ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ 19: ಪರಿಸ್ಥಿತಿ ಕೈಮೀರಲಿದೆ ಎಂದು ಎಚ್ಚರಿಸಿದ ಸಿಎಂ ಬಿಎಸ್‌ವೈ

|
Google Oneindia Kannada News

ಬೆಂಗಳೂರು, ಜೂ. 22: ಮುಂದಿನ 15 ದಿನಗಳಲ್ಲಿ ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣ ಮಾಡದಿದ್ದಲ್ಲಿ ಪರಿಸ್ಥಿತಿ ಕೈಮೀರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಮಹಾನಗರದಲ್ಲಿ ತೀವ್ರವಾಗಿ ಹೆಚ್ಚಾಗುತ್ತಿರುವ ಕೊರೊನಾ ವೈರಸ್‌ ಸೋಂಕಿನ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಸಭೆಯನ್ನು ಯಡಿಯೂರಪ್ಪ ನಡೆಸಿದ್ದಾರೆ.

Recommended Video

Galwan Faceoff : ಭಾರತ ಸೇನೆಗೆ ಬಂತು ಸೂಪರ್ ಪವರ್ | Full power For IAF & Army | Oneindia Kannadda

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ನಿಯಂತ್ರಣಕ್ಕೆ ಬಂದಿದ್ದ ಕೊರೊನಾ ವೈರಸ್ ಸೋಂಕು ಮತ್ತೆ ತೀವ್ರವಾಗಿ ಹರಡುತ್ತಿದೆ. ಕಳೆದ ಎರಡು ದಿನಗಳಲ್ಲಿ ಬರೊಬ್ಬರಿ 289 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ಮಹಾನಗರವೊಂದರಲ್ಲಿಯೇ ಈ ವರೆಗೆ ಒಟ್ಟು 338 ಕಂಟೇನ್ಮೆಂಟ್ ಝೋನ್‌ಗಳನ್ನು ಗುರುತಿಸಲಾಗಿದೆ.

ತೀವ್ರವಾಗಿ ಹರಡುತ್ತಿದೆ ಸೋಂಕು

ತೀವ್ರವಾಗಿ ಹರಡುತ್ತಿದೆ ಸೋಂಕು

ರಾಜ್ಯಾದ್ಯಂತ ಈವರೆಗೆ (ಜೂ.21ರ ವರದಿಯಂತೆ) 9,150 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಬೆಂಗಳೂರಿನಲ್ಲಿಯೇ 1,272 ಸೋಂಕಿತ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಕೊರೊನಾ ವೈರಸ್‌ಗೆ 137 ಜನರು ಸಾವಿಗೀಡಾಗಿದ್ದು, ಅವರಲ್ಲಿ ಬೆಂಗಳೂರು ಒಂದರಲ್ಲಿಯೇ 64 ಜನರು ಬಲಿಯಾಗಿದ್ದಾರೆ. ಜೊತೆಗೆ ಕೊರೊನಾ ವೈರಸ್‌ನಿಂದ ಗುಣಮುಖರಾಗುತ್ತಿರುವ ಸೋಂಕಿತರ ಪ್ರಮಾಣ ಕೂಡ ಬೆಂಗಳೂರಿನಲ್ಲಿ ಕಡಿಮೆಯಿದೆ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತುರ್ತು ಸಭೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್ ಆಗಿರುವ ಪ್ರದೇಶಗಳು?ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್ ಆಗಿರುವ ಪ್ರದೇಶಗಳು?

ಮುಂದಿನ 15 ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಣ ಮಾಡದಿದ್ದಲ್ಲಿ ಪರಿಸ್ಥಿತಿ ಕೈಮೀರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಹದಿನೈದು ದಿನಗಳಲ್ಲಿ ಅತಿ ಹೆಚ್ಚು ಮುನ್ನೆಚ್ಚರಿಕೆಯ ಕ್ರಮಗಳನ್ನು ವಹಿಸಬೇಕು, ಹಾಗಾದಲ್ಲಿ ಮಾತ್ರ ಸೋಂಕು ಹರಡುವ ಪ್ರಮಾಣವನ್ನು ನಿಯಂತ್ರಿಸಲು ಸಾಧ್ಯ ಎಂದು ಬಿಎಸ್‌ವೈ ಎಚ್ಚರಿಸಿದ್ದಾರೆ.

