• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ನಿಶ್ಚಿತಾರ್ಥ: ಸಿಎಂ ಯಡಿಯೂರಪ್ಪ ಭಾಗಿ

|
Google Oneindia Kannada News

ಬೆಂಗಳೂರು, ನವೆಂಬರ್ 19: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹಾಗೂ ದಿ. ಸಿದ್ಧಾರ್ಥ ಹೆಗ್ಡೆ ಪುತ್ರ ಅಮಾರ್ಥ್ಯನ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ಇಂದು ಬೆಂಗಳೂರಿನ ಖಾಸಗಿ ಹೋಟೆಲ್‌ ಒಂದರಲ್ಲಿ ನೆರವೇರಿತು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಖಾಸಗಿ ಹೋಟೆಲ್‌ವೊಂದರಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಡಿಕೆ ಶಿವಕುಮಾರ್ ಹಾಗೂ ಎಸ್ ಎಂ ಕೃಷ್ಣ ಕುಟುಂಬಸ್ಥರು ಮತ್ತು ಆಪ್ತರು ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ನವೆಂಬರ್ 19ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಗಳ ನಿಶ್ಚಿತಾರ್ಥನವೆಂಬರ್ 19ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಗಳ ನಿಶ್ಚಿತಾರ್ಥ

ಜೂನ್ 12 ರಂದು ಸದಾಶಿವನಗರದಲ್ಲಿರುವ ಎಸ್ ಎಂ ಕೃಷ್ಣ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಕುಟುಂಬ ಸದಸ್ಯರು , ತಾಂಬೂಲ ಬದಲಾಯಿಸಿಕೊಂಡು ಅಮಾರ್ಥ್ಯ ಮತ್ತು ಐಶ್ವರ್ಯ ಮದುವೆ ಮಾತುಕತೆ ನಡೆಸಿದ್ದರು. 2021ರ ಫೆಬ್ರವರಿಯಲ್ಲಿ ಇವರಿಬ್ಬರ ವಿವಾಹ ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಆರ್ ಅಶೋಕ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಉತ್ತರ ಪ್ರದೇಶದ ಜ್ಯೋತಿಷಿ ನೇತೃತ್ವದಲ್ಲಿ ಕಾರ್ಯಕ್ರಮ

ಉತ್ತರ ಪ್ರದೇಶದ ಜ್ಯೋತಿಷಿ ನೇತೃತ್ವದಲ್ಲಿ ಕಾರ್ಯಕ್ರಮ

ಉತ್ತರ ಪ್ರದೇಶದ ಖ್ಯಾತ ಜ್ಯೋತಿಷಿ ಪಂಡಿತ್ ಅವರ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ನಿಶ್ಚಿತಾರ್ಥ ನಡೆಯಿತು.

ಮುಖ್ಯಮಂತ್ರಿ ಯಡಿಯೂರಪ್ಪರಿಂದ ಹಾರೈಕೆ

ಮುಖ್ಯಮಂತ್ರಿ ಯಡಿಯೂರಪ್ಪರಿಂದ ಹಾರೈಕೆ

ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಗಮಿಸಿ ನವ ಜೋಡಿಗೆ ಹಾರೈಸಿದರು. ಸಭಾಂಗಣವೆಲ್ಲ ಗುಲಾಬಿಮಯವಾಗಿದ್ದು, ಐಶ್ವರ್ಯ ಹಾಗೂ ಅಮರ್ಥ್ಯ ಗುಲಾಬಿ ಬಣ್ಣದ ಉಡುಗೆಯನ್ನು ತೊಟ್ಟು ಕಂಗೊಳಿಸುತ್ತಿದ್ದಾರೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿವಾಸ ಹಾಗೂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ನಿಶ್ಚಿತಾರ್ಥ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆ 10 ಗಂಟೆಯಿಂದ ನಿಶ್ಚಿತಾರ್ಥ ಕಾರ್ಯಕ್ರಮ ಆರಂಭವಾಗಿದ್ದು, ಮಧ್ಯಾಹ್ನ 2 ಗಂಟೆ ವರೆಗೆ ನಡೆಯಲಿದೆ.

ಹೋಟೆಲ್‌ನಲ್ಲಿ 50 ರೂಂ ಬುಕ್

ಹೋಟೆಲ್‌ನಲ್ಲಿ 50 ರೂಂ ಬುಕ್

ಹೋಟೆಲ್‌ನಲ್ಲಿ ಒಟ್ಟು 50 ರೂಂಗಳನ್ನು ಬುಕ್ ಮಾಡಲಾಗಿದ್ದು, ಒಟ್ಟು 250 ಮಂದಿಗೆ ಆಹ್ವಾನ ನೀಡಲಾಗಿದೆ. ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಆಪ್ತ ಶಾಸಕರು, ಕುಟುಂಬಸ್ಥರು, ಸ್ನೇಹಿತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಆಮಂತ್ರಣ ಇದ್ದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಕೊರೊನಾ ಹಿನ್ನೆಲೆ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಆಮಂತ್ರಣ ನೀಡಲಾಗಿಲ್ಲ. ನಿನ್ನೆ ರಾತ್ರಿಯೇ ಕುಟುಂಬದ ಸದಸ್ಯರು ಹೋಟೆಲ್ ನಲ್ಲಿ ಉಳಿದುಕೊಂಡಿದ್ದಾರೆ.

ತಂದೆಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿರುವ ಅಮಾರ್ಥ್ಯ

ತಂದೆಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿರುವ ಅಮಾರ್ಥ್ಯ

ಅಮರ್ಥ್ಯ ಕಾಫಿ ಡೇ ಸಿದ್ಧಾರ್ಥ ಅವರ ಹಿರಿಯ ಪುತ್ರನಾಗಿದ್ದು ತಂದೆ ಮೃತಪಟ್ಟ ನಂತರ ಅವರ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಐಶ್ವರ್ಯಾ ತನ್ನ ತಂದೆ ನಡೆಸುತ್ತಿರುವ ಗ್ಲೋಬಲ್ ಎಂಜಿನಿಯರಿಂಗ್ ಕಾಲೇಜನ್ನು ನೋಡಿಕೊಳ್ಳುತ್ತಿದ್ದಾರೆ.

English summary
KPCC president DK Shivakumar’s eldest daughter Aishwarya Got officially engaged to the Amartha Hegde on November 19. Amarthya is the son of late Cafe Coffee Day founder Siddhartha Hegde and also the grandson of former union external affairs minister and Karnataka chief minister SM Krishna.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X