ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾರ್ಯಕ್ರಮ ರದ್ದು ಮಾಡಿ ಚರ್ಚೆಗೆ ಸಿದ್ಧ ಎಂದ ಬಿಎಸ್‌ವೈ

|
Google Oneindia Kannada News

ಬೆಂಗಳೂರು, ಫೆ. 12: ''ನಾಳೆಯ ನನ್ನ ಎಲ್ಲ ಕಾರ್ಯಕ್ರಮಗಳನ್ನು ರದ್ದುಮಾಡಿ, ಬಂದ್‌ಗೆ ಕರೆ ಕೊಟ್ಟಿರುವ ಕರ್ನಾಟಕ ಸಂಘಟನೆಗಳ ಒಕ್ಕೂಟದ ನಾಯಕರೊಂದಿಗೆ ಮಾತನಾಡಲು ನಾನು ಸಿದ್ಧ'' ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯ ಶಕ್ತಿಭವನದಲ್ಲಿ ಬಜೆಟ್ ತಯಾರಿ ಸಭೆಯಲ್ಲಿ ಭಾಗವಹಿಸುವ ಮೊದಲು ಮಾಧ್ಯಮಗಳಿಗೆ ಅವರು ಹೇಳಿಕೆ ಕೊಟ್ಟಿದ್ದಾರೆ.

''ನಾನು ಕೂಡ ಕನ್ನಡಿಗ. ಕನ್ನಡಿಗರ ಹಿತ ಕಾಪಾಡಲು ನಾನು ಬದ್ದನಿದ್ದೇನೆ. ಬೇಕಾದರೆ ನಾಳೆಯ ಇಡೀ ದಿನದ ಕಾರ್ಯಕ್ರಮಗಳನ್ನು ರದ್ದು ಮಾಡುತ್ತೆನೆ. ಇವತ್ತೇ ಅವರು ಬಂದು ಭೇಟಿ ಮಾಡಲಿ. ನನ್ನ ಮನೆಗೆ ಬಂದು ಭೇಟಿ ಮಾಡಲಿ. ಎಲ್ಲರೂ ಬಂದು ಮಾತಾಡಲಿ. ಅವರ ಜೊತೆ ಮಾತನಾಡೋಕೆ, ಅವರ ಸಮಸ್ಯೆಗಳನ್ನು ಬಗೆಹರಿಸಲು ಸಿದ್ಧನಿದ್ದೇನೆ. ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡೋದು ಸರಿಯಲ್ಲ'' ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ಫೆ. 13ರ ಕರ್ನಾಟಕ ಬಂದ್; ಏನಿರುತ್ತೆ, ಏನಿರಲ್ಲ? ಫೆ. 13ರ ಕರ್ನಾಟಕ ಬಂದ್; ಏನಿರುತ್ತೆ, ಏನಿರಲ್ಲ?

''ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಕ್ರಮಕೈಗೊಳ್ಳುತ್ತೇವೆ. ಈಗಾಗಲೇ ಆ ವರದಿ ಜಾರಿಗೆ ಏನೇನು ಮಾಡಬೇಕೋ ಅದನ್ನು ಮಾಡಿದ್ದೇನೆ. ಬೇರೆ ಏನು ಮಾಡಬೇಕೋ ಅದನ್ನು ಮಾಡುತ್ತೇನೆ. ಅವರು ಬಂದು ನನ್ನ ಜೊತೆ ಮಾತನಾಡಲಿ'' ಎಂದು ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

CM Yeddyurappa said all the programs of tomorrow will be canceled

ನಾಳೆ ಕರ್ನಾಟಕ ಸಂಘಟನೆಗಳ ಒಕ್ಕೂಟದಿಂದ ಕರ್ನಾಟಕ ಬಂದ್

ಡಾ. ಸರೋಜಿನಿ ಮಹಿಷಿ ಅವರ ವರದಿಯಂತೆ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ಸೇರಿದಂತೆ, ಸರೋಜಿನಿ ಮಹಿಷಿ ವರದಿಯನ್ನು ಸಂಪೂರ್ಣವಾಗಿ ಜಾರಿಗೆ ತರಲು ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಕರ್ನಾಟಕ ಬಂದ್‌ಗೆ ಕರೆಕೊಟ್ಟಿದೆ.

English summary
CM B S Yediyurappa said I am ready to hold talks with the leaders of the Karnataka Organizations which has called for a Karnataka bandha tomorrow, He also said ready to cancel all tomorrow programs of mien.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X