ಮತ್ತೆ ಲಾಕ್‌ಡೌನ್ ಜಾರಿ

ಮತ್ತೆ ಲಾಕ್‌ಡೌನ್ ಜಾರಿ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗಿರುವ ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಲಾಕ್‌ಡೌನ್ ಪ್ರಕ್ರಿಯೆಯನ್ನು ಕಟ್ಟು ನಿಟ್ಟಾಗಿ ಮತ್ತೆ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಕ್ವಾರಂಟೈನ್ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ. ಕ್ವಾರಂಟೈನ್ ನಿಯಮ ಮುರಿಯುವವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ

ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ 19 ಚಿಕಿತ್ಸೆಗೆ ದರ ನಿಗದಿ ಮಾಡಿ, ಸೋಂಕಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ಸಿಎಂ ಸೂಚನೆ ಕೊಟ್ಟಿದ್ದಾರೆ. ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಗಾಗಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಮತ್ತಿತರ ಸರ್ಕಾರಿ ಸಂಸ್ಥೆಗಳಲ್ಲಿ ಇರುವವರಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಆದೇಶ ಮಾಡಲಾಗಿದೆ.

ಕರ್ನಾಟಕದಲ್ಲಿ ಕ್ವಾರೆಂಟೈನ್ ನಿಯಮವೇ ಬದಲು; ಕಾರಣ ಇಲ್ಲಿದೆಕರ್ನಾಟಕದಲ್ಲಿ ಕ್ವಾರೆಂಟೈನ್ ನಿಯಮವೇ ಬದಲು; ಕಾರಣ ಇಲ್ಲಿದೆ

ಬೆಂಗಳೂರು ನಗರದಲ್ಲಿ ಯಾವುದೇ ಪರಿಸ್ಥಿತಿಯಲ್ಲೂ ಕೋವಿಡ್ 19 ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಬೆಂಗಳೂರಿನಲ್ಲಿ ಆರ್ಥಿಕ ಚಟುವಟಿಕೆಗಳು ಪುನರಾರಂಭವಾಗಿದ್ದು, ಈ ಚಟುವಟಿಕೆಗಳಿಗೆ ಧಕ್ಕೆಯಾಗದಂತೆ ಕೋವಿಡ್ 19 ನಿಯಂತ್ರಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ. ಕ್ವಾರಂಟೈನ್ ಉಲ್ಲಂಘನೆ ಮತ್ತು ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಸ್ವಯಂ ಸೇವಕರನ್ನೊಳಗೊಂಡ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕ್ಷಣಕ್ಷಣದ ಮಾಹಿತಿ

ಕ್ಷಣಕ್ಷಣದ ಮಾಹಿತಿ

ಕೋವಿಡ್ ವಾರ್ ರೂಂನಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕೊರೊನಾ ವೈರಸ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಹಾಸಿಗೆಗಳ ಕುರಿತು ಕ್ಷಣ ಕ್ಷಣದ ಮಾಹಿತಿ ಲಭ್ಯವಿರಬೇಕು. ಸೋಂಕಿತರಿಗೆ ವಿಳಂಬವಿಲ್ಲದೆ ಚಿಕಿತ್ಸೆ ಒದಗಿಸಲು ಕ್ರಮ ವಹಿಸಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ಕೊಡಲಾಗಿದೆ.

ವಿವಿಧ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಗೂ ಸೋಂಕಿತರು ಅಡ್ಮಿಟ್ ಆಗಿರುವ ಐಸಿಯು, ವೆಂಟಿಲೇಟರ್‌ಗಳ ಸಂಖ್ಯೆಯ ಪ್ರತಿಕ್ಷಣದ ಮಾಹಿತಿ ವಾರ್‌ರೂಂನಲ್ಲಿರಬೇಕು. ತುರ್ತು ಚಿಕಿತ್ಸೆ ಅಗತ್ಯವಿರುವ ಸೋಂಕಿತರನ್ನು ಕಳುಹಿಸಲು ಅದರಿಂದ ಅನುಕೂಲವಾಗಲಿದೆ ಎಂದು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಆರೋಗ್ಯ ಸಚಿವರೇ ಗೈರು!

ಆರೋಗ್ಯ ಸಚಿವರೇ ಗೈರು!

ರಾಜ್ಯದಲ್ಲಿ ಕೋವಿಡ್ ನಿಂಯತ್ರಿಸುವ ನಿಟ್ಟಿನಲ್ಲಿ ಸಿಎಂ ಕರೆದಿದ್ದ ಸಭೆಗೆ ಆರೋಗ್ಯ ಸಚಿವ ಶ್ರೀರಾಮುಲು ಅವರೇ ಗೈರಾಗಿದ್ದರು. ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್, ಪೊಲೀಸ್ ಆಯುಕ್ತ ಭಾಸ್ಕರ ರಾವ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

English summary
If we do not control the COVID-19 tnen situation to worsen in the next 15 days in the state, Chief Minister BS Yediyurappa has warned. Know more about cm meeting in Krishna
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X