ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ನಿಶ್ಚಿತಾರ್ಥ: ಸಿಎಂ ಯಡಿಯೂರಪ್ಪ ಭಾಗಿ
ಬೆಂಗಳೂರು, ನವೆಂಬರ್ 19: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹಾಗೂ ದಿ. ಸಿದ್ಧಾರ್ಥ ಹೆಗ್ಡೆ ಪುತ್ರ ಅಮಾರ್ಥ್ಯನ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ನೆರವೇರಿತು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಖಾಸಗಿ ಹೋಟೆಲ್‌ವೊಂದರಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಡಿಕೆ ಶಿವಕುಮಾರ್ ಹಾಗೂ ಎಸ್ ಎಂ ಕೃಷ್ಣ ಕುಟುಂಬಸ್ಥರು ಮತ್ತು ಆಪ್ತರು ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.
ಜೂನ್ 12 ರಂದು ಸದಾಶಿವನಗರದಲ್ಲಿರುವ ಎಸ್ ಎಂ ಕೃಷ್ಣ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಕುಟುಂಬ ಸದಸ್ಯರು , ತಾಂಬೂಲ ಬದಲಾಯಿಸಿಕೊಂಡು ಅಮಾರ್ಥ್ಯ ಮತ್ತು ಐಶ್ವರ್ಯ ಮದುವೆ ಮಾತುಕತೆ ನಡೆಸಿದ್ದರು. 2021ರ ಫೆಬ್ರವರಿಯಲ್ಲಿ ಇವರಿಬ್ಬರ ವಿವಾಹ ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಆರ್ ಅಶೋಕ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಉತ್ತರ ಪ್ರದೇಶದ ಜ್ಯೋತಿಷಿ ನೇತೃತ್ವದಲ್ಲಿ ಕಾರ್ಯಕ್ರಮ
ಉತ್ತರ ಪ್ರದೇಶದ ಖ್ಯಾತ ಜ್ಯೋತಿಷಿ ಪಂಡಿತ್ ಅವರ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ನಿಶ್ಚಿತಾರ್ಥ ನಡೆಯಿತು.

ಮುಖ್ಯಮಂತ್ರಿ ಯಡಿಯೂರಪ್ಪರಿಂದ ಹಾರೈಕೆ
ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಗಮಿಸಿ ನವ ಜೋಡಿಗೆ ಹಾರೈಸಿದರು. ಸಭಾಂಗಣವೆಲ್ಲ ಗುಲಾಬಿಮಯವಾಗಿದ್ದು, ಐಶ್ವರ್ಯ ಹಾಗೂ ಅಮರ್ಥ್ಯ ಗುಲಾಬಿ ಬಣ್ಣದ ಉಡುಗೆಯನ್ನು ತೊಟ್ಟು ಕಂಗೊಳಿಸುತ್ತಿದ್ದಾರೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿವಾಸ ಹಾಗೂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ನಿಶ್ಚಿತಾರ್ಥ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆ 10 ಗಂಟೆಯಿಂದ ನಿಶ್ಚಿತಾರ್ಥ ಕಾರ್ಯಕ್ರಮ ಆರಂಭವಾಗಿದ್ದು, ಮಧ್ಯಾಹ್ನ 2 ಗಂಟೆ ವರೆಗೆ ನಡೆಯಲಿದೆ.

ಹೋಟೆಲ್‌ನಲ್ಲಿ 50 ರೂಂ ಬುಕ್
ಹೋಟೆಲ್‌ನಲ್ಲಿ ಒಟ್ಟು 50 ರೂಂಗಳನ್ನು ಬುಕ್ ಮಾಡಲಾಗಿದ್ದು, ಒಟ್ಟು 250 ಮಂದಿಗೆ ಆಹ್ವಾನ ನೀಡಲಾಗಿದೆ. ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಆಪ್ತ ಶಾಸಕರು, ಕುಟುಂಬಸ್ಥರು, ಸ್ನೇಹಿತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಆಮಂತ್ರಣ ಇದ್ದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಕೊರೊನಾ ಹಿನ್ನೆಲೆ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಆಮಂತ್ರಣ ನೀಡಲಾಗಿಲ್ಲ. ನಿನ್ನೆ ರಾತ್ರಿಯೇ ಕುಟುಂಬದ ಸದಸ್ಯರು ಹೋಟೆಲ್ ನಲ್ಲಿ ಉಳಿದುಕೊಂಡಿದ್ದಾರೆ.

ತಂದೆಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿರುವ ಅಮಾರ್ಥ್ಯ
ಅಮರ್ಥ್ಯ ಕಾಫಿ ಡೇ ಸಿದ್ಧಾರ್ಥ ಅವರ ಹಿರಿಯ ಪುತ್ರನಾಗಿದ್ದು ತಂದೆ ಮೃತಪಟ್ಟ ನಂತರ ಅವರ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಐಶ್ವರ್ಯಾ ತನ್ನ ತಂದೆ ನಡೆಸುತ್ತಿರುವ ಗ್ಲೋಬಲ್ ಎಂಜಿನಿಯರಿಂಗ್ ಕಾಲೇಜನ್ನು ನೋಡಿಕೊಳ್ಳುತ್ತಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications