ಗೌರಿ ಲಂಕೇಶ್ ಹತ್ಯೆ ಅತ್ಯಂತ ಹೇಯ ಕೃತ್ಯː ಸಿದ್ದರಾಮಯ್ಯ
ಬೆಂಗಳೂರು, ಸೆ. 05: ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಅವರ ಮನೆ ಮುಂದೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಗೌರಿ ಲಂಕೇಶ್ ಅವರ ಹತ್ಯೆ ಅತ್ಯಂತ ಹೇಯ ಕೃತ್ಯ, ಈ ಬಗ್ಗೆ ತನಿಖೆ ನಡೆಸಿ, ದುಷ್ಕರ್ಮಿಗಳು ಕೂಡಲೇ ಬಂಧಿಸುವಂತೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಮಾಜ ಮುಖಿಯಾಗಿ ಅವರು ಯಾವಾಗಲೂ ಕೆಲ್ಸ ಮಾಡುತ್ತಿದ್ದರು. ಮೂಲ ಭೂತ, ಕೋಮುವಾದದ ವಿರುದ್ಧ ಹೋರಾಟ ಮಾಡುತ್ತಿದ್ದರು. ಪೊಲೀಸರಿಗೆ ಈಗಾಗಲೇ ಸೂಚನೆ ಕೊಟ್ಟಿದ್ದೇನೆ. 3 ವಿಶೇಷ ತಂಡ ರಚನೆ ಮಾಡಿ, ದುಷ್ಕರ್ಮಿಗಳನ್ನು ಬಂಧಿಸುವಂತೆ ಸೂಚಿಸಿದ್ದೇನೆ ಎಂದರು.












Click it and Unblock the Notifications