BREAKING: ನಮ್ಮ ಮೆಟ್ರೋ ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಡಿಕೆ ಶಿವಕುಮಾರ್ ಮೊದಲ ಸಂಚಾರ

ಬೆಂಗಳೂರು, ನವೆಂಬರ್ 06: ಬೆಂಗಳೂರಿನಲ್ಲಿ ಬಹುನಿರೀಕ್ಷೆಯ ನಮ್ಮ ಮೆಟ್ರೋ ವಿಸ್ತರಣೆ ಹಸಿರು ಮಾರ್ಗದಲ್ಲಿ ಕೊನೆಗೆ ವಾಣಿಜ್ಯ ಕಾರ್ಯಚರಣೆಗೆ ಮುಹೂರ್ತ ನಿಗದಿಯಾಗಿದೆ. ನಾಳೆ ಗುರುವಾರ ನವೆಂಬರ್ 7ರಂದು ಈ ಮಾರ್ಗದಲ್ಲಿ ಹಸಿರು ಬಣ್ಣದ ಮೆಟ್ರೋ ರೈಲುಗಳು ಪ್ರಯಾಣಿಕರನ್ನು ಹೊತ್ತು ಸಾಗಲಿವೆ. ಇದಕ್ಕೂ ಮುನ್ನಾ ದಿನ ಇಂದು ಬುಧವಾರ ಮಧ್ಯಾಹ್ನ ಡಿಸಿಎಂ ಡಿಕೆ ಶಿವಕುಮಾರ್ ಅವರು ಈ ವಿಸ್ತರಣೆ ಮಾರ್ಗದಲ್ಲಿ ಸಂಚರಿಸುವ ಮೊದಲಿಗರಾಗಲಿದ್ದಾರೆ.

ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ 6 ನವೆಂಬರ್ 2024 ರಂದು ಮಧ್ಯಾಹ್ನ 12.00 ಗಂಟೆಗೆ ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಣೆ ಮಾರ್ಗವನ್ನು ಪರಿಶೀಲಿಸಲಿದ್ದಾರೆ. ಈ ಸಂಬಂಧ ಅವರು ಹಸಿರು ಮಾರ್ಗದ ಯಶವಂತಪುರ ಮೆಟ್ರೋ ನಿಲ್ದಾಣದಿಂದ ಪ್ರಯಾಣಿಸಲಿದ್ದಾರೆ. ಕೊನೆಯ ನಿಲ್ದಾಣ ಮಾದಾವರವರೆಗೆ ಪ್ರಯಾಣಿಸಲಿದ್ದಾರೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ (BMRCL) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

CM Siddaramaiah Today will Inspect Extension Namma Metro Green Line Nagasandra to Madavara

ಬೆಂಗಳೂರು ಮೆಟ್ರೋ ರೈಲು ನಿಗಮವು ರೇಷ್ಮೆ ಸಂಸ್ಥೆಯಿಂದ ನಾಗಸಂದ್ರವರೆಗೆ ಇದ್ದ ಹಸಿರು ಮಾರ್ಗವನ್ನು ಮಾದಾವರವರೆಗೆ 3.7 ಕಿಲೋ ಮೀಟರ್ ವರೆಗೆ ಒಟ್ಟು 298 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದೆ. 2019ರಲ್ಲಿಯೇ ಕಾಮಗಾರಿ ಆರಂಭಿಸಿದ್ದ ಈ ವಿಸ್ತರಣೆ ಮಾರ್ಗದಲ್ಲಿ ಕೆಲಸ ಪೂರ್ಣಗೊಳ್ಳುವುದು ವಿಳಂಬವಾಯಿತು.

ನಿರಂತರ ಗಡುವುಗಳ ಮೀರಿದ ನಂತರ ಇದೀಗ ಕಾಮಗಾರಿ ಪೂರ್ಣಗೊಂಡಿ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು ಪರಿಶೀಲಿಸಿ ವಾಣಿಜ್ಯ ಕಾರ್ಯಾಚರಣೆಗೆ ಅನುಮೋದನೆ ನೀಡಿದರು. ಯಾವಾಗ ಉದ್ಘಾಟನೆ ಆಗಲಿದೆ ಎಂದು ಕಾದಿದ್ದ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಅಧಿಕಾರಿಗಳು ಸಿಹಿ ಸುದ್ದಿ ನೀಡಿದ್ದಾರೆ.

ನಾಳೆ ನವೆಂಬರ್ 07 ಗುರುವಾರ ಈ ನಾಗಸಂದ್ರ-ಮಾದಾವರವರೆಗೆ ವಿಸ್ತರಣೆ ಮಾರ್ಗದಲ್ಲಿ ಕಾರ್ಯಾಚರಣೆ ಅಧಿಕೃತವಾಗಿ ಶುರುವಾಗಲಿದೆ. ಈ ಸಂಬಂಧ ಬುಧವಾರ ಡಿಕೆ ಶಿವಕುಮಾರ್ ಅವರು ಮಾರ್ಗದಲ್ಲಿ ಸಂಚರಿಸಲಿದ್ದಾರೆ. ವಿಸ್ತರಣೆ ಮಾರ್ಗವನ್ನು ಪರಿಶೀಲಿಸಲಿದ್ದಾರೆ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+