ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರೀಕ್ಷೆ ಬರೆಯುವ ಮುನ್ನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಿಎಂ ಸೂಚನೆ

|
Google Oneindia Kannada News

ಬೆಂಗಳೂರು, ಜೂನ್ 24: ನಾಳೆಯಿಂದ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಕೊರೊನಾ ನಡುವೆ ರಾಜ್ಯ ಸರ್ಕಾರ ಪರೀಕ್ಷೆ ನಡೆಸಲು ಮುಂದಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಟ್ವೀಟ್ ಮಾಡಿ ಶುಭಾಶಯ ತಿಳಿಸಿದ್ದಾರೆ. ''ನಾಳೆಯಿಂದ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಶುಭ ಹಾರೈಕೆಗಳು . ಕೊರೊನ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿದ್ದ ಪರೀಕ್ಷೆ ಸುಸೂತ್ರವಾಗಿ ನಡೆಯಲು ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನೂ ಮಾಡಿದೆ.'' ಎಂದಿದ್ದಾರೆ.

CM Yediyurappa Requests SSLC Students to Follow Guidelines Strictly

ಶುಕ್ರವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಸೂಚನೆಗಳುಶುಕ್ರವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಸೂಚನೆಗಳು

''ವಿದ್ಯಾರ್ಥಿಗಳೇ, ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸಿ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. ಸರ್ಕಾರ ಪರೀಕ್ಷೆ ನಡೆಸಲು ಹೊರಡಿಸಿರುವ ಮಾರ್ಗಸೂಚಿ ಗಳನ್ನು ಪಾಲಿಸಿ. ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನು ಆತಂಕ & ಭಯವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ, ಯಶಸ್ಸು ಪಡೆಯಿರಿ. ಉಜ್ವಲ ಭವಿಷ್ಯ ನಿಮ್ಮದಾಗಲಿ.'' ಎಂದು ಯಡಿಯೂರಪ್ಪ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಲಿವೆ. ಈ ಬಾರಿ 8,48,203 ಮಕ್ಕಳು ಪರೀಕ್ಷೆ ಬರೀತಿದಾರೆ. 2879 ಪರೀಕ್ಷೆ ಕೇಂದ್ರಗಳು ತಾಂತ್ರಿಕ‌ ಸಲಹಾ ಸಮಿತಿ ಮಾರ್ಗದರ್ಶನ ಮಾಡಿದೆ. ಎಲ್ಲ ಸುರಕ್ಷತೆ ಕೈಗೊಂಡು ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಒಂದು ಹಾಲ್‌ನಲ್ಲಿ ಕೇವಲ 18 ವಿದ್ಯಾರ್ಥಿಗಳು ಕೂರುತ್ತಾರೆ. ಪ್ರತಿಯೊಬ್ವರೂ ಮಾಸ್ಕ್ ಧರಿಸಿ ಪರೀಕ್ಷೆ ಬರೀತಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

English summary
Chief minister of karnataka Yediyurappa Requests SSLC Students to Follow Guidelines Strictly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X