ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರಕು ಸಾಗಾಣಿಕೆ ಅಕ್ರಮ- ಸಾರಿಗೆ ಕಂಪೆನಿಗಳ ವಿರುದ್ಧ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

|
Google Oneindia Kannada News

ಬೆಂಗಳೂರು, ಜೂನ್ 6: ಇ-ವೇ ಬಿಲ್ ದುರ್ಬಳಕೆ ಮತ್ತಿತರ ಅಕ್ರಮ ಪತ್ತೆ ಹಚ್ಚಿ ದಂಡ ವಿಧಿಸುವುದರೊಂದಿಗೆ ಈ ಸರಕು ಸಾಗಾಣಿಕೆ ಮಾಡುವ ಸಾರಿಗೆ ಕಂಪೆನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.

Recommended Video

Sanitizer company claiming to destroy corona fined by high court| Devtol Sanitizer |Oneindia Kannada

ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ.ಎಸ್. ಶ್ರೀಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮುನ್ನೆಚ್ಚರಿಕೆಯೊಂದಿಗೆ ರೆಸ್ಟೋರೆಂಟ್ ತೆರೆಯಿರಿ- ಮುಖ್ಯಮಂತ್ರಿ ಸೂಚನೆಮುನ್ನೆಚ್ಚರಿಕೆಯೊಂದಿಗೆ ರೆಸ್ಟೋರೆಂಟ್ ತೆರೆಯಿರಿ- ಮುಖ್ಯಮಂತ್ರಿ ಸೂಚನೆ

ಯಡಿಯೂರಪ್ಪ ಇಂದು ವಾಣಿಜ್ಯ ತೆರಿಗೆ ಅಧಿಕಾರಿಗಳ ಸಭೆ ನಡೆಸಿ, ರಾಜ್ಯದ ತೆರಿಗೆ ಸಂಗ್ರಹ ಸ್ಥಿತಿಗತಿಯನ್ನು ಪರಿಶೀಲಿಸಿದ ಮುಖ್ಯಮಂತ್ರಿ ಈ ಕ್ರಮ ತೆಗೆದುಕೊಂಡರು. ಕಳೆದ ತಿಂಗಳು ಸಭೆ ನಡೆಸಿದ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ನಕಲಿ ಇ-ವೇ ಬಿಲ್ ಗಳ ಬಳಕೆ, ಸರಕು ಸಾಗಾಣಿಕೆಗೆ ನೀಡುವ ಸಮಯಾವಕಾಶದ ದುರ್ಬಳಕೆ ಮುಂತಾದ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು.

CM Yediyurappa Orders Strict Action Against Illegal Transport Companies

ಅದರಂತೆ, ರಸ್ತೆ ಜಾಗೃತಿ ತಂಡಗಳನ್ನು 77ರಿಂದ 116ಕ್ಕೆ ಹೆಚ್ಚಿಸಲಾಗಿದೆ. ಈ ತಂಡಗಳು 2.89 ಲಕ್ಷ ಸರಕು ವಾಹನಗಳು ಹಾಗೂ 7.46 ಲಕ್ಷ ಇ-ವೇ ಬಿಲ್ ಗಳನ್ನು ಪರಿಶೀಲಿಸಲಾಗಿದೆ. ಇದರಲ್ಲಿ ಸುಮಾರು 300 ಅಕ್ರಮಗಳು ಪತ್ತೆಯಾಗಿದ್ದು, 6.21 ಕೋಟಿ ರೂ. ತೆರಿಗೆ ಹಾಗೂ ದಂಡ ಸಂಗ್ರಹಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇದಲ್ಲದೆ, 40 ಲಕ್ಷ ರೂಪಾಯಿಗೂ ಹೆಚ್ಚಿನ ವ್ಯವಹಾರ ಇರುವ ಡೀಲರುಗಳ ಸಮೀಕ್ಷೆ ನಡೆಸುವಂತೆ ಹಾಗೂ ಮಾಸಿಕ 20 ಲಕ್ಷ ರೂ. ಗಳಿಗೆ ಹೆಚ್ಚು ಬಾಡಿಗೆ ಸಂಗ್ರಹಿಸುವ ದೊಡ್ಡ ನಗರಗಳ ವಾಣಿಜ್ಯ ಸಂಕೀರ್ಣಗಳ ಸಮೀಕ್ಷೆ ನಡೆಸುವಂತೆ ನಿರ್ದೇಶನ ನೀಡಿದರು.

ಕೇಂದ್ರ ಸರ್ಕಾರದಿಂದ 2019-20ನೇ ಸಾಲಿನ ಡಿಸೆಂಬರ್ ನಿಂದ ಫೆಬ್ರುವರಿ ತಿಂಗಳ ವರೆಗಿನ ಜಿ ಎಸ್ ಟಿ ಪರಿಹಾರ ಮೊತ್ತ 4314.13 ಕೋಟಿ ರೂ. ಬಿಡುಗಡೆಯಾಗಿದೆ. ಅಲ್ಲದೆ, ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಸಂಗ್ರಹದಲ್ಲಿ ಏರಿಕೆ ಕಂಡು ಬರುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

English summary
CM BS Yediyurappa orders to take strict action against illegal transport companies. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X