CM-DCM Breakfast: ನಾಳೆ ಡಿಕೆಶಿ ಮನೆಯಲ್ಲಿ ಸಿದ್ದರಾಮಯ್ಯ ಮೀಟಿಂಗ್: ಬ್ರೇಕ್‌ಫಾಸ್ಟ್‌ಗೆ ವೆಜ್ & ನಾನ್ ವೆಜ್..!
ಬೆಂಗಳೂರು, ಡಿಸೆಂಬರ್ 01: ಕರ್ನಾಟಕ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು, ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡುವೆ ಬ್ರೇಕ್‌ಫಾಸ್ಟ್ ಪಾಲಿಟಿಕ್ಸ್ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಬ್ರೇಕ್ ಫಾಸ್ಟ್ ಮಾಡಿದ ಬೆನ್ನಲ್ಲೆ, ಅವರು ತಮ್ಮ ಮನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ್ದಾರೆ. ಮಂಗಳವಾರ ಬೆಳಗ್ಗೆ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ಅವರ ಮನೆಗೆ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ. ಅವರಿಗಾಗಿ ನಾಟಿ ಕೋಟಿ ಸಾರು, ಸಿಹಿ ಹಾಗೂ ಇತರ ತಿಂಡಿಗಳು ತಯಾರಾಗಲಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಡಿಸಿಎಂ ಹಾಗೂ ಸಿಎಂ ಇಬ್ಬರು ಒಟ್ಟಿಗೆ ಉಪಹಾರ ಮಾಡಿ ತಮ್ಮ ಮಧ್ಯ ಭಿನ್ನಾಭಿಪ್ರಾಯ ಇಲ್ಲ. ತಾವು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ತಿಳಿಸಿ ಒಗ್ಗಟ್ಟಿನ ಸಂದೇಶ ರವಾನಿಸಿದ್ದರು. ಅದರ ಬೆನ್ನಲ್ಲೆ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತಮ್ಮ ಮನೆಗೆ ಉಪಹಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ.

ಡಿಸಿಎಂ ಆಹ್ವಾನ ಒಪ್ಪಿದ ಸಿಎಂ ಸಿದ್ದರಾಮಯ್ಯ ತಮ್ಮ ಆಹ್ವಾನದಂತೆ ಮನಗೆ ಬರುವುದಾಗಿ ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ 9.30ಕ್ಕೆ ಉಪಹಾರದ ಜೊತೆಗೆ ಒಂದಷ್ಟು ರಾಜಕೀಯ ಬೆಳವಣಿಗೆಗಳ ಚರ್ಚೆ ನಡೆಸಲಿದ್ದಾರೆ. ಇತ್ತ ಅಧಿಕಾರ ಹಂಚಿಕೆಗೆ ಕಿತ್ತಾಡಿದ್ದ ಉಭಯ ನಾಯಕರಿಂದ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಶುರುವಾಗಿದೆ ಎಂದು ವಿಪಕ್ಷ ನಾಯಕರು ಮಾತನಾಡಿಕೊಳ್ಳುತ್ತಿದ್ದಾರೆ.
ಸಿಎಂಗೆ ಇಷ್ಟದ ನಾಟಿ ಕೋಳಿ ಸಾರು, ಉಪಹಾರ ರೆಡಿ..!
ಸಿದ್ದರಾಮಯ್ಯ ಅವರು ಡಿಸಿಎಂ ನಿವಾಸಕ್ಕೆ ತೆರಳುವುದು ಖಚಿತವಾಗಿದೆ. ಇದರ ಬೆನ್ನಲ್ಲೆ ಡಿಕೆಶಿ ಅವರ ಮನೆಯಲ್ಲಿ ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ. ಕನಕಪುರದಿಂದ ನಾಟಿ ಕೋಳಿಗಳನ್ನು ತರಲಾಗಿದೆ. ಮುಖ್ಯಮಂತ್ರಿಗಳಿಗೆ ನಾಟಿ ಕೋಳಿ ಸಾರು ಇಷ್ಟ. ನಾಳೆಯ ಉಪಹಾರದಲ್ಲಿ ವೆಜ್ ಜೊತೆಗೆ ನಾಜ್ ವೆಜ್ ಉಪಹಾರ ಸಹ ಇರಲಿದೆ. ಇಡ್ಲಿ, ಪೂರಿ, ಸಿಹಿ ತಿಂಡಿ ಜೊತೆಗೆ ನಾಟಿ ಕೋಳಿ ಸಾರು ಸಹಿತ ಸಿದ್ಧವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದು ಸಿನಿಮಾದ ಇಂಟರ್‌ವಲ್ ತರ: ಛಲವಾದಿ
ಪರಸ್ಪರ ಸಿಎಂ, ಡಿಸಿಎಂ ಉಪಹಾರಕ್ಕೆ ಆಹ್ವಾನಿಸಿದ್ದಕ್ಕೆ ವ್ಯಂಗವಾಡಿರುವ ಬಿಜೆಪಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಒಂದು ಬ್ರೇಕ್‌ಫಾಸ್ಟ್‌ನಲ್ಲಿ ಎಲ್ಲ ಸರಿಹೋಗುತ್ತೆ ಎಂದು ಹೇಳುತ್ತಾರೆ. ಇದೊಂದು ರೀತಿಯಲ್ಲಿ ಸಿನಿಮಾದಲ್ಲಿ ಬರುವ ಇಂಟರ್‌ವಲ್ ತರ. ಇದು ಬೃಹನ್ ನಾಟಕವೆಂದು ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಕುಸಿದರೆ ಸಿಎಂ ಡಿಸಿಎಂ ಬ್ರೇಕ್ ಫಾಸ್ಟ್ ಮಾಡಿಕೊಂಡೆ ಕಾಲ ಕಳೆಯಲಿ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.












Click it and Unblock the Notifications