ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

ಬೆಂಗಳೂರು, ನವೆಂಬರ್ 13: ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಪತ್ರಕರ್ತ, ಬರಹಗಾರ ರವಿ ಬೆಳಗೆರೆ ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ. ಪತ್ರಕರ್ತರಾಗಿ, ಲೇಖಕರಾಗಿ, ನಿರೂಪಕರಾಗಿ ಜನಪ್ರಿಯತೆ ಗಳಿಸಿದ್ದ ಅವರು, ಶಿಕ್ಷಣ ಸಂಸ್ಥೆಯನ್ನೂ ನಡೆಸುತ್ತಿದ್ದರು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ, ಅಭಿಮಾನಿಗಳಿಗೆ, ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ರವಿ ಬೆಳಗೆರೆಯವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಕನ್ನಡ ಸಾಹಿತಿ, ಚಿತ್ರಕಥೆ ಬರಹಗಾರ, ಈ-ಟಿವಿ ಕನ್ನಡ ವಾಹಿನಿಯ ಜನಪ್ರಿಯ ಕ್ರೈಂ ಡೈರಿ ಕಾರ್ಯಕ್ರಮದ ನಿರೂಪಕರಾಗಿ ಹಾಗೂ ಜನಶ್ರೀ ವಾಹಿನಿಯ ಮುಖ್ಯಸ್ಥರಾಗಿ, ಕಾರ್ಯಕ್ರಮಗಳ ನಿರೂಪಕರಾಗಿ ಕಾರ್ಯ ನಿರ್ವಹಿಸಿದ್ದರು.

CM Yediyurappa Express Condolences To Families Of Journalist Ravi Belagere

ಕನ್ನಡದಲ್ಲಿ ಹಲವಾರು ಪುಸ್ತಕಗಳನ್ನು ಬರೆದಿರುವ ಮತ್ತು ಭಾಷಾಂತರಿಸಿರುವ ರವಿ ಬೆಳಗೆರೆ, ಭಾವನಾ ಪ್ರಕಾಶನ, ಭಾವನಾ ಆಡಿಯೋ ರೀಚ್ ಮತ್ತು ಪ್ರಾರ್ಥನಾ ಶಾಲೆ ಯ ಸಂಸ್ಥಾಪಕರು, ಹಾಯ್ ಬೆಂಗಳೂರ್' ಪತ್ರಿಕೆ ಪ್ರಾರಂಭಿಸುವ ಮುನ್ನ ಕರ್ಮವೀರ, ಸಂಯುಕ್ತ ಕರ್ನಾಟಕ ಮತ್ತು ಕಸ್ತೂರಿ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು.

ಅವರು 1995ರಲ್ಲಿ ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್‌ನ್ನು ಆರಂಭಿಸಿದ್ದರು. ಕಥಾಸಂಕಲನ, ಅನುವಾದ, ಅಂಕಣ ಬರಹಗಳು, ಜೀವನ ಕಥೆ ಸೇರಿ ಸುಮಾರು 70ಕ್ಕೂ ಹೆಚ್ಚು ಪುಸ್ತಕಗಳು ಇಲ್ಲಿಯವರೆಗೆ ಪ್ರಕಟಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+