ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅತ್ಯಾಚಾರಿ ಆರೋಪಿಗಳಿಗೆ ಕಠಿಣ ಶಿಕ್ಷೆ; ಸಿಎಂ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಮೇ 28: ರಾಜಧಾನಿ ಬೆಂಗಳೂರಿನಲ್ಲಿ ಬಾಂಗ್ಲಾದೇಶ ಮೂಲದ ಯುವತಿಯ ಮೇಲೆ ಆರು ಜನ ಸಾಮೂಹಿಕ ಅತ್ಯಾಚಾರ ಮಾಡಿ, ವಿಕೃತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇದು ಅಮಾನುಷ ಕೃತ್ಯವಾಗಿದ್ದು, ಇದನ್ನು ಯಾರೂ ಕೂಡ ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

Breaking: ಬೆಂಗಳೂರು ಗ್ಯಾಂಗ್ ರೇಪಿಸ್ಟ್‌ಗಳ ಮೇಲೆ ಫೈರಿಂಗ್Breaking: ಬೆಂಗಳೂರು ಗ್ಯಾಂಗ್ ರೇಪಿಸ್ಟ್‌ಗಳ ಮೇಲೆ ಫೈರಿಂಗ್

ಯುವತಿ ಮೇಲಿನ ಅತ್ಯಾಚಾರ ಕೃತ್ಯವೆಸಗಿದವರಿಗೆ ತಕ್ಕ ಶಿಕ್ಷೆಯಾಗಲಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

CM Yediyurappa Reaction To Bengaluru Gang Rape Case

ಬೆಂಗಳೂರಿನ ಮಹಿಳೆಯೋರ್ವರ ಸಹಾಯದಿಂದ ಆರು ಮಂದಿ ಆರೋಪಿಗಳು ಬಾಂಗ್ಲಾದೇಶದ 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ತಮ್ಮ ಕ್ರೌರ್ಯವನ್ನು ಚಿತ್ರೀಕರಿಸಿಕೊಂಡು ವೈರಲ್ ಮಾಡಿದ್ದಾರೆ. ಈ ಸಂಬಂಧ ಬಾಂಗ್ಲಾದೇಶದ ಸಾಗರ್, ಮೊಹಮ್ಮದ್ ಬಾಬಾ ಶೇಖ್, ರಿದಾಯ್ ಬಾಬು ಹಾಗೂ ಹೈದರಾಬಾದ್‌ನ ಹಕೀಲ್ ಎಂಬುವರನ್ನು ಬಂಧಿಸಲಾಗಿದೆ.

ಇಂದು ಅತ್ಯಾಚಾರ ಮಾಡಿದ ಸ್ಥಳ ಪರಿಶೀಲನೆಗೆ ಆರೋಪಿಗಳಾದ ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹಕೀಲ್ ಅವರನ್ನು ಕರೆದುಕೊಂಡು ಹೋದಾಗ, ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಪ್ರಯತ್ನಿಸಿದ್ದಾರೆ. ನಂತರ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದಾಗ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ.

CM Yediyurappa Reaction To Bengaluru Gang Rape Case

ಇಂದು ಬೆಳಿಗ್ಗೆ ಸ್ಥಳ ಮಹಜರು ಮಾಡುವಾಗ ಹಲ್ಲೆ ಮಾಡಿ ತಪ್ಪಿಸಿಕೊಳ್ಳುವ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳಾದ ರಿದಾಯ್ ಬಾಬು ಮತ್ತು ಸಾಗರ್‌ ಮೇಲೆ ಫೈರಿಂಗ್ ಮಾಡಿದ್ದಾರೆ.

Recommended Video

ಕೊರೊನಾದಿಂದ ಮೃತಪಟ್ಟ ವ್ಯಕ್ತಿಯಿದ್ದ ಆಂಬುಲೆನ್ಸ್ ಚಾಲನೆ ಮಾಡಿದ Renukacharya | Oneindia Kannada

ಇನ್ನು ಪ್ರತಿ ಜಿಲ್ಲೆಯಲ್ಲಿ ಒಂದು ವಾರ ಅಥವಾ ಹದಿನೈದು ದಿನಕ್ಕೊಮ್ಮೆ ಹೋಗಿ ಸಭೆ ಮಾಡಲು ಯೋಚನೆ ಮಾಡಿದ್ದೇನೆ. ಇವತ್ತು ತುಮಕೂರಿಗೆ ಹೋಗಿ ಅಲ್ಲಿ ಕೋವಿಡ್ ಸ್ಥಿತಿಗತಿ ಬಗ್ಗೆ ಸಭೆ ಮಾಡುತ್ತೇವೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

English summary
CM Yediyurappa has responded to the rape case of a young woman in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X