ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಸ್ಪತ್ರೆಗಳಲ್ಲಿ ಬೆಡ್ ಲಾಕ್ ವಿಚಾರ, ಸಿಎಂ ಯಡಿಯೂರಪ್ಪ ಹೇಳಿದ್ದೇನು?

|
Google Oneindia Kannada News

ಬೆಂಗಳೂರು, ಮೇ 04: ಆಸ್ಪತ್ರೆಗಳಲ್ಲಿ ಅಕ್ರಮವಾಗಿ ಬೆಡ್ ಬುಕಿಂಗ್ ಮಾಡಲಾಗುತ್ತಿದೆ ಎನ್ನುವ ಸಂಸದ ತೇಜಸ್ವಿ ಸೂರ್ಯ ಆರೋಪಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು ಸಂಸದರು ವಾರ್ ರೂಂ ನಲ್ಲಿ ಬೆಡ್ ಹಂಚಿಕೆ ಪ್ರಕರಣ ಬಯಲಿಗೆ ತಂದಿದ್ದಾರೆ, ತೇಜಸ್ವಿ ಸೂರ್ಯ ಜೊತೆ ಕೂತು ಚರ್ಚೆ ಮಾಡ್ತೇನೆ, ಬೆಡ್ ಲಾಕ್ ದಂಧೆ ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇನೆ.

ಬೆಡ್ ಬ್ಲಾಕಿಂಗ್ ಅವ್ಯವಹಾರ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಅವ್ಯವಹಾರ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ

ಅಂಥವರ ವಿರುದ್ಧ ತುರ್ತಾಗಿ ಕ್ರಮಕ್ಕೆ ಮುಂದಾಗುತ್ತೇವೆ, ಎಷ್ಟೇ ದೊಡ್ಡವರಿದ್ದರೂ ಕ್ರಮ ತೆಗೆದುಕೊಳ್ಳುತ್ತೇವೆ, ತೇಜಸ್ವಿ ಸೂರ್ಯ ಬಳಿ ವಾಸ್ತವಿಕ ಮಾಹಿತಿ ಪಡೆಯುತ್ತೇನೆ, ಮಾಹಿತಿ ಪಡೆದುಕೊಂಡು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

CM Yediyurappa Reaction To MP Tejasvi Suryas Hospital Bed Lock Allegation

ಮೇ.04 ರಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿರುವ ಸಂಸದ ತೇಜಸ್ವಿ ಸೂರ್ಯ, ಅಕ್ರಮವಾಗಿ ಬಿಬಿಎಂಪಿ ಬೆಡ್ ಗಳು ಅಕ್ರಮವಾಗಿ ಬುಕ್ ಆಗುತ್ತಿರುವುದನ್ನು ಬಹಿರಂಗಪಡಿಸಿದ್ದು, ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.

ಕಳೆದ 1 ತಿಂಗಳ ಅವಧಿಯಲ್ಲಿನ 10 ಸಾವಿರಕ್ಕೂ ಅಧಿಕ ರೋಗಿಗಳಿಗೆ ಬೆಡ್ ಹಂಚಿಕೆ, ವಿಧಾನ, ಸಮಯವನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ ಬೆಂಗಳೂರು ದಕ್ಷಿಣ ಸಂಸದರ ಕಚೇರಿ ಬಿಬಿಎಂಪಿ ಅಧಿಕಾರಿಗಳು, ಆಸ್ಪತ್ರೆಗಳ ಹಾಗೂ ವಲಯವಾರು ಸಹಾಯವಾಣಿ ಸಿಬ್ಬಂದಿಗಳ ಅವ್ಯವಹಾರವನ್ನು ಬಯಲಿಗೆಳೆದಿದೆ.

ತನಿಖೆ ನಡೆಸಿದಾಗ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಮಿತ್ರ ಸಿಬ್ಬಂದಿ ಬಿಬಿಎಂಪಿ ಹೆಲ್ಪ್ ಲೈನ್ ಹಾಗೂ ಬೆಡ್ ಹಂಚಿಕೆಗೆ ನಿಯುಕ್ತರಾಗಿರುವ ಸಿಬ್ಬಂದಿಗಳು ಕೆಲವು ಖಾಸಗಿ ಆಸ್ಪತ್ರೆಗಳು ಸೇರಿ ಕೃತಕ ಬೆಡ್ ಅಭಾವ ಸೃಷ್ಟಿಸಿ ಸಾರ್ವಜನಿಕರ ಜೀವಗಳ ಜೊತೆ ಚೆಲ್ಲಾಟ ಆಡುತ್ತಿರುವುದು ಕಂಡುಬಂಡಿದೆ ಎಂದು ಹೇಳಿದ್ದರು.

English summary
Karnataka Chief Minister Yediyurappa Reaction To MP Tejasvi Surya's Hospital Bed Lock Allegation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X