ಬೆಂಗಳೂರು ಮೆಟ್ರೊ ಸೇವೆ ಶೀಘ್ರ ಪುನರಾರಂಭ

ಬೆಂಗಳೂರು, ಆ. 27: ಕೊರೊನಾ ವೈರಸ್ ಹಾಗೂ ಲಾಕ್‌ಡೌನ್‌ನಿಂದಾಗಿ ಬೆಂಗಳೂರು ಮೆಟ್ರೊ ಸೇವೆ ನಿಂತು 5 ತಿಂಗಳುಗಳಿಗೂ ಹೆಚ್ಚು ಕಾಲವಾಗಿದೆ. ಇದೀಗ ಮೆಟ್ರೊ ಪ್ರಯಾಣಿಕರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಹಿಸುದ್ದಿ ಕೊಟ್ಟಿದ್ದಾರೆ. ಶೀಘ್ರದಲ್ಲಿಯೇ ಬೆಂಗಳೂರು ಮೆಟ್ರೊ ಸೇವೆಯನ್ನು ಪುನರ್ ಆರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.

Recommended Video

      ಕರ್ನಾಟಕದ ಸೂಪರ್ CM ಇವರೇ ಅಂತೆ..! | Oneindia Kannada

      ನಗರದ ಆನಂದ್ ರಾವ್ ವೃತ್ತದಲ್ಲಿ ವೃತ್ತದಲ್ಲಿನ ಮೇಲ್ಸೆತುವೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೇಲ್ಸೆತುವೆ ಎಂದು ನಾಮಕರಣ ಮಾಡಿದ ಬಳಿಕ ಅವರು ಮಾತನಾಡಿದರು. ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಮೆಟ್ರೊ ಸೇವೆ ಪುನರ್ ಆರಂಭಿಸಲಾಗುವುದು ಎಂದಿದ್ದಾರೆ.

      ಇನ್ನು ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ಸ್ವಾಮೀಜಿಗಳನ್ನು ಭೇಟಿ ಮಾಡಿನ ಚರ್ಚೆ ಮಾಡಿದ್ದೇನೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದ್ದೇನೆ. ಇಂದು ಸಚಿವರು ಸಭೆ ಮಾಡಿ ಗೊಂದಲ ಪರಿಹಾರ ಮಾಡುತ್ತಾರೆಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

      CM Yediyurappa said the Namma Bengaluru Metro service would be restarted soon

      ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯ ದಿನ ರಾಯಣ್ಣ ಹುಟ್ಟಿದ ದಿನವೂ ಹೌದು. ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಉಸಿರುರುವ ತನಕ ಹೋರಾಡಿದವರು ರಾಯಣ್ಣ ಎಂದರು. ಜೊತೆಗೆ ಬೆಂಗಳೂರಿನ ಮೂಲಭೂತ ಸೌಕರ್ಯಗಳ ಸುಧಾರಣೆ ನಮ್ಮ ಗುರಿ. ವಾಹನ ದಟ್ಟಣೆ ನಿವಾರಿಸಲು ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಸಹಾಯಕಾರಿಯಾಗುತ್ತದೆ ಎಂದು ಹೇಳಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+