ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ನೆಲದ ನಿಯಮ ಪಾಲಿಸಿ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ವಿವಿಧ ಅಂಗಡಿ ಮಳಿಗೆಗಳಲ್ಲಿ ಕನ್ನಡ ಕಡೆಗಣನೆ ವಿಚಾರವಾಗಿ ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು. ಕರವೇ ಹೋರಾಟದ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ವಿಶೇಷ ಸಭೆ ನಡೆಸಿ, ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸಂಬಂಧ ಆದೇಶ ಹೊರಡಿಸಿದೆ.

2024 ಫೆಬ್ರವರಿ 28ರ ಒಳಗಾಗಿ ನಾಮಫಲಕಗಳಲ್ಲಿ 60% ಕನ್ನಡ 40% ಇಂಗ್ಲಿಷ್‌ ಇರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದೆ. ನಿಯಮ ಉಲ್ಲಂಘಿಸಿದ್ದಲ್ಲಿ ಅಂಗಡಿ ಮುಂಗಟ್ಟುಗಳ ಲೈಸೆನ್ಸ್ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದೆ.

CM Siddaramaiah Tweets On Mandate for Kannada on Signboards

ಸಿಎಂ ಸಿದ್ದರಾಮಯ್ಯ ಕೂಡ ಈಗ ಕನ್ನಡ ನಾಮಫಲಕಗಳ ಬಗ್ಗೆ ಟ್ವೀಟ್ ಮಾಡಿದ್ದು, ನೆಲದ ಕಾನೂನಿಗೆ ಗೌರವ ಕೊಡಬೇಕು ಎಂದು ಹೇಳಿದ್ದಾರೆ. ಹೊರ ರಾಜ್ಯದಿಂದ ಬಂದು ಬದುಕು ಕಟ್ಟಿಕೊಂಡವರು ಇಲ್ಲಿನ ಭಾಷೆಗೆ ಗೌರವ ಕೊಡುವಂತೆ ಕೇಳಿದ್ದಾರೆ.

ಕನ್ನಡಕ್ಕೇ ಮೊದಲ ಆದ್ಯತೆ

ಟ್ವೀಟ್ ಮಾಡಿರುವ ಅವರು, "ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು "ಕನ್ನಡಿಗ"ರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ." ಎಂದು ಹೇಳಿದ್ದಾರೆ.

ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ ಹೆಮ್ಮೆಯ ಕನ್ನಡಿಗರಾಗಿ ಎಂದು ಕರೆ ನೀಡಿದ್ದಾರೆ.

ಟ್ವಿಟರ್ ಆಂದೋಲನ

ಬೆಂಗಳೂರಿನಲ್ಲಿ ಹಲವು ಮಾಲ್‌ಗಳು, ಅಂಗಡಿಗಳಲ್ಲಿ ಕನ್ನಡ ಕಡೆಗಣಿಸಿರುವುದನ್ನು ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ಮಾಡಿದ್ದ ಕರ್ನಾಟಕ ರಕ್ಷಣಾ ವೇದಿದೆ. ಇಂದು (ಸೋಮವಾರ) ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದೆ.

ಸೋಮವಾರ ಸಂಜೆ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯವಾಗಿ ಬಳಸುವಂತೆ ಟ್ವೀಟ್ ಮಾಡಲು ಮನವಿ ಮಾಡಿದೆ. #ಕನ್ನಡದಲ್ಲಿನಾಮಫಲಕ (#signboardinkannada) ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್ ಮಾಡುವ ಮೂಲಕ ಅಭಿಯಾನಕ್ಕೆ ಬೆಂಬಲ ನೀಡಲು ಕೋರಿದೆ.

ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಎಲ್ಲಾ ನಗರ, ಜಿಲ್ಲೆಗಳಲ್ಲಿ ಕೂಡ ಈ ಅಭಿಯಾನ ನಡೆಯಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಹೇಳಿದ್ದು, ನೆಲದ ಕಾನೂನಿಗೆ ಎಲ್ಲರೂ ಗೌರವ ಕೊಡಬೇಕು. ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+