಾ ನಾನು ಇರುತ್ತೇನೆ' ಎಂದು ಶಿವಣ್ಣ ಬೆಂಬಲ ಸೂಚಿಸಿದ್ದಾರೆ.

ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿಯೇ ದೆಹಲಿಯಿಂದ ಆಗಮಿಸಿದ್ದಾಗಿ ಮುಖ್ಯಮಂತ್ರಿ ತಿಳಿಸಿದರು.ರಾಜ್ಯಸಭಾ ಸದಸ್ಯ ಜಗ್ಗೇಶ್‌, ನಟ ಶಿವರಾಜ್‌ಕುಮಾರ್‌, ನಟ ಹಾಗೂ ಸಂಗೀತ ನಿರ್ದೇಶಕ ಸಾಧುಕೋಕಿಲ, ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್‌, ಸಚಿವ ಭೈರತಿ ಸುರೇಶ್‌, ಡಾ.ರಾಜಕುಮಾರ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+