ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದಿಂದ 90 ಕೋಟಿ ರೂ ಬಿಡುಗಡೆ
ಬೆಂಗಳೂರು,ಜನವರಿ 13: ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿಗೆ 90 ಕೋಟಿ ರೂ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
ಕೊರೊನಾ ತಂದೊಡ್ಡಿರುವ ಆರ್ಥಿಕ ಸಂಕಷ್ಟದಲ್ಲಿಯೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ರೂ.25 ಕೋಟಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗಾಗಿ ರೂ.65 ಕೋಟಿಗಳನ್ನು ಬಿಡುಗಡೆಗೆ ಆದೇಶಿಸಲಾಗಿದೆ.
ಪ್ರಮಾಣವಚನ ಸ್ವೀಕರಿಸುವವರ ಹೆಸರು ಪ್ರಕಟಿಸಿದ ಸಿಎಂ ಯಡಿಯೂರಪ್ಪ!
ಇನ್ನು 3-4 ದಿನಗಳಲ್ಲಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಗೆ ಬಿಡುಗಡೆಯಾಗಿರುವ ಒಟ್ಟು ಅನುದಾನದಲ್ಲಿ ಬಹುತೇಕ ಭಾಗ ಕಟ್ಟಡ ನಿರ್ಮಾಣ ಹಾಗೂ ವೇತನಕ್ಕಾಗಿಯೇ ವೆಚ್ಚ ವಾಗುತ್ತಿದ್ದು ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಅನುದಾನ ಮೀಸಲಿರಿಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಇರುವ ಸಂಪ ನ್ಮೂಲಗಳಲ್ಲಿ ಹೆಚ್ಚಿನ ಆದಾಯ ಬರುವಂತಹ ಕಾರ್ಯಗಳಿಗೆ ಒತ್ತು ಕೊಡುವಂತೆ ಸಲಹೆ ನೀಡಿದ ಅವರು ಆದ್ಯ ತೆ ಮೇರೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳುವಂತೆ ಸೂಚಿಸಿದರು.
ಇಂದು ನಗರದ ಬನಶಂಕರಿಯಲ್ಲಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮಹಾದ್ವಾರ ಹಾಗೂ ಸಂಪನ್ಮೂಲ ಕೇಂದ್ರವನ್ನು ಉದ್ಘಾಟಿಸಿದ ನಂತರ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.