ಕನ್ನಡದಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆದು ಪಾಸ್ ಆದ ದರ್ಶನ್ ಗೆ ಸಿಎಂ ಕರೆ
ಬೆಂಗಳೂರು, ಆಗಸ್ಟ್ 6: ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆದು 594ನೇ ಪಡೆದಿರುವ ದರ್ಶನ್ ಅವರಿಗೆ ಸಿಎಂ ಯಡಿಯೂರಪ್ಪ ದೂರವಾಣಿ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ.
Recommended Video
China ಹೊಸ Virus ಗೆ 7 ಮಂದಿ ಬಲಿ | Oneindia Kannada
ಮಣಿಪಾಲ್ ಆಸ್ಪತ್ರೆಯಿಂದಲೇ ಫೋನ್ ಮಾಡಿ ಮಾತನಾಡಿದ ಸಿಎಂ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ದರ್ಶನ್ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ದರ್ಶನ್ ಅವರನ್ನು ಅಭಿನಂದಿಸಿದ್ದಾರೆ ಎಂದು ಸಿಎಂ ಕಚೇರಿ ಟ್ವೀಟ್
ಯುಪಿಎಸ್ ಸಿ ಪರೀಕ್ಷೆಯಲ್ಲಿ 594ನೇ Rank ಪಡೆದುಕೊಂಡಿರುವ ದರ್ಶನ್, ಹಾಸನ ಜಿಲ್ಲೆಯ ಅರಸೀಕೆರೆ ತಾಲೊಕಿನ ಹರಳಕಟ್ಟೆ ಗ್ರಾಮದ ನಿವಾಸಿ.

ತಂದೆ ಗಂಗಾಧರಯ್ಯ ತಾಯಿ ಜಯಂತಿ. ಈ ದಂಪತಿಗಳು ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ಹಗರಿಗೊಮ್ಮನಹಳ್ಳಿ ರಾಷ್ಟ್ರೋತ್ಥಾನ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದು, ಬೆಂಗಳೂರಿನ ದಯಾನಂದ ಸಾಗರ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಿದ್ದಾರೆ.












Click it and Unblock the Notifications