ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶ್ರೀನಿವಾಸ್ ಪ್ರಸಾದ್ ಒತ್ತಡಕ್ಕೆ ಮಣಿದ ಸಿಎಂ: ವಿಜಯೇಂದ್ರ ಆಪ್ತಗೆ ಹಿನ್ನಡೆ

|
Google Oneindia Kannada News

ಬೆಂಗಳೂರು, ನವೆಂಬರ್ 30: ಸಂಸದ ಶ್ರೀನಿವಾಸ್ ಪ್ರಸಾದ್ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಸನ ಶಾಸಕ ಪ್ರೀತಂ ಜಿ ಗೌಡ ಅವರಿಗೆ ನೀಡಿದ್ದ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ಸ್ಥಾನವನ್ನು ಹಿಂಪಡೆದಿದ್ದಾರೆ.

ಇದೀಗ ಅಪ್ಪಣ್ಣ ಅವರನ್ನು ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ(ಜಂಗಲ್ ಲಾಡ್ಜಸ್ ಆಂಡ್ ರೆಸಾರ್ಟ್) ಅಧ್ಯಕ್ಷರನ್ನಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಇದರಿಂದ ಬಿವೈ ವಿಜಯೇಂದ್ರಗೆ ಹಿನ್ನಡೆಯಾದಂತಾಗಿದೆ.

ಕೆಲವು ದಿನಗಳ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವಾಗ ನಾನು ಬೇಕಿತ್ತು. ಈಗ ಸಿಎಂ ಆಗುವ ಕೆಲಸ ಮುಗಿತ್ತಲ್ಲ. ಇನ್ನೇನು ಆ ದರ್ದು ಅವರಿಗಿಲ್ಲ. ಈಗ ಆರಾಮಾಗಿ ಇದ್ದಾರೆ.

CM Withdraws MLA Preetham Nomination For Jungle Lodge Board Chairman

ನೋಡ್ಕೋತೀವಿ ಬಿಡಿ ಎಂದು ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು.

ನಾವೇ ಯಾರದೇ ಹೆಸರನ್ನು ಸೂಚಿಸಿದರೂ ಅದಕ್ಕೆ ಕಿಮ್ಮತ್ತಿಲ್ಲ, ಮಂತ್ರಿ ಪಟ್ಟವನ್ನು ನಾನೇ ಬೇಡ ಎಂದಿದ್ದೇನೆ. ಚುನಾವಣೆಯನ್ನೇ ಬೇಡ ಎಂದಿದ್ದವನು ನಾನು. ಇನ್ನು ಮಂತ್ರಿ ಪಟ್ಟ ಯಾಕೇ ಬೇಕು ನನಗೆ? ನಾನು ಕೇಂದ್ರದಲ್ಲಿ ಸಚಿವ ಸ್ಥಾನ ಆಕಾಂಕ್ಷಿಯಲ್ಲ.

ಹಳೇ ಮೈಸೂರು ಭಾಗಕ್ಕೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಅಳಿಯ ಶಾಸಕ ಹರ್ಷವರ್ಧನ್ ಹೇಳಿಕೆ ವೈಯಕ್ತಿಕ ಎಂದು ತಿಳಿಸಿದ್ದರು.

English summary
After Political Clash Chief minister BS Yediyurappa Withdraws MLA Preetham Gowda's Nomination For Jungle Lodges and Resort limited Board Chairman And Appoints Appanna As A New Chairman.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X