ಮೊದಲ ಬಾರಿಗೆ ಶಾಸಕರಾದವರು ಸಂವಿಧಾನದ ಮೂಲ ತತ್ವಗಳನ್ನು ಅರ್ಥಮಾಡಿಕೊಳ್ಳಬೇಕು: ಸಿದ್ದರಾಮಯ್ಯ
ಬೆಂಗಳೂರು, ಜೂನ್. 27: ಮೊದಲ ಬಾರಿಗೆ ಶಾಸಕರು ಸಂವಿಧಾನವನ್ನು ಓದಬೇಕು ಮತ್ತು ಅದರ ಮೂಲ ತತ್ವಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸಂವಿಧಾನವನ್ನು ತಿಳಿಯದವರು ಉತ್ತಮ ಶಾಸಕರು ಅಥವಾ ಸಂಸದರಾಗಲು ಸಾಧ್ಯವಿಲ್ಲ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ.
"ನಾವು ಸಂವಿಧಾನವನ್ನು ಚೆನ್ನಾಗಿ ಅರ್ಥಮಾಡಿಕೊಂಡರೆ, ನಾವು ಜನರ ಸಮಸ್ಯೆಯನ್ನು ಶಾಸಕಾಂಗದ ಮುಂದೆ ಇಡಬಹುದು. ಸಂವಿಧಾನದ ಆಶಯಕ್ಕೆ ವಿರುದ್ಧವಾದ ಕಾನೂನುಗಳನ್ನು ಜಾರಿಗೆ ತರಲು ಅವಕಾಶವಿಲ್ಲ" ಎಂದು ಪ್ರಥಮ ಬಾರಿಗೆ ಚುನಾವಣೆಯಲ್ಲಿ ಗೆದ್ದು 16 ನೇ ಕರ್ನಾಟಕ ವಿಧಾನಸಭೆಗೆ ಪ್ರವೇಶಿಸಿರುವ 70 ಶಾಸಕರಿಗೆ ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿದ ನಂತರ ಸಿಎಂ ಸಿದ್ದರಾಮಯ್ಯ ಕಿವಿ ಮಾತು ಹೇಳಿದ್ದಾರೆ.

"ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿಯನ್ನು ಪ್ರತಿಯೊಬ್ಬ ಶಾಸಕ ಬೆಳೆಸಿಕೊಳ್ಳಬೇಕು. ಯಾರು ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳುವುದಿಲ್ಲವೋ ಅವರು ಉತ್ತಮ ಶಾಸಕರಾಗಲು, ಸಂಸದರಾಗಲು ಸಾಧ್ಯವಿಲ್ಲ. ಆದ್ದರಿಂದ ಮೊದಲು ಸಂವಿಧಾನವನ್ನು ಓದಿ ಅದರ ಮೂಲಭೂತ ತತ್ವ ಮತ್ತು ಉದ್ದೇಶಗಳನ್ನು ಅರಿತುಕೊಳ್ಳಬೇಕು" ಎಂದು ನೂತನ ಶಾಸಕರಿಗೆ ತಿಳಿಸಿದ್ದಾರೆ.
"ಸಂವಿಧಾನವಿಲ್ಲದಿದ್ದರೆ ನಾನು, ನನ್ನಂಥವರು ಶಾಸಕರಾಗಲು, ಮುಖ್ಯಮಂತ್ರಿ ಆಗಲು ಡಾ.ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಕಾರಣ. ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಕೆ.ಎಸ್.ಈಶ್ವರಪ್ಪ, ನಾನು ಸಹ ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ದೇಶದ ಪ್ರತಿಯೊಬ್ಬರು ಸಂವಿಧಾನದ ಮೌಲ್ಯ ಅರಿತುಕೊಳ್ಳಬೇಕು" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

" ತಯಾರಿ, ಸಂಶೋಧನೆ, ವಿಷಯ ಪರಿಣತಿ, ಜನರ ಭಾಷೆ ಮತ್ತು ಜನಪರ ಮನೋಭಾವವು ಪ್ರತಿಯೊಬ್ಬ ಶಾಸಕನ ಅಗತ್ಯವಾಗಿದೆ. ಜನರ ಸಮಸ್ಯೆಗೆ ಸ್ಪಂದಿಸದವರು ಆಕಸ್ಮಿಕವಾಗಿ ಒಮ್ಮೆ ಮಾತ್ರ ಗೆಲ್ಲಬಹುದು, ಹಣ ಮತ್ತು ದುರಹಂಕಾರದ ಮೇಲೆ ರಾಜಕೀಯ ಮಾಡಲು ಸಾಧ್ಯವಿಲ್ಲ. ಒಮ್ಮೆಯಾದರೂ ಶಾಸಕರಾಗಬೇಕು ಮತ್ತು ವಿಧಾನಸೌಧಕ್ಕೆ ಬರಬೇಕು ಎಂಬ ಹಂಬಲ ಅನೇಕರಿಗೆ ಇದೆ. ಆದರೆ, ಅವರಲ್ಲಿ ಹಲವರು ವಿಧಾನಸಭೆಯ ಅಧಿವೇಶನದಲ್ಲಿ ಗೈರುಹಾಜರಾಗುತ್ತಾರೆ" ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮವಾರದಿಂದ ಆರಂಭವಾಗಿರುವ ಶಿಬಿರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಕೃಷ್ಣ ಬೈರೇಗೌಡ , ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಜೊತೆಗೆ ಶಾಸಕರು ಸಂವಾದ ನಡೆಸಲಿದ್ದಾರೆ. ಮೂರು ದಿನಗಳ ಕಾಲದ ಶಿಬಿರದಲ್ಲಿ ಆರೋಗ್ಯ ಹಾಗೂ ಬೌದ್ಧಿಕ ತರಬೇತಿ ಜೊತೆಗೆ ಹಲವು ವಿಚಾರಗಳು ಚರ್ಚೆಯಾಗಲಿದೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ











Click it and Unblock the Notifications