ಕೆಂಪೇಗೌಡರ 46 ಪಾರಂಪರಿಕ ತಾಣ ಅಭಿವೃದ್ಧಿಗೆ 223 ಕೋಟಿ ಮೀಸಲು

ಬೆಂಗಳೂರು, ಜುಲೈ 07: ನಾಡಪ್ರಭು ಕೆಂಪೇಗೌಡರ ಕಾಲದ ಸುಮಾರು 46 ಪಾರಂಪರಿಕ ತಾಣಗಳ ಮೂರು ಸರ್ಕ್ಯೂಟ್‌ಗಳಲ್ಲಿ ಗುರುತಿಸಲಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿಯನ್ನು ಸಹ ದೃಷ್ಟಿಯಲ್ಲಿಟ್ಟುಕೊಂಡು ಈ ತಾಣಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿನ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿ ಪಡಿಸಲು ಯೋಜನಾ ವರದಿ ಸಿದ್ಧಪಡಿಸಲಾಗಿದೆ.

ಇದರಲ್ಲಿ 132 ಕೋಟಿ ರೂ, ವೆಚ್ಚದಲ್ಲಿ ಮಾಗಡಿ ಸರ್ಕ್ಯೂಟ್, 47 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಸರ್ಕ್ಯೂಟ್ ಹಾಗೂ 44 ಕೋಟಿ ರೂ. ವೆಚ್ಚದಲ್ಲಿ ನಂದಿ ಸರ್ಕ್ಯೂಟ್‌ಗಳನ್ನು ಅಭಿವೃದ್ಧಿಪಡಿಸಲು ಯೋಚನೆ ರೂಪಿಸಲಾಗಿದೆ.

CM Yediyurappa Directed To Development Of 46 Heritage Sites Belonging To Kempegowda-Era

ಕೆಂಪೇಗೌಡರ ಪ್ರತಿಮೆಯನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ64 ಕೋಟಿ ರೂ.ವೆಚ್ಚದಲ್ಲಿ 108 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪನೆಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

ಈ ಪ್ರತಿಮೆಯ ಸುತ್ತ ಥೀಮ್ ಪಾರ್ಕ್ ನಿರ್ಮಿಸಲು ಯೋಜನೆ ರೂಪಿಸಲಾಗುತ್ತಿದೆ, ರಾಮನಗರ ಜಿಲ್ಲೆಯ ಕೆಂಪಾಪುರ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡರ ವೀರ ಸಮಾಧಿ ಅಭಿವೃದ್ಧಿ ಕಾರ್ಯಕ್ಕೆ ಭೂಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಪರಿಕಲ್ಪನಾ ಯೋಜನೆ ಪ್ರಗತಿಯಲ್ಲಿದೆ.

ಕೆಂಪೇಗೌಡ ಜೀವನಾಧಾರಿತ, ಪುಸ್ತಕ, ಕಿರುಚಿತ್ರ ಸಿದ್ಧಪಡಿಸಲು ಹಾಗೂ ನಾಡಪ್ರಭು ಕೆಂಪೇಗೌಡರ ಆಡಳಿತಾವಧಿಯ ಕೋಟೆಗಳು, ಕೆರೆಗಳು ಮತ್ತು ಪಾರಂಪರಿಕ ತಾಣಗಳನ್ನು ಪ್ರವಾಸೋದ್ಯಮ ಇಲಾಖೆ, ಸಣ್ಣ ನೀರಾವರಿ, ಬಿಬಿಎಂಪಿ, ಲೋಕೋಪಯೋಗಿ ಇಲಾಖೆ, ಧಾರ್ಮಿಕ ದತ್ತಿ ಇಲಾಖೆ, ಅರಣ್ಯ, ತೋಟಗಾರಿಕೆ ಮತ್ತಿತರೆ ಇಲಾಖೆಗಳ ಸಹಯೋಗದೊಂದಿಗೆ ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಲು ಯೋಜನೆ ಸಿದ್ಧಪಡಿಸುವಂತೆ ನಿರ್ದೇಶನ ನೀಡಿದ್ದಾರೆ.

32 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ, ಈ ಯೋಜನೆಗೆ ಜಮೀನು ಕಳೆದುಕೊಳ್ಳುವ 46 ಕುಟುಂಬಗಳಿಗೆ ಪುನರ್ವಸತಿ, ರಸ್ತೆ ಅಭಿವೃದ್ಧಿ ಮತ್ತಿತರೆ ಮೂಲಸೌಕರ್ಯ ಒದಗಿಸುವ ಕುರಿತು ವ್ಯವಸ್ಥಿತ ಯೋಜನೆ ರೂಪಿಸಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Recommended Video

      ರುಚಿಕರ ಮೀನೂಟ ಸವಿದು ಫುಲ್ ಖುಷಿಯಾದ DK Shivakumar | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+