ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಪುಟ ಸಂಕಟ: ಇಂದು ದೆಹಲಿಗೆ ಮುಖ್ಯಮಂತ್ರಿ ಯಡಿಯೂರಪ್ಪ!

|
Google Oneindia Kannada News

ಬೆಂಗಳೂರು, ಸೆ. 17: ಮಹತ್ವದ ಬೇಡಿಯನ್ನಿಟ್ಟುಕೊಂಡು ಐದು ತಿಂಗಳುಗಳ ಬಳಿಕ ಮೊದಲ ಬಾರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ದೆಹಲಿಗೆ ತೆರಳುತ್ತಿದ್ದಾರೆ. ಇಂದು ರಾತ್ರಿ ಅಥವಾ ನಾಳೆ ಹೈಕಮಾಂಡ್ ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ. ಹೀಗಾಗಿ ಸುದೀರ್ಘ ಐದು ತಿಂಗಳುಗಳ ಬಳಿಕ ಯಡಿಯೂರಪ್ಪ ಅವರು ಹೈಕಮಾಂಡ್ ಭೇಟಿ ಮಾಡುತ್ತಿರುವುದು ಮಹತ್ವ ಪಡೆದುಕೊಂಡಿದೆ.

ಅಧಿವೇಶನಕ್ಕೂ ಮೊದಲು ಸಂಪುಟ ವಿಸ್ತರಣೆ ಮಾಡು ಕಸರತ್ತಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಂದಾಗಿದ್ದಾರೆ ಎನ್ನಲಾಗಿದೆ. ಪರಿಷತ್ ಸದಸ್ಯರಾಗುವ ಮೂಲಕ ಅನರ್ಹತೆಯಿಂದ ಹೊರಗೆ ಬಂದಿರುವ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಆರ್. ಶಂಕರ್ ಹಾಗೂ ಎಚ್. ವಿಶ್ವನಾಥ್ ಅವರಿಗೆ ಕೊಟ್ಟ ಭರವಸೆಯನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಲ್ಲಿ ಯಡಿಯೂರಪ್ಪ ಇದ್ದಾರೆ. ಜೊತೆಗೆ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿದ್ದ 17 ಜನರ ಒತ್ತಡವೂ ಸಿಎಂ ಮೇಲೆ ಹೆಚ್ಚಾಗುತ್ತಿದೆ.

ಇಂದು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಿಎಂ ಯಡಿಯೂರಪ್ಪ ಅವರು ಭಾಗವಹಿಸಲಿದ್ದಾರೆ. ಕಲಬುರಗಿಯಿಂದಲೇ ವಿಶೇಷ ವಿಮಾನದಲ್ಲಿ ಮಧ್ಯಾಹ್ನ 1 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ದೆಹಲಿಯಲ್ಲಿಯೇ ಸಿಎಂ ಯಡಿಯೂರಪ್ಪ ಅವರು ಇರಲಿದ್ದಾರೆ.

Cm Yediyurappa Is Heading To Delhi From Kalaburgi To Finalize Karnataka Cabinet Expansion

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯ ಸರಿಯಿರದ ಕಾರಣ ಅವರನ್ನು ಯಡಿಯೂರಪ್ಪ ಭೇಟಿ ಮಾಡುತ್ತಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಬಿಜೆಪಿ ಹಿರಿಯ ನಾಯಕರನ್ನು ಸಿಎಂ ಯಡಿಯೂರಪ್ಪ ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಒತ್ತಡಗಳು ಹೆಚ್ಚಾಗುತ್ತಿರುವುದರಿಂದ, ಮಳೆಗಾಲದ ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆಗೆ ಅವಕಾಶವನ್ನು ಸಿಎಂ ಕೇಳಲಿದ್ದಾರೆ.

Recommended Video

ಉಪಮುಖ್ಯಮಂತ್ರಿ ಮಾಡು ಎಂದು ದೇವರಿಗೆ ಪತ್ರ ಬರೆದ B Sriramulu | Oneindia Kannada

ಜೊತೆಗೆ ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ರಾಜ್ಯದ ಜಿಎಸ್‌ಟಿ ಬಾಕಿ ಕುರಿತು ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ. ಹಾಗೆಯೆ ರಾಜ್ಯದಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ಹಾನಿಯ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ.

English summary
CM Yeddyurappa is heading to Delhi from Kalaburagi in the wake of the cabinet expansion. He will hold talks with the High Command on cabinet expansion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X