ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಸೋಂಕಿತರ ಶವಸಂಸ್ಕಾರ ವಿಡಿಯೋ: ಸಿಎಂ ಖಂಡನೆ

|
Google Oneindia Kannada News

ಬೆಂಗಳೂರು, ಜೂನ್ 30: ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಸಿಬ್ಬಂದಿ ನಡವಳಿಕೆ ಅತ್ಯಂತ ಅಮಾನವೀಯ ಹಾಗೂ ತೀವ್ರ ನೋವಿನ ಸಂಗತಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

''ಕೋವಿಡ್ ಸೋಂಕಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ, ಸೋಂಕಿತರ ಅಂತ್ಯ ಸಂಸ್ಕಾರವನ್ನು ಗೌರವದಿಂದ ನೆರವೇರಿಸಿ ಎಂದು ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಗೆ ವಿನಂತಿಸುತ್ತೇನೆ. ಮಾನವೀಯತೆಯಿಂದ ನಡೆದುಕೊಳ್ಳೋಣ, ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ ಎಂಬುದನ್ನು ಅರಿಯೋಣ'' ಎಂದು ಸಿಎಂ ಮನವಿ ಮಾಡಿದ್ದಾರೆ.

ಕೊರೊನಾ ರೋಗಿಗಳ ಶವಸಂಸ್ಕಾರ ವಿಡಿಯೋ; ತನಿಖೆಗೆ ಬಳ್ಳಾರಿ ಡಿಸಿ ಆದೇಶಕೊರೊನಾ ರೋಗಿಗಳ ಶವಸಂಸ್ಕಾರ ವಿಡಿಯೋ; ತನಿಖೆಗೆ ಬಳ್ಳಾರಿ ಡಿಸಿ ಆದೇಶ

ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಶ್ರೀರಾಮುಲು ''ಅಂತ್ಯಸಂಸ್ಕಾರ ನಡೆಸಿದ ಎಲ್ಲ ಸಿಬ್ಬಂದಿಯನ್ನು ಅಮಾನತು ಮಾಡಿರುವುದಲ್ಲದೆ, ಜಿಲ್ಲಾಡಳಿತ ಈ ಘಟನೆ ಖಂಡಿಸಿ ಕ್ಷಮೆ ಯಾಚಿಸಿದೆ'' ಎಂದು ಹೇಳಿದ್ದಾರೆ.

Cm Yediyurappa And Sriramulu React About Viral Video Of Coronavirus Patients Funeral

''ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್19 ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ವೇಳೆ ಸಿಬ್ಬಂದಿ ಅಮಾನವೀಯವಾಗಿ ನಡೆದುಕೊಂಡಿರುವುದು ತೀವ್ರ ಖಂಡನಿಯ. ಈ ಪ್ರಕರಣದ ಮಾಹಿತಿ ಪಡೆದುಕೊಳ್ಳಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳಲಾಗಿದೆ.'' ಎಂದು ಶ್ರೀರಾಮುಲು ಮಾಹಿತಿ ನೀಡಿದ್ದಾರೆ.

''ಅಂತ್ಯಸಂಸ್ಕಾರ ನಡೆಸಿದ ಎಲ್ಲ ಸಿಬ್ಬಂದಿಯನ್ನು ಅಮಾನತು ಮಾಡಿರುವುದಲ್ಲದೆ, ಜಿಲ್ಲಾಡಳಿತ ಈ ಘಟನೆ ಖಂಡಿಸಿ ಕ್ಷಮೆ ಯಾಚಿಸಿದೆ. ಕೊರೊನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಪ್ರತ್ಯೇಕ ನಿಯಮಾವಳಿಗಳಿದ್ದು ಅವುಗಳನ್ನು ಪಾಲಿಸಲು ಇಲಾಖೆಯ ಎಲ್ಲ ಸಿಬ್ಬಂದಿಯಲ್ಲಿ ಮನವಿ ಮಾಡಿಕೊಳ್ಳುತ್ತೇನೆ.'' ಎಂದು ಆರೋಗ್ಯ ಸಚಿವರು ಸ್ಪಷ್ಟನೆ ನೀಡಿದ್ದಾರೆ.

''ಅಂತ್ಯ ಸಂಸ್ಕಾರವನ್ನು ಸೂಕ್ತ ಹಾಗೂ ಸಕಲ ಗೌರವಗಳಿಂದ ನೆರವೇರಿಸುವುದು ನಮ್ಮ ಸಂಸ್ಕೃತಿ. ಸೋಂಕಿನಿಂದ ಮೃತಪಟ್ಟವರು ಎಂಬ ಕಾರಣಕ್ಕೆ ನಿರ್ಲಕ್ಷ್ಯ ಮಾಡದೆ ಸಲ್ಲಿಸಬೇಕಾದ ಗೌರವ ಸಲ್ಲಿಸೋಣ. ಮಾನವೀಯತೆ ಮೆರೆಯೋಣ'' ಎಂದು ಶ್ರೀರಾಮುಲು ಅಭಿಪ್ರಾಯ ಪಟ್ಟಿದ್ದಾರೆ.

ನಿನ್ನೆ ಬಳ್ಳಾರಿ ಒಂದೇ ಜಿಲ್ಲೆಯಲ್ಲಿ ಹೆಚ್ಚು ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದರು. ಹಾಗಾಗಿ, ಒಂದೇ ಕಡೆ ಶವಸಂಸ್ಕಾರ ಮಾಡುವಂತೆ ಜಿಲ್ಲಾಡಳಿತ ಸೂಚಿಸಿತ್ತು. ಆದರೆ, ಸಿಬ್ಬಂದಿವರ್ಗದವರು ಶವಸಂಸ್ಕಾರದ ವೇಳೆ ಒಂದೇ ಗುಂಡಿಗೆ ಎಲ್ಲ ಶವಗಳನ್ನು ಎಳೆದುಕೊಂಡು ಬಂದು ಬಿಸಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ವಿಪಕ್ಷಗಳು ಹಾಗೂ ಸಾರ್ವಜನಿಕರಿಂದ ತೀವ್ರ ಟೀಕೆಗೆ ಎದುರಾಗಿತ್ತು.

English summary
Karnataka CM Yediyurappa and Health minister sriramulu react about viral video of coronavirus patients funeral at ballari.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X