ಮಹದಾಯಿ, ಬೆಳಗಾವಿ ಜಿಲ್ಲೆ ವಿಭಜನೆ: ಸಿಎಂ ಮಹತ್ವದ ಚರ್ಚೆ
Recommended Video

ಬೆಂಗಳೂರು, ಸೆಪ್ಟೆಂಬರ್ 14: ಬೆಳಗಾವಿ ಜಿಲ್ಲೆಗೆ ಭೇಟಿ ನೀಡುವ ಮುನ್ನಾದಿನವಾದ ಸೆಪ್ಟೆಂಬರ್ 14 ರಂದು ಮಧ್ಯಾಹ್ನ ಮಹದಾಯಿ ನದಿನೀರಿನ ವಿವಾದ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಿರಿಯ ಅಧಿಕಾರಿಗಳ ಜತೆ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ.
ಬೆಳಗಾವಿ ಜಿಲ್ಲೆಯ ಜಾರಕಿಹೊಳಿ ಸಹೋದರರ ಭಿನ್ನಮತದ ಹಿನ್ನೆಲೆಯಲ್ಲೂ ಸಿಎಂ ಬೆಳಗಾವಿ ಭೇಟಿ ಪ್ರಾಮುಖ್ಯತೆ ಪಡೆದಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯನ್ನು ಮೂರು ಭಾಗಗಳಾಗಿ ವಿಂಗಡಿಸಿ ಬೆಳಗಾವಿ, ಚಿಕ್ಕೋಡಿ ಹಾಗೂ ಗೋಕಾಕ್ ಜಿಲ್ಲೆಗಳನ್ನಾಗಿ ವಿಂಗಡಿಸುವ ಕುರಿತು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಂದು ವೇಳೆ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿದರೆ ಉಂಟಾಗಬಹುದಾದ ಆರ್ಥಿಕ ಹೊರೆ, ರಾಜಕೀಯ ಪರಿಣಾಮಗಳ ಕುರಿತು ಸಿಎಂ ಕುಮಾರಸ್ವಾಮಿ ಸಚಿವ ಸಂಪುಟದ ಹಿರಿಯ ಸಚಿವರೊಂದಿಗೂ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಅಲ್ಲದೆ ಮಹಾದಾಯಿ ನ್ಯಾಯಾಧಿಕರಣದ ಇತ್ತೀಚಿನ ಬೆಳವಣಿಗೆ, ಕಾವೇರಿ ನೀರಾವರಿ ನಿಗಮ ಬೋರ್ಡ್ ಮೀಟಿಂಗ್. ರಾಜೀವ್ ಗಾಂಧಿ ಆರೋಗ್ಯ ವಿವಿ ಸಂಬಂಧ ಸಭೆ. ವಾಣಿಜ್ಯ ತೆರಿಗೆ, ಅಬಕಾರಿ ಇಲಾಖೆ, ನೊಂದಣಿ ಮತ್ತು ಮುದ್ರಾಂಕ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಜೊತೆ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ.












Click it and Unblock the Notifications