ಕಾವೇರಿ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಶಿಫ್ಟ್, ಅದೃಷ್ಟದ ಮನೆ ಡಿಕೆಶಿಗೆ; ಯಾವ ಸಚಿವರಿಗೆ ಯಾವ ಮನೆ?

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಿರೀಕ್ಷಿಸಿದ ರೀತಿಯಲ್ಲಿ 135 ಸ್ಥಾನಗಳೊಂದಿಗೆ ಪೂರ್ಣ ಬಹುಮತ ಪಡೆದು ರಾಜ್ಯದಲ್ಲಿ ನೂತನ ಸರ್ಕಾರ ರಚಿಸಿದೆ. ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಮತ್ತು 8 ಶಾಸಕರು ಸಂಪುಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇನ್ನು ಖಾತೆ ಹಂಚಿಕೆಯಾಗಿಲ್ಲವಾದರೂ, ಪ್ರಮುಖ ಖಾತೆಗಳಿಗೆ ಈ ಸಚಿವರು ಬೇಡಿಕೆ ಇಟ್ಟಿದ್ದಾರೆ. ಇದರ ನಡುವೆಯೇ ನೂತನ ಸಚಿವರಿಗೆ ಮನೆ ಹಂಚಿಕೆ ಮಾಡಲಾಗಿದೆ.

List of Ministers With Allotted Bungalow in Karnataka

ಈವರೆಗೆ ಸಿದ್ದರಾಮಯ್ಯ ಅವರಿದ್ದ ಸರ್ಕಾರಿ ಬಂಗಲೆ ಕುಮಾರಕೃಪಾ ನಿವಾಸಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಿಫ್ಟ್ ಆಗಲಿದ್ದಾರೆ. ಇದು ಸಿದ್ದರಾಮಯ್ಯನವರ ಅದೃಷ್ಟ ಮನೆ ಎಂದೇ ಹೇಳಲಾಗುತ್ತದೆ.

ಇನ್ನು ಸಿಎಂ ಸಿದ್ದರಾಮಯ್ಯನವರು ಕಾವೇರಿ ಸರ್ಕಾರಿ ನಿವಾಸ ಹಂಚಿಕೆ ಮಾಡಲಾಗಿದೆ. ಸದ್ಯ ಅಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ವಾಸವಿದ್ದಾರೆ. ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಶಿಫ್ಟ್ ಆದ ನಂತರ, ಡಿ.ಕೆ. ಶಿವಕುಮಾರ್ ಕುಮಾರಕೃಪಾದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

List of Ministers With Allotted Bungalow in Karnataka

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿದ್ದ ನಿವಾಸವನ್ನು ಸಚಿವ ಎಂ.ಬಿ. ಪಾಟೀಲ್‌ಗೆ ನಿಗದಿ ಮಾಡಲಾಗಿದೆ. ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿದ್ದ ವಸತಿ ಗೃಹವನ್ನು ನೂತನ ಸಚಿವ ಪ್ರಿಯಾಂಕ್ ಖರ್ಗೆಗೆ ಅವರಿಗೆ ಹಂಚಿಕೆ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಅದೃಷ್ಟದ ನಿವಾಸ ಕುಮಾರಕೃಪಾ ಗೆಸ್ಟ್ ಹೌಸ್ ತನಗೇ ಬೇಕೆಂಬ ಬೇಡಿಕೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಇಟ್ಟಿದ್ದರು. ಅಂದುಕೊಂಡಂತೆ ನೂತನ ಸಿದ್ದರಾಮಯ್ಯ ಅವರಿದ್ದ ಅದೃಷ್ಟದ ಮನೆ ಸಿಕ್ಕಿದ್ದು, ಇಲ್ಲಿಂದಲೇ ಸಿಎಂ ಹುದ್ದಗೇರಲು ಕಾತರರಾಗಿದ್ದಾರೆ.

ಸಿದ್ದರಾಮಯ್ಯ ಅವರು ಈಗ ವಾಸವಿರುವ ನಿವಾಸ ಅದೃಷ್ಟದ ಮನೆ ಎಂದು ಹೇಳಲಾಗುತ್ತದೆ. ಈ ಹಿಂದೆ 2013ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದಾಗಲೂ ಸಿದ್ದರಾಮಯ್ಯ ಅವರು ಇದೇ ನಿವಾಸದಲ್ಲಿದ್ದರು. 5 ವರ್ಷ ಸಂಪೂರ್ಣ ಆಡಳಿತವನ್ನು ನಡೆಸಿದ್ದರು. ಇದೀಗ ಆ ಅದೃಷ್ಟದ ಮನೆ ಡಿ.ಕೆ ಶಿವಕುಮಾರ್ ಪಾಲಾಗಿದೆ.

ಯಾವ ಸಚಿವರಿಗೆ ಯಾವ ಮನೆ ಹಂಚಿಕೆ?

ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸ
ಡಿಸಿಎಂ ಡಿ.ಕೆ. ಶಿವಕುಮಾರ್ ನಂ.1, ಕುಮಾರಕೃಪಾ ಈಸ್ಟ್, ಗಾಂಧಿ ಭವನ ರಸ್ತೆ
ಸಚಿವ ಎಂ.ಬಿ. ಪಾಟೀಲ್ ನಂ.1, ರೇಸ್ ವ್ಯೂ ಕಾಟೇಜ್, ರೇಸ್ ಕೋರ್ಸ್ ರಸ್ತೆ
ಸಚಿವ ಕೆ.ಜೆ. ಜಾರ್ಜ್ ನಂ.2, ರೇಸ್ ವ್ಯೂ ಕಾಟೇಜ್, ರೇಸ್ ಕೋರ್ಸ್ ರಸ್ತೆ
ಸಚಿವ ಜಿ. ಪರಮೇಶ್ವರ್ ನಂ.94/ಎ, 9ನೇ ಕ್ರಾಸ್, ಸದಾಶಿವನಗರ, ಆರ್ಎಂವಿ ಬಡಾವಣೆ
ಸಚಿವ ಪ್ರಿಯಾಂಕ್ ಖರ್ಗೆ ನಂ.4, ರೇಸ್ ವ್ಯೂ ಕಾಟೇಜ್, ರೇಸ್ ಕೋರ್ಸ್ ರಸ್ತೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+