ಬಿಬಿಎಂಪಿ ಆಡಳಿತಾಧಿಕಾರಿಗೆ ಸಿಎಂ ಯಡಿಯೂರಪ್ಪ ದೂರವಾಣಿ ಕರೆ!

ಬೆಂಗಳೂರು, ಸೆ. 20: ಬೆಂಗಳೂರು ಮಹಾನಗರ ಹಾಗೂ ಉಡುಪಿ ಜಿಲ್ಲೆಯಲ್ಲಿ ಕುಂಭದ್ರೋಣ ಮಳೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ.

ಬೆಂಗಳೂರಿನಲ್ಲಿ‌ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತ ಅವರಿಗೆ ಕರೆ ಮಾಡಿ ರಾಜಕಾಲುವೆ, ತಗ್ಗು ಪ್ರದೇಶಗಳಲ್ಲಿರುವ ಬಡಾವಣೆಗಳಲ್ಲಿ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮಳೆಯ ಹಿನ್ನೆಲೆಯಲ್ಲಿ ಎಲ್ಲಾ ಅಧಿಕಾರಿಗಳು ಮಳೆ ಹಿನ್ನಲೆಯಲ್ಲಿ ಯಾವುದೇ ಕ್ಷಣದಲ್ಲಿ ಲಭ್ಯವಿರಬೇಕೆಂದು ಸೂಚಿಸಿದ್ದಾರೆ.

CM Yediyurappa called Officials and urged to take prompt action regarding rain problem

ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗಬಾರದು. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗಿರಿ. ಜನರಿಂದ ದೂರು ಬರುವವರೆಗೆ ಕಾಯಬೇಡಿ. ಸ್ಥಳಗಳಿಗೆ ಭೇಟಿಕೊಟ್ಟು ಪರಿಶೀಲನೆ ಮಾಡಿ ಎಂದು ಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತ ಅವರಿಗೆ ಯಡಿಯೂರಪ್ಪ ಸೂಚಿಸಿದ್ದಾರೆ.

CM Yediyurappa called Officials and urged to take prompt action regarding rain problem

ಉಡುಪಿ ಜಿಲ್ಲಾಧಿಕಾರಿಗೆ ಕರೆ: ಉಡುಪಿ ಜಿಲ್ಲೆಯಲ್ಲಿ‌ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಡುಪಿ ಜಿಲ್ಲಾಧಿಕಾರಿ ಗಳಿಗೆ ಕರೆ ಮಾಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ.

Recommended Video

      Corona ಲಸಿಕೆ ಭಾರತದಲ್ಲಿ ಉತ್ಪಾದನೆ ಆದ ಬಳಿಕ ಇರುವ ಸವಾಲುಗಳೇನು ? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+