ಹಣಕಾಸು ಸಮಸ್ಯೆಯಾದ್ರೂ, ಮಕ್ಕಳಿಗೆ ಉಚಿತ ಬೈಸಿಕಲ್ ವಿತರಣೆ: ಸಿಎಂ
ಬೆಂಗಳೂರು, ಮೇ 22: ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಹಣಕಾಸು ಸಮಸ್ಯೆಯಾದ್ರೂ, ಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಣೆ ಮಾಡುವುದು ನಿಲ್ಲಿಸುವುದಿಲ್ಲ ಎಂದು ತಿಳಿಸಿದ್ದಾರೆ.
Recommended Video
ಕೋವಿಡ್ 19 ರಿಂದ ಹಣಕಾಸು ತೊಂದರೆಯಾದರೂ, ಉಚಿತ ಬೈಸಿಕಲ್ ವಿತರಣೆ ಯೋಜನೆ ಸ್ಥಗಿತಗೊಳಿಸದಂತೆ ಯಡಿಯೂರಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರು, ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಈ ನಿಟ್ಟಿನಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಗಳ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದ್ದು, ಗಣಿತ, ವಿಜ್ಞಾನ ಶಿಕ್ಷಕರ ಕೊರತೆ ನೀಗಿಸಲು ಬಿ.ಎಡ್. ಮಾಡಿರುವ ಇಂಜಿನಿಯರಿಂಗ್ ಪದವೀಧರರ ನೇಮಕಾತಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ.

ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಕೇಂದ್ರ ಸರ್ಕಾರದ ವಿಶೇಷ ನೆರವು ಕೂಡ ಘೋಷಿಸಲಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಾಗಲಿದೆ ಎಂಬ ಆಶಯ ಸಭೆಯಲ್ಲಿ ವ್ಯಕ್ತವಾಗಿದೆ.












Click it and Unblock the Notifications