ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರದಲ್ಲಿ ಹೊಸ ಕಾಲೇಜುಗಳಿಗೆ ಜಾಗ ನೋಡಿ, ಫೈನಲ್: ಕುಮಾರಸ್ವಾಮಿ

By ಒನ್ಇಂಡಿಯಾ ಪ್ರತಿನಿಧಿ
|
Google Oneindia Kannada News

Recommended Video

ರಾಮನಗರದಲ್ಲಿ ಹೊಸ ಕಾಲೇಜು ಶುರು ಮಾಡಲು ಸೂಕ್ತ ಜಾಗ ಆಯ್ಕೆ ಮಾಡೋದಾಗಿ ಎಚ್ ಡಿ ಕೆ ಹೇಳಿಕೆ | Oneindia Kannada

ಬೆಂಗಳೂರು, ಜುಲೈ 6: ರಾಮನಗರ ಜಿಲ್ಲೆಯಲ್ಲಿ ವಸತಿ ಸಹಿತ ಪದವಿ ಕಾಲೇಜು ಪ್ರಾರಂಭಿಸಲು ಆನಮಾನಹಳ್ಳಿ, ಹರಿಸಂದ್ರ ಹಾಗೂ ಅಚ್ಚಲು ಗ್ರಾಮದಲ್ಲಿ 7 ಎಕರೆ ವಿಸ್ತೀರ್ಣದಲ್ಲಿ ಗುರುತಿಸಿರುವ ಸ್ಥಳ ನೋಡಿದ ನಂತರ ಅಂತಿಮ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ರಾಮನಗರ ಜಿಲ್ಲೆಯಲ್ಲಿ ಹೊಸ ಕಾಲೇಜುಗಳ ಆರಂಭ ಮತ್ತು ಮೂಲಸೌಕರ್ಯ ಒದಗಿಸುವ ಬಗ್ಗೆ ಶುಕ್ರವಾರ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ವಿಷಯ ತಿಳಿಸಿದರು.

ಕರ್ನಾಟಕ ಬಜೆಟ್‌: ಶಿಕ್ಷಣ ಕ್ಷೇತ್ರಕ್ಕೆ ಏನು ದೊರೆತಿದೆಕರ್ನಾಟಕ ಬಜೆಟ್‌: ಶಿಕ್ಷಣ ಕ್ಷೇತ್ರಕ್ಕೆ ಏನು ದೊರೆತಿದೆ

ಕಟ್ಟಡ, ಶೌಚಾಲಯ ಸೇರಿದಂತೆ ಇನ್ನಿತರ ಮೂಲಸೌಲಭ್ಯಗಳಿದ್ದಲ್ಲಿ ಮಾತ್ರ ಸರಕಾರಿ ಕಾಲೇಜುಗಳಿಗೆ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸಬಹುದು ಎಂದ ಅವರು, ಕಟ್ಟಡಗಳ ನಿರ್ವಹಣೆಗೂ ಆದ್ಯತೆ ನೀಡಬೇಕು ಎಂದರು.

 CM suggested to find right place in Ramanagar to start new colleges

ಬಿ.ಕಾಂ ಜೊತೆಗೆ ವೃತ್ತಿಪರ ಕೋರ್ಸ್ ಗಳ ಸಂಯೋಜನೆವುಳ್ಳ ಕೋರ್ಸ್ ಹಾಗೂ ಸಿ.ಬಿ.ಜೆಡ್ ಮತ್ತು ಮೈಕ್ರೋ ಬಯಾಲಜಿ ಕೋರ್ಸ್ ಗಳಿಗೆ ಬೇಡಿಕೆ ಇರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಈ ಕೋರ್ಸ್ ಗಳನ್ನು ಪದವಿ ಕಾಲೇಜುಗಳಲ್ಲಿ ಪ್ರಾರಂಭಿಸಲು ಸೂಚಿಸಿದರು.

ಕಾಲೇಜುಗಳಲ್ಲಿ ಉತ್ತಮ ಉಪನ್ಯಾಸಕರನ್ನು ನೇಮಿಸಲು ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸೂಚಿಸಿದರು.

ಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlightsಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlights

ಕಾಲೇಜು ಪ್ರಾರಂಭಿಸಲು ಸ್ಥಳ ನಿಗದಿಯಾದ ನಂತರ ಅನುಮೋದನೆಯಾಗಿ, ಅನುದಾನ ಬಿಡುಗಡೆ ಮಾಡಿದ ಕೂಡಲೆ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಾಣ ಕಾರ್ಯವನ್ನು ಕೈಗೊಳ್ಳುವುದು ಎಂದು ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು.

ಉನ್ನತ ಶಿಕ್ಷಣ ನಿರ್ದೇಶನಾಲಯದ ಪ್ರಧಾನ ಕಾರ್ಯದರ್ಶಿ ರಾಜ್ ಕುಮಾರ್ ಖತ್ರಿ, ಆಯುಕ್ತರಾದ ಎನ್.ಮಂಜುಳಾ, ರಾಮನಗರ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಮುಲ್ಲೈ ಮಹಿಲನ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿದ್ದರು.

English summary
CM HD Kumaraswamy suggested officers to find right place in Ramanagar to start new colleges. Meeting organised with ministers GT Deve Gowda and HD Revanna.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X