ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಲಾರಂಭ ಕುರಿತು ಸಿಎಂ ಯಡಿಯೂರಪ್ಪ ಮಹತ್ವದ ಹೇಳಿಕೆ

|
Google Oneindia Kannada News

ಬೆಂಗಳೂರು, ನವೆಂಬರ್ 23: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶಾಲಾರಂಭ ವಿಚಾರ ಕುರಿತು ಸಚಿವರು, ಉನ್ನತ ಅಧಿಕಾರಿಗಳ ಸಭೆ ನಡೆಸಲಾಯಿತು.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಶಾಲೆ ಆರಂಭಿಸುವ ಕುರಿತು ಇಂದು ಮಹತ್ವದ ಸಭೆ ಮಾಡುತ್ತಿದ್ದೇವೆ. ಎಲ್ಲರ ಅಭಿಪ್ರಾಯ, ಸಲಹೆಗಳನ್ನು ಪಡೆಯುತ್ತೇವೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಶಾಲೆ ಪುನರಾರಂಭ ಸೂಕ್ತವಲ್ಲ ತಜ್ಞರ ಅಭಿಪ್ರಾಯ ಕರ್ನಾಟಕದಲ್ಲಿ ಶಾಲೆ ಪುನರಾರಂಭ ಸೂಕ್ತವಲ್ಲ ತಜ್ಞರ ಅಭಿಪ್ರಾಯ

ಶಾಲೆ ಆರಂಭಿಸುವ ಬಗ್ಗೆ ಎಲ್ಲರ ಅಭಿಪ್ರಾಯ ಪಡೆದು ಚರ್ಚೆ ಮಾಡುತ್ತೇವೆ. ಇಂದಿನ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಏನಿರುತ್ತದೆ ಎಂಬುದನ್ನು ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

Bengaluru: CM Yediyurappa Reacted About Schools Reopning Meeting

ಶಾಲಾರಂಭದ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸಭೆ ಆರಂಭವಾಗಿದ್ದು, ವಿವಿಧ ಇಲಾಖಾ ಮುಖ್ಯಸ್ಥರು ಉಪಸ್ಥಿತರಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯುತ್ತಿದೆ. ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಸೇರಿದಂತೆ 8 ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.

ಮಾಜಿ ಸಚಿವ ರೋಷನ್ ಬೇಗ್ ಅವರ ಸಿಬಿಐ ಬಂಧನ ವಿಚಾರವಾಗಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿ, ರೋಷನ್ ಬೇಗ್ ಬಂಧನ ಬಗ್ಗೆ ನಾನೇನು ಹೇಳಲಿ? ಎಂದು ಮರು ಪ್ರಶ್ನಿಸಿದರು.

ಕಾನೂನು ಏನಿದೆಯೋ ಅದರಂತೆ ಸಿಬಿಐ ಕ್ರಮ ತೆಗೆದುಕೊಳ್ಳುತ್ತಾರೆ, ಹಾಗಾಗಿ ಕಾನೂನಿಗಿಂತ ಯಾರೂ ಮೇಲಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

Recommended Video

ಮನ್ಸೂರ್ ವಿಡಿಯೋ ಅಲ್ಲಿ ಹೇಳಿರೋದಾದ್ರು ಏನು? | Oneindia Kannada

ಐಎಂಎ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಭಾನುವಾರ ರಾತ್ರಿ ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿದೆ.

English summary
Chief Minister BS Yeddyurappa's official residence at Cauveri was attend by a meeting of ministers and top officials on Schools Reopning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